ಬೆಂಗಳೂರು:
ಹೈಕೋರ್ಟ್ ಪೀಠವು ಮಹತ್ವದ ಆದೇಶ ಹೊರಡಿಸಿದ್ದು, ಶಿವರಾಮ ಕಾರಂತ ಬಡಾವಣೆಯಲ್ಲಿ (Shivram karanth Layout) ಸದ್ಯಕ್ಕೆ ನಿವೇಶನ ಹಂಚಿಕೆ ಇಲ್ಲ. ಯಥಾಸ್ಥಿತಿ ಕಾಯ್ದುಕೊಳ್ಳಲು ಸೂಚನೆ ನೀಡಿದೆ.
ನ್ಯಾ. ಕೃಷ್ಣ ಎಸ್.ದೀಕ್ಷಿತ್ ಮತ್ತು ನ್ಯಾ.ನಾಗಪ್ರಸನ್ನ ಅವರಿದ್ದ ಪೀಠ ಆದೇಶಿಸಲಾಗಿದೆ. ಶಿವರಾಮ ಕಾರಂತ ಬಡಾವಣೆ ಅಭಿವೃದ್ಧಿ ಕಾಮಗಾರಿ ಮುಂದುವರಿಸಲು ಅಸ್ತು ಎನ್ನಲಾಗಿದೆ. ಸಮಸ್ಯೆಗಳನ್ನು ಪರಿಹರಿಸದೆ ಬಿಡಿಎಯಿಂದ ನಿವೇಶನ ಹಂಚಿಕೆ ಆರೋಪ ಮಾಡಿದ್ದು, ಹಲವರು ಸುಪ್ರೀಂಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಸುಪ್ರೀಂಕೋರ್ಟ್ ಅರ್ಜಿಗಳನ್ನು ಹೈಕೋರ್ಟ್ಗೆ ವರ್ಗಾಯಿಸಿತ್ತು.
ಶಿವರಾಮ ಕಾರಂತ ಬಡಾವಣೆಯ ದಾಖಲೆ ಸಮಿತಿ ಬಳಿ ಇರುವ ಹಿನ್ನೆಲೆ ಸಮಿತಿ ದಾಖಲೆಗಳನ್ನು ಬಿಡಿಎಗೆ ಹಸ್ತಾಂತರಿಸದೇ ಇಟ್ಟುಕೊಂಡಿದೆ. ದಾಖಲೆಯಿರುವ ಕೊಠಡಿ ಬೀಗದ ಕೀ ಸಮಿತಿಯ ಬಳಿ ಇದೆ ಎಂದು ಬಿಡಿಎ ವಾದ ಮಂಡಿಸಿದೆ. ದಾಖಲೆಯಿರುವ ಕೊಠಡಿಗೆ ಮತ್ತೊಂದು ಬೀಗ ಹಾಕಿ ಕೀ ನೀಡುವಂತೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ಗೆ ಪೀಠ ಸೂಚನೆ ನೀಡಿದೆ ಎಂದು ಹೇಳಲಾಗಿದೆ.