ಬೆಂಗಳೂರು:
ನೆರೆ ರಾಜ್ಯಗಳಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ರಾತ್ರಿ 9 ರಿಂದಲೇ ಟೈಟ್ ನೈಟ್ ಕರ್ಫ್ಯೂ ಮತ್ತು ಕೇರಳ ಹಾಗೂ ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೆ ರಾಜ್ಯಸರ್ಕಾರ ಮುಂದಾಗಿದೆ.
ಇಂದು ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದ್ದು ಕೇರಳ ಹಾಗೂ ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ತೀರ್ಮಾನಿಸಲಾಗಿದ್ದು, ರಾತ್ರಿ ಕರ್ಫ್ಯೂ ರಾತ್ರಿ 10ರ ಬದಲು 9ರಿಂದ ಜಾರಿಗೊಳಿಸಲು ನಿರ್ಧರಿಸಲಾಯಿತು. ರಾತ್ರಿ ಕರ್ಫ್ಯೂ ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದರು.
ಸಭೆಯಲ್ಲಿ ಸಚಿವರಾದ ಡಾ. ಸಿ.ಎನ್. ಅಶ್ವತ್ಥನಾರಾಯಣ, ಡಾ. ಕೆ. ಸುಧಾಕರ್, ತಜ್ಞರಾದ ಡಾ. ಸಿ.ಎನ್. ಮಂಜುನಾಥ್, ಡಾ. ದೇವಿಪ್ರಸಾದ್ ಶೆಟ್ಟಿ, ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ. ಸುದರ್ಶನ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.