Karnataka House congratulated Chairman of Legislative Council Basavaraj Horatti for creating Limca record| ಲಿಮ್ಕಾ ದಾಖಲೆ ನಿರ್ಮಿಸಿದ ಪರಿಷತ್ ಸಭಾಪತಿ ಹೊರಟ್ಟಿ ಅವರಿಗೆ ಅಭಿನಂದಿಸಿದ ಸದನ
ಬೆಂಗಳೂರು ಫಬ್ರವರಿ 13 ( ಕರ್ನಾಟಕ ವಾರ್ತೆ):
ಕರ್ನಾಟಕ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಸತತವಾಗಿ 8 ನೇ ಬಾರಿಗೆ ವಿಧಾನ ಪರಿಷತ್ ಗೆ ಆಯ್ಕೆಯಾದ ಬಸವರಾಜ ಹೊರಟ್ಟಿ ಅವರು ಲಿಮ್ಕಾ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಗೆ ಸೇರಿರುವ ಕುರಿತು ಅವರನ್ನು ವಿಧಾನಪರಿಷತ್ ಸದಸ್ಯರು ಅಭಿನಂದನೆ ಸಲ್ಲಿಸಿದರು.
ವಿಧಾನ ಪರಿಷತ್ ಸದಸ್ಯರಾದ ಬಿ.ಕೆ.ಹರಿಪ್ರಸಾದ್ ಮಾತನಾಡಿ 1980 ರಿಂದ ಹೊರಟ್ಟಿಯವರು ವಿಧಾನ ಪರಿಷತ್ ಸದಸ್ಯರಾಗಿದ್ದು , ಇವತ್ತಿನ ವರೆಗೆ 43 ವರ್ಷಗಳಿಗೂ ಹೆಚ್ಚಿನ ವರ್ಷಗಳು ಒಂದೇ ಕ್ಷೇತ್ರದ ಪ್ರತಿನಿಧಿಯಾಗಿ ಆಯ್ಕೆಗೊಂಡು ಸೇವೆ ಸಲ್ಲಿಸಿದ್ದಾರೆ. ಹೀಗಾಗಿ ಅವರ ಹೆಸರು ಲಿಮ್ಕಾ ದಾಖಲೆ ಸೇರಿದೆ ಎಂದರು.
ವಿಧಾನ ಪರಿಷತ್ ಸದಸ್ಯರಾದ ಉಮಾಶ್ರೀ, ಛಲವಾದಿ ನಾರಾಯಣಸ್ವಾಮಿ, ಭಾರತಿ ಶೆಟ್ಟಿ, ಸಚಿವ ಚೆಲುವರಾಯಸ್ವಾಮಿ, ಸಭಾನಾಯಕರಾದ ಭೋಸರಾಜು, ಸದನದ ವಿರೋಧ ಪಕ್ಷದ ನಾಯಕರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇನ್ನಿತರರು ಸಭಾಪತಿ ಹೊರಟ್ಟಿ ಅವರಿಗೆ ಅಭಿನಂದನೆ ಸಲ್ಲಿಸಿ ಇವರ ಸಾರ್ವಜನಿಕ ಮತ್ತು ಶಿಕ್ಷಣ ಕ್ಷೇತ್ರದಲ್ಲಿನ ಅಪ್ರತಿಮ ಸಾಧನೆಯನ್ನು ಶ್ಲಾಘಿಸಿದರು.
ಅಭಿನಂದನೆ ಸ್ವೀಕರಿಸಿ ಮಾತನಾಡಿದ ಸಭಾಪತಿಗಳು ತಮಗೆ ಸಹಕಾರ ನೀಡಿದ ಎಲ್ಲರನ್ನೂ ಸ್ಮರಿಸಿ ಕೃತಜ್ಞತೆ ಸಲ್ಲಿಸಿದರು.
