Karnataka High Court allowed inquiry into POCSO cases against Muruga Shri | ಮುರುಘಾ ಶ್ರೀ ವಿರುದ್ಧದ ಅತ್ಯಾಚಾರ, ಪೊಕ್ಸೋ ಪ್ರಕರಣಗಳ ವಿಚಾರಣೆಗೆ ಹೈಕೋರ್ಟ್ ಅನುಮತಿ
ಬೆಂಗಳೂರು:
ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾಶ್ರೀ ಬಂಧನ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಅಲ್ಲದೆ, ಸ್ವಾಮೀಜಿಯನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ಆದೇಶಿಸಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು ಬಿಡುಗಡೆ ಮಾಡಲಾಗಿದೆ.
ಹೈಕೋರ್ಟ್ ಆದೇಶದ ಬೆನ್ನಲ್ಲೇ ಶರಣರು ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ಮೂರು ಗಂಟೆಯಲ್ಲಿ ಕಾರಾಗೃಹದಿಂದ ಹೊರಬಂದರು.
ಚಿತ್ರದುರ್ಗ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಹಾಗೂ ವೀಡಿಯೊ ಕಾನ್ಫರೆನ್ಸ್ ಮೂಲಕ ಹಾಜರಿಗೆ ಹೈಕೋರ್ಟ್ ಅವಕಾಶ ನೀಡಿದ್ದರೂ, ಸೋಮವಾರ ಮತ್ತೆಬಂಧನಕ್ಕೊಳಪಡಿಸಿದ್ದ ಕ್ರಮವನ್ನು ಪ್ರಶ್ನಿಸಿ ಮುರುಘಾ ಶರಣರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ನ್ಯಾಯಪೀಠ, ಅರ್ಜಿದಾರರನ್ನು ಶೀಘ್ರದಲ್ಲಿ ಬಿಡುಗಡೆ ಮಾಡಬೇಕು ಎಂದು ಆದೇಶಿಸಿತ್ತು.
ಇಂದು (ಸೋಮವಾರ) ಮಧ್ಯಾಹ್ನ ಬಂಧನ ಪೊಕ್ಸೊ ಪ್ರಕರಣ ಸಂಬಂಧ ಚಿತ್ರದುರ್ಗದ ಎರಡನೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಬಂಧನ ವಾರೆಂಟ್ ಹೊರಡಿಸಿದ್ದ ಹಿನ್ನೆಲೆ ಮುರುಘಾ ಶರಣರನ್ನು ಸೋಮವಾರ ಮಧ್ಯಾಹ್ನ ಚಿತ್ರದುರ್ಗ ಗ್ರಾಮೀಣ ಪೊಲೀಸರು ದಾವಣಗೆರೆಗೆ ತೆರಳಿ ಶರಣರನ್ನು ಬಂಧಿಸಿದ್ದರು.
