ಬೆಂಗಳೂರು: ನಿವೃತ್ತಿಗೆ ಎರಡು ತಿಂಗಳು ಇರುವಾಗ ಹಿರಿಯ ಅಧಿಕಾರಿ ಪ್ರತಾಪ್ ರೆಡ್ಡಿ ರಾಜೀನಾಮೆ ನೀಡಿದ್ದಾರೆ. ಕರ್ನಾಟಕದ ಆಂತರಿಕ ಭದ್ರತೆ ವಿಭಾಗದ ಡಿಜಿಪಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಪ್ರತಾಪ್ ರೆಡ್ಡಿ ವೈಯುಕ್ತಿಕ ಕಾರಣ ನೀಡಿ ರಾಜೀನಾಮೆ ನೀಡಿದ್ದಾರೆ.
ಪ್ರತಾಪ್ ರೆಡ್ಡಿ ಅವರು 1991ನೇ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿದ್ದು ಮೂಲತಃ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯವರು. ಬರುವ ಏಪ್ರಿಲ್ 30ಕ್ಕೆ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಈ ಹಿಂದೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿಯೂ ಅವರು ಸೇವೆ ಸಲ್ಲಿಸಿದ್ದರು.