ಬೆಂಗಳೂರು: ಬಿಜೆಪಿ ವಿರುದ್ಧ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಸಲ್ಲಿಸಿದ್ದ ಮಾನಹಾನಿ ಕೇಸ್ ರದ್ದತಿಗೆ ಹೈಕೋರ್ಟ್ ನಕಾರ ಎತ್ತಿದೆ.
ನಕಲಿ ವೋಟರ್ ಐಡಿ ಕುರಿತಂತೆ ಭಾರತೀಯ ಜನತಾ ಪಕ್ಷ 2019ರ ಟ್ವೀಟ್ ಮಾಡಿತ್ತು. ಆ ಟ್ವೀಟ್ನಿಂದ ಮಾನಹಾನಿಯಾಗಿದೆ ಎಂದು ಬಿಜೆಪಿ ವಿರುದ್ಧ ಶಾಸಕ ರಿಜ್ವಾನ್ ಅರ್ಷದ್ ದೂರು ದಾಖಲಿಸಿದ್ದರು. ಈ ಕೇಸ್ ಪ್ರಶ್ನಿಸಿ ಅಂದಿನ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಅರ್ಜಿ ಸಲ್ಲಿಸಿದ್ದರು.
ಗುರುವಾರ ವಿಚಾರಣೆ ನಡೆಸಿದ ಹೈಕೋರ್ಟ್ ರಾಜಕೀಯ ಪಕ್ಷದ ವಿರುದ್ಧ ಕೇಸ್ ಮುಂದುವರಿಸಬಹುದು ಎಂದು ಅಭಿಪ್ರಾಯಪಟ್ಟಿದ್ದು, ಕೇಸ್ ರದ್ದುಪಡಿಸಲು ನ್ಯಾ.ಕೃಷ್ಣ ದೀಕ್ಷಿತ್ರಿದ್ದ ಹೈಕೋರ್ಟ್ ಪೀಠ ನಕಾರವೆತ್ತಿದೆ ಎನ್ನಲಾಗಿದೆ.