Home High Court/ಹೈಕೋರ್ಟ್ 5-8 ನೇ ತರಗತಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಅನುಮತಿ 

5-8 ನೇ ತರಗತಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಅನುಮತಿ 

105
0
Karnataka High Court

ಬೆಂಗಳೂರು:

5-8 ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವುದಕ್ಕೆ ಹೈಕೋರ್ಟ್ ನ ವಿಭಾಗೀಯಪೀಠ ಅನುಮತಿ ನೀಡಿದೆ. 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದುಗೊಳಿಸಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು.

10 ದಿನಗಳ ಬಳಿಕ ಅಂದರೆ ಮಾ.27 ರಿಂದ ಪರೀಕ್ಷೆ ನಡೆಸಲು ಹೈಕೋರ್ಟ್ ಸೂಚನೆ ನೀಡಿದ್ದು, ಪಠ್ಯಕ್ರಮ ಬಿಟ್ಟು ಬೇರೆ ಪ್ರಶ್ನೆ ಕೇಳವಂತಿಲ್ಲ ಫಲಿತಾಂಶವನ್ನು ಸಾರ್ವಜನಿಕವಾಗಿ ಪ್ರಕಟಿಸುವಂತಿಲ್ಲ. ಶಾಲೆಗೆ ಮಾತ್ರವೇ ಕಳಿಸಬೇಕು ಎಂದು ಹೈಕೋರ್ಟ್ ಸೂಚನೆ ನೀಡಿದೆ.

5-8 ನೇ ತರಗತಿ ಪರೀಕ್ಷೆ ನಡೆಸಲು ಶಿಕ್ಷಣ ಕಾಯ್ದೆಯಡಿ ನಿರ್ಬಂಧವಿಲ್ಲ ಆದ್ದರಿಂದ ಪರೀಕ್ಷೆ ರದ್ದುಗೊಳಿಸಿದ್ದ ಏಕಸದಸ್ಯ ಪೀಠದ ಆದೇಶವನ್ನು ವಿಭಾಗೀಯ ಪೀಠ ರದ್ದುಗೊಳಿಸಿದ್ದು ಪರೀಕ್ಷೆ ನಡೆಸಬಹುದೆಂದು ಆದೇಶ ನೀಡಿದೆ.

LEAVE A REPLY

Please enter your comment!
Please enter your name here