ಬೆಂಗಳೂರು:
ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಇಂದು ಮುಂಜಾನೆ, ರಾಜ್ಯ ಪೊಲೀಸ್ ಇಲಾಖೆಯ, ಇಂಟರ್ನಲ್ ಸೆಕ್ಯೂರಿಟಿ ವಿಭಾಗದ, ಸೆಂಟರ್ ಫಾರ್ ಕೌಂಟರ್ ಟೆರರಿಸಂ, ಕಮಾಂಡೋ ತರಭೇತಿ ಕೇಂದ್ರಕ್ಕೆ ಭೇಟಿ ನೀಡಿ, ಅಲ್ಲಿನ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದರು.
ಇದೇ ಸಂದರ್ಭದಲ್ಲಿ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿದರು.

ರಾಜ್ಯ ಇಂಟರ್ನಲ್ ಸೆಕ್ಯೂರಿಟಿ ವಿಭಾಗದ ಎಡಿಜಿಪಿ ಅರುಣ್ ಚಕ್ರವರ್ತಿ ಸೇರಿದಂತೆ ಹಿರಿಯ ಅಧಿಕಾರಿಗಳೂ ಈ ಸಂದರ್ಭದಲ್ಲಿ ಉಪಸ್ತಿತರಿದ್ದರು.