Attack on Chikkamagaluru lawyer Pritam: Govt’s decision to conduct CID probe is satisfactory, High Court disposes of petition | ಚಿಕ್ಕಮಗಳೂರು ವಕೀಲ ಪ್ರೀತಂ ಮೇಲೆ ಹಲ್ಲೆ: ಸರಕಾರ ಸಿಐಡಿ ತನಿಖೆಗೆ ವಹಿಸಿರುವ ಕ್ರಮ ತೃಪ್ತಿಕರವಾಗಿದೆ, ಹೈಕೋರ್ಟ್ನಿಂದ ಅರ್ಜಿ ಇತ್ಯರ್ಥ
ಬೆಂಗಳೂರು:
ವಕೀಲರ ವಿರುದ್ಧದ ಎಫ್ಐಆರ್ಗೆ ಹೈಕೋರ್ಟ್ ತಡೆ ನೀಡಿದೆ. ಪೊಲೀಸ್ ಅಧಿಕಾರಿಗೆ ಜೀವ ಬೆದರಿಕೆ ಒಡ್ಡಿ ಅವರ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ನಾಲ್ವರು ವಕೀಲರ ವಿರುದ್ಧ ದಾಖಲಾಗಿರುವ ಎಫ್ಐಆರ್ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ನ್ಯಾಯಮೂರ್ತಿ ಹೇಮಂತ್ ಚಂದನ ಗೌಡರ್ (Justice Hemanth Chandangoudar) ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ. ಇದೇ ವೇಳೆ ವಕೀಲ ಎನ್.ಟಿ.ಪ್ರೀತಮ್ ವಿರುದ್ಧ ಪೊಲೀಸರು ದಾಖಲಿಸಿಕೊಂಡಿರುವ ಪ್ರತಿದೂರಿಗೆ ಸಂಬಂಧಿಸಿದಂತೆ ಚಿಕ್ಕಮಗಳೂರು ಟೌನ್ ಠಾಣಾ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಲು ನ್ಯಾಯಪೀಠ ಆದೇಶಿಸಿದೆ.
ಅರ್ಜಿದಾರರ ಪರ ಹಿರಿಯ ವಕೀಲ ವಿವೇಕ್ ರೆಡ್ಡಿ ಮತ್ತು ಕೆ.ಎನ್.ಫಣೀಂದ್ರ ವಾದ ಮಂಡಿಸಿದರು. ಕರ್ನಾಟಕ ವಕೀಲರ ಪರಿಷತ್ ಪರವಾಗಿ ಹಿರಿಯ ವಕೀಲ ಎಸ್. ಬಸವರಾಜು ಹಾಜರಿದ್ದರು.
