Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • “ಸೂರ್ಯ ಎಲಿಗೆನ್ಸ್” ಬಹು ಮಹಡಿ ಕಟ್ಟಡ ಲೋಕಾರ್ಪಣೆ: ವಿ ಸೋಮಣ್ಣ
  • ಬೆಂಗಳೂರು ನಗರ

“ಸೂರ್ಯ ಎಲಿಗೆನ್ಸ್” ಬಹು ಮಹಡಿ ಕಟ್ಟಡ ಲೋಕಾರ್ಪಣೆ: ವಿ ಸೋಮಣ್ಣ

The Bengaluru Live September 26, 2021 4:00 PM
Karnataka Housing Minister distributes ownership letters to beneficiaries of Surya elegance in Bengaluru

“ಸೂರ್ಯ ಎಲಿಗೆನ್ಸ್” ಬಹು ಮಹಡಿ ಕಟ್ಟಡ ಲೋಕಾರ್ಪಣೆ: ವಿ ಸೋಮಣ್ಣ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು:

ಪ್ರಧಾನಮಂತ್ರಿಗಳ ಅವಾಸ್ ಯೋಜನೆಯಡಿ ಎಲ್ಲರಿಗೂ ಸೂರು ಕಲ್ಪಿಸುವಲ್ಲಿ ಬೆಂಗಳೂರು ನಗರ ಜಿಲ್ಲೆ ಮೊದಲು ಸ್ಥಾನದಲ್ಲಿದೆ ಎಂದು ವಸತಿ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ವಿ . ಸೋಮಣ್ಣ ಹೇಳಿದರು.

ಕರ್ನಾಟಕ ಗೃಹ ಮಂಡಳಿಯಿಂದ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಚಂದಪುರ ಸೂರ್ಯನಗರದಲ್ಲಿ 1ನೇ ಹಂತದ ನೂತನವಾಗಿ ನಿರ್ಮಿಸಿಲಾಗಿರುವ ಸೂರ್ಯ ಎಲಿಗೆನ್ಸ್ ಬಹುಮಹಡಿ ವಸತಿ ಸಮುಚ್ಚಯವನ್ನು ಲೋಕಾರ್ಪಣೆ ಮಾಡಿ ಹತ್ತು ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಿದರು‌. ನಂತರ ಮಾತನಾಡಿ ಬೆಂಗಳೂರಿನಲ್ಲಿ ಪ್ರತಿಯೊಬ್ಬರಿಗೂ ಸ್ವಂತ ಮನೆ ಹೊಂದಬೇಕು ಎನ್ನುವ ಮಹದಾಸೆಗೆ ಸೂರ್ಯನಗರ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ಈಗಾಗಲೇ ಫ್ಯಾಟ್‌ಗಳ ಹಂಚಿಕೆಗೆ ಅರ್ಜಿ ಕರೆಯಲಾಗಿದ್ದು, ಶೀಘ್ರವೇ ಮನೆಗಳ ಹಂಚಿಕೆಯಾಗಲಿದೆ. ಉತ್ತಮ ಗುಣಮಟ್ಟದ ಫ್ಲಾಟ್ ನಿರ್ಮಾಣದ ಸಂಕಲ್ಪಕ್ಕೆ ಮಂಡಳಿ ಬದ್ಧವಾಗಿದೆ ಎಂದು ಅವರು ಹೇಳಿದರು‌.

ಮಧ್ಯಮ ಮತ್ತು ಕೆಳಮಧ್ಯಮ ವರ್ಗದ ಲಕ್ಷಾಂತರ ಮಂದಿ ಸ್ವಂತ ಸೂರು ಇಲ್ಲದೆ ನಿವೇಶನ ಹೊಂದುವ ಬಯಕೆಯನ್ನು ಹೊಂದಿರುತ್ತಾರೆ. ಎಲ್ಲರ ಆಶೋತ್ತರಗಳನ್ನು ಈಡೇರಿಸಲು ವಸತಿ ಇಲಾಖೆಯ ಏಷ್ಯಾದ ಅತಿದೊಡ್ಡ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಬೆಂಗಳೂರಿನ ಚಂದಾಪುರದಲ್ಲಿ 6 ಎಕರೆ 14 ಗುಂಟೆ ವ್ಯಾಪ್ತಿಯಲ್ಲಿ 77.14 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಸೂರ್ಯನಗರ ಹಲವು ವಿಶೇಷತೆಗಳನ್ನು ಹೊಂದಿದ್ದು ಉತ್ತಮ ಗುಣಮಟ್ಟದ ರಸ್ತೆ ಸೌಲಭ್ಯ, ಒಳಾಂಗಣ ಕ್ರೀಡಾಂಗಣ ಮತ್ತು ಉದ್ಯಾನವನ ನಿರ್ಮಿಸಲಾಗಿದೆ. ಒಳಚರಂಡಿ ಹಾಗೂ ಕಾವೇರಿ ನೀರು ಸರಬರಾಜು, ಮಳೆ ನೀರು ಕೊಯ್ಲು ವ್ಯವಸ್ಥೆಯನ್ನು ಮಾಡಲಾಗಿದೆ. ಈ ಸಮುಚ್ಚಯದಲ್ಲಿ 2 ಮತ್ತು 3 ಬಿ.ಎಚ್.ಕೆ ಸೇರಿ ಒಟ್ಟು 384 ಪ್ಲ್ಯಾಟ್ ಲಭ್ಯವಿವೆ ಎಂದು ಅವರು ಹೇಳಿದರು.

ಮುಂದಿನ ದಿನಗಳಲ್ಲಿ ಈ ಭಾಗಕ್ಕೆ ಕಾವೇರಿ ಕುಡಿಯುವ ನೀರು ಮೂರನೇ ಹಂತದಿಂದ 5ಎಮ್ ಎಲ್ ಡಿಯನ್ನು ಒದಗಿಸುವ ಯೋಜನೆ ಸರ್ಕಾರದ ಮುಂದಿದೆ‌, ಹಾಗೂ ಅಂದಾಜು 25 ಎಕರೆ ಜಮೀನನ್ನು ಗುರುತಿಸಿ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಂಗಣ ನಿರ್ಮಾಣ ಮಾಡಲು ಮುಖ್ಯ ಮಂತ್ರಿಗಳೊಂದಿಗೆ ಸಮಾಲೋಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಸಂಸದರಾದ ಡಿ.ಕೆ.ಸುರೇಶ್ ಅವರು ಮಾತನಾಡಿ ಸ್ಥಳೀಯ ನಿವಾಸಿಗಳಿಗೆ ಸಮುಚ್ಚಯ ಖರೀದಿಯಲ್ಲಿ ಮೀಸಲಾತಿ ಹಾಗು ವಿನಾಯಿತಿ ನೀಡಬೇಕು ಎಂದು ಒತ್ತಾಯಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆನೇಕಲ್ ವಿಧಾನ ಸಭಾ ಕ್ಷೇತ್ರದ ಶಾಸಕ ಬಿ. ಶಿವಣ್ಣ ವಹಿಸಿದರು‌.

ಕಾರ್ಯಕ್ರಮದಲ್ಲಿ ಮಾನ್ಯ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಕೇಂದ್ರ ಸಚಿವರು ಎ.ನಾರಾಯಣಸ್ವಾಮಿ, ವಿಧಾನ ಪರಿಷತ್ ಶಾಸಕರಾದ ಪುಟ್ಟಣ್ಣ, ಹಾಗೂ ಅ ದೇವೆಗೌಡ ಆನೇಕಲ್ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಜಯಣ್ಣ, ವಸತಿ ಇಲಾಖೆ ಕಾರ್ಯದರ್ಶಿ ಮನೋಜ್ ಕುಮಾರ ಮೀನಾ, ಕರ್ನಾಟಕ ಗೃಹ ಮಂಡಳಿ ಆಯುಕ್ತರಾದ ಡಿ.ಎಸ್ ರಮೇಶ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಸೇರಿದಂತೆ ಸ್ಥಳೀಯ ಗ್ರಾಮ ಪಂಚಾಯತಿ ಅಧ್ಯಕ್ಷರುಗಳು, ಅಧಿಕಾರಿಗಳು ಉಪಸ್ಥಿತರಿದ್ದರು .

About the Author

The Bengaluru Live

Administrator

Visit Website View All Posts

Post navigation

Previous: ಬಿಜೆಪಿ ಸುಳ್ಳಿನ ಕಾರ್ಖಾನೆ ಇದ್ದಂತೆ: ಸಿದ್ದರಾಮಯ್ಯ ಟೀಕೆ
Next: ಬೆಂಗಳೂರು-ಬೆಳಗಾವಿ ರೈಲಿಗೆ ಸುರೇಶ ಅಂಗಡಿಯವರ ನಾಮಕರಣಕ್ಕೆ ರಾಜ್ಯದಿಂದ ಶಿಫಾರಸ್ಸು -ಮುಖ್ಯಮಂತ್ರಿ

Related Stories

ಜಕ್ಕೂರಿನ ಶ್ರೀರಾಮಪುರ ಕ್ರಾಸ್ ರಸ್ತೆಯಲ್ಲಿ ದುರಸ್ತಿ ನಡೆಸುತ್ತಿರುವ ಕಾರ್ಮಿಕರು
  • Uncategorized
  • ಬೆಂಗಳೂರು ನಗರ

ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ

The Bengaluru Live November 13, 2026 7:55 PM
ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದ ಮುಂಭಾಗ
  • ಕ್ರೀಡೆ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ

The Bengaluru Live November 13, 2026 7:40 PM
ಚಿಕ್ಕಪೇಟೆಯಲ್ಲಿ ಏಕಬಳಕೆ ಪ್ಲಾಸ್ಟಿಕ್ ಉಲ್ಲಂಘನೆಗಾಗಿ ಝೆಪ್ಟೊ ಅಂಗಡಿಯಲ್ಲಿ ಜಿಬಿಎ ಅಧಿಕಾರಿಗಳ ತಪಾಸಣೆ
  • ಬೆಂಗಳೂರು ನಗರ

ಚಿಕ್ಕಪೇಟೆ ವಿಭಾಗದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಯಮ ಉಲ್ಲಂಘನೆ: ಝೆಪ್ಟೊಗೆ ₹25,000 ದಂಡ

The Bengaluru Live November 13, 2026 4:40 PM

Latest Post

ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ ಜಕ್ಕೂರಿನ ಶ್ರೀರಾಮಪುರ ಕ್ರಾಸ್ ರಸ್ತೆಯಲ್ಲಿ ದುರಸ್ತಿ ನಡೆಸುತ್ತಿರುವ ಕಾರ್ಮಿಕರು
  • Uncategorized
  • ಬೆಂಗಳೂರು ನಗರ

ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ

November 13, 2026 7:55 PM
ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದ ಮುಂಭಾಗ
  • ಕ್ರೀಡೆ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ

November 13, 2026 7:40 PM
ಚಿಕ್ಕಪೇಟೆ ವಿಭಾಗದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಯಮ ಉಲ್ಲಂಘನೆ: ಝೆಪ್ಟೊಗೆ ₹25,000 ದಂಡ ಚಿಕ್ಕಪೇಟೆಯಲ್ಲಿ ಏಕಬಳಕೆ ಪ್ಲಾಸ್ಟಿಕ್ ಉಲ್ಲಂಘನೆಗಾಗಿ ಝೆಪ್ಟೊ ಅಂಗಡಿಯಲ್ಲಿ ಜಿಬಿಎ ಅಧಿಕಾರಿಗಳ ತಪಾಸಣೆ
  • ಬೆಂಗಳೂರು ನಗರ

ಚಿಕ್ಕಪೇಟೆ ವಿಭಾಗದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಯಮ ಉಲ್ಲಂಘನೆ: ಝೆಪ್ಟೊಗೆ ₹25,000 ದಂಡ

November 13, 2026 4:40 PM
ಸರ್ಜಾಪುರ–ಹೆಬ್ಬಾಳ ಮೆಟ್ರೋ ಮಾರ್ಗಕ್ಕೆ ಶೀಘ್ರ ಅನುಮೋದನೆ ನೀಡುವಂತೆ ಪ್ರಧಾನಿ ಮೋದಿಗೆ ಶಿವಕುಮಾರ್ ಮನವಿ IIM ಬೆಂಗಳೂರಿನಲ್ಲಿ ಭಾಷಣ ಮಾಡುತ್ತಿರುವ ಸಿಎಂ ಡಿ.ಕೆ. ಶಿವಕುಮಾರ್
  • ಬೆಂಗಳೂರು ನಗರ
  • ರಾಜಕೀಯ

ಸರ್ಜಾಪುರ–ಹೆಬ್ಬಾಳ ಮೆಟ್ರೋ ಮಾರ್ಗಕ್ಕೆ ಶೀಘ್ರ ಅನುಮೋದನೆ ನೀಡುವಂತೆ ಪ್ರಧಾನಿ ಮೋದಿಗೆ ಶಿವಕುಮಾರ್ ಮನವಿ

November 13, 2026 4:22 PM
ಪ್ರಧಾನಿ ಮೋದಿಯಿಂದ ವಿಶ್ವದ ಮೊದಲ ಟಿಲ್ಟೆಡ್ ಎಲ್‌ಇಡಿ ಡೋಮ್ ತಾರಾಲಯ ‘COSMOS-Mysuru’ ಲೋಕಾರ್ಪಣೆ ಪ್ರಧಾನಿ ನರೇಂದ್ರ ಮೋದಿಗೆ ಮೈಸೂರಿನಲ್ಲಿ ಸ್ವಾಗತ
  • ಕರ್ನಾಟಕ
  • ಸಿನಿಮಾ

ಪ್ರಧಾನಿ ಮೋದಿಯಿಂದ ವಿಶ್ವದ ಮೊದಲ ಟಿಲ್ಟೆಡ್ ಎಲ್‌ಇಡಿ ಡೋಮ್ ತಾರಾಲಯ ‘COSMOS-Mysuru’ ಲೋಕಾರ್ಪಣೆ

November 13, 2026 4:13 PM
ರೆಡ್ ಲೈನ್ ಅನುಮೋದನೆ, ಡಬಲ್ ಡೆಕ್ಕರ್‌ಗೆ ಅನುಮತಿ, ಪಶ್ಚಿಮ ಘಟ್ಟ ಅಧಿಸೂಚನೆ ಮರುಪರಿಶೀಲನೆ: ಪ್ರಧಾನಿ ಮೋದಿಗೆ ರಾಜ್ಯದ ಮನವಿ ಪತ್ರ ನಮ್ಮ ಮೆಟ್ರೋ ನಿಲ್ದಾಣದ ಮಾದರಿಯನ್ನು ವೀಕ್ಷಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ರೆಡ್ ಲೈನ್ ಅನುಮೋದನೆ, ಡಬಲ್ ಡೆಕ್ಕರ್‌ಗೆ ಅನುಮತಿ, ಪಶ್ಚಿಮ ಘಟ್ಟ ಅಧಿಸೂಚನೆ ಮರುಪರಿಶೀಲನೆ: ಪ್ರಧಾನಿ ಮೋದಿಗೆ ರಾಜ್ಯದ ಮನವಿ ಪತ್ರ

November 13, 2026 3:14 PM

ನೀವು ತಪ್ಪಿಸಿಕೊಂಡಿರಬಹುದು

ಜಕ್ಕೂರಿನ ಶ್ರೀರಾಮಪುರ ಕ್ರಾಸ್ ರಸ್ತೆಯಲ್ಲಿ ದುರಸ್ತಿ ನಡೆಸುತ್ತಿರುವ ಕಾರ್ಮಿಕರು
  • Uncategorized
  • ಬೆಂಗಳೂರು ನಗರ

ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ

The Bengaluru Live November 13, 2026 7:55 PM
ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದ ಮುಂಭಾಗ
  • ಕ್ರೀಡೆ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ

The Bengaluru Live November 13, 2026 7:40 PM
ಚಿಕ್ಕಪೇಟೆಯಲ್ಲಿ ಏಕಬಳಕೆ ಪ್ಲಾಸ್ಟಿಕ್ ಉಲ್ಲಂಘನೆಗಾಗಿ ಝೆಪ್ಟೊ ಅಂಗಡಿಯಲ್ಲಿ ಜಿಬಿಎ ಅಧಿಕಾರಿಗಳ ತಪಾಸಣೆ
  • ಬೆಂಗಳೂರು ನಗರ

ಚಿಕ್ಕಪೇಟೆ ವಿಭಾಗದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಯಮ ಉಲ್ಲಂಘನೆ: ಝೆಪ್ಟೊಗೆ ₹25,000 ದಂಡ

The Bengaluru Live November 13, 2026 4:40 PM
IIM ಬೆಂಗಳೂರಿನಲ್ಲಿ ಭಾಷಣ ಮಾಡುತ್ತಿರುವ ಸಿಎಂ ಡಿ.ಕೆ. ಶಿವಕುಮಾರ್
  • ಬೆಂಗಳೂರು ನಗರ
  • ರಾಜಕೀಯ

ಸರ್ಜಾಪುರ–ಹೆಬ್ಬಾಳ ಮೆಟ್ರೋ ಮಾರ್ಗಕ್ಕೆ ಶೀಘ್ರ ಅನುಮೋದನೆ ನೀಡುವಂತೆ ಪ್ರಧಾನಿ ಮೋದಿಗೆ ಶಿವಕುಮಾರ್ ಮನವಿ

The Bengaluru Live November 13, 2026 4:22 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ
  • ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ
  • ಚಿಕ್ಕಪೇಟೆ ವಿಭಾಗದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಯಮ ಉಲ್ಲಂಘನೆ: ಝೆಪ್ಟೊಗೆ ₹25,000 ದಂಡ
  • ಸರ್ಜಾಪುರ–ಹೆಬ್ಬಾಳ ಮೆಟ್ರೋ ಮಾರ್ಗಕ್ಕೆ ಶೀಘ್ರ ಅನುಮೋದನೆ ನೀಡುವಂತೆ ಪ್ರಧಾನಿ ಮೋದಿಗೆ ಶಿವಕುಮಾರ್ ಮನವಿ
©Copyright 2025 The Bengaluru Live All rights reserved. | MoreNews by AF themes.