Home High Court/ಹೈಕೋರ್ಟ್ Karnataka High Court: It is impossible to implement Ashraya scheme | ರಾಜ್ಯ...

Karnataka High Court: It is impossible to implement Ashraya scheme | ರಾಜ್ಯ ಸರ್ಕಾರದ ಆಶ್ರಯ ಯೋಜನೆ ಜಾರಿ ಅಸಾಧ್ಯ – ಹೈಕೋರ್ಟ್

29
0
Karnataka High Court

ಬೆಂಗಳೂರು:

ಆಶ್ರಯ ಯೋಜನೆ ಜಾರಿ ಮಾಡುವುದಕ್ಕೆ ಅವಕಾಶವಿಲ್ಲ ಎಂದು ಹೈಕೋರ್ಟ್ ಹೇಳಿದೆ. ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.

ಈ ಸಂಬಂಧ ಡಾ.ಬಿ.ಆರ್.ಅಂಬೇಡ್ಕರ್ ದಲಿತ ಮತ್ತು ಹಿಂದುಳಿದ ಅಲ್ಪ ಸಂಖ್ಯಾತರ ಗ್ರಾಮಾಭಿವೃದ್ಧಿ ಸಂಘ ಮತ್ತು ಕರ್ನಾಟಕ ಸರ್ಕಾರ ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿರುವ ಹೈಕೋರ್ಟ್​, ಸಂವಿಧಾನದ 162ನೇ ವಿಧಿಯ ಅಡಿ ಲಭ್ಯವಾದ ಕಾರ್ಯಕಾರಿ ಅಧಿಕಾರ ಬಳಕೆ ಮಾಡಿ ರಾಜ್ಯ ಸರ್ಕಾರವು ಆಶ್ರಯ ಯೋಜನೆ ರೂಪಿಸಿದೆ.

ಸರ್ಕಾರವು ತನ್ನ ಅಧಿಕಾರ ವ್ಯಾಪ್ತಿ ಮೀರಿ ಆಶ್ರಯ ಯೋಜನೆ ರೂಪಿಸಿದೆ. ಇದರಿಂದ ಯೋಜನೆಯನ್ನು ಜಾರಿ ಮಾಡಲಾಗದು ಮತ್ತು ಯೋಜನೆಯನ್ನು ರದ್ದುಪಡಿಸಲಾಗಿದೆ ಎಂದು ತಿಳಿಸಿದೆ.

ಅಲ್ಲದೇ, ಈ ಕಾನೂನಿನ ಘೋಷಣೆಯು ಗಂಗಾಜಲದಂತೆ ಸ್ಪಷ್ಟವಾಗಿರುವ ಕಾರಣ, ಆಶ್ರಯ ಯೋಜನೆಯಡಿ ಮೇಲ್ಮನವಿದಾರರಿಗೆ ಯಾವುದೇ ಪರಿಹಾರ ಕಲ್ಪಿಸಲಾಗುವುದಿಲ್ಲ ಎಂದು ವಿಭಾಗೀಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here