Home High Court/ಹೈಕೋರ್ಟ್ Karnataka High Court stayed the FIR against lawyer | ವಕೀಲರ ವಿರುದ್ಧದ ಎಫ್‌ಐಆರ್‌ಗೆ...

Karnataka High Court stayed the FIR against lawyer | ವಕೀಲರ ವಿರುದ್ಧದ ಎಫ್‌ಐಆರ್‌ಗೆ ತಡೆ ನೀಡಿದ ಹೈಕೋರ್ಟ್‌

33
0
Karnataka High Court stayed the FIR against lawyer

ಬೆಂಗಳೂರು:

ವಕೀಲರ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ ನೀಡಿದೆ. ಪೊಲೀಸ್‌ ಅಧಿಕಾರಿಗೆ ಜೀವ ಬೆದರಿಕೆ ಒಡ್ಡಿ ಅವರ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ನಾಲ್ವರು ವಕೀಲರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ.

ನ್ಯಾಯಮೂರ್ತಿ ಹೇಮಂತ್‌ ಚಂದನ ಗೌಡರ್‌ (Justice Hemanth Chandangoudar) ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ. ಇದೇ ವೇಳೆ ವಕೀಲ ಎನ್‌.ಟಿ.ಪ್ರೀತಮ್‌ ವಿರುದ್ಧ ಪೊಲೀಸರು ದಾಖಲಿಸಿಕೊಂಡಿರುವ ಪ್ರತಿದೂರಿಗೆ ಸಂಬಂಧಿಸಿದಂತೆ ಚಿಕ್ಕಮಗಳೂರು ಟೌನ್‌ ಠಾಣಾ ಪೊಲೀಸರಿಗೆ ನೋಟಿಸ್‌ ಜಾರಿಗೊಳಿಸಲು ನ್ಯಾಯಪೀಠ ಆದೇಶಿಸಿದೆ.

ಅರ್ಜಿದಾರರ ಪರ ಹಿರಿಯ ವಕೀಲ ವಿವೇಕ್‌ ರೆಡ್ಡಿ ಮತ್ತು ಕೆ.ಎನ್‌.ಫಣೀಂದ್ರ ವಾದ ಮಂಡಿಸಿದರು. ಕರ್ನಾಟಕ ವಕೀಲರ ಪರಿಷತ್‌ ಪರವಾಗಿ ಹಿರಿಯ ವಕೀಲ ಎಸ್‌. ಬಸವರಾಜು ಹಾಜರಿದ್ದರು.

LEAVE A REPLY

Please enter your comment!
Please enter your name here