Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • ರಾಜ್ಯವು ಗುಣಮಟ್ಟದ ಶಿಕ್ಷಣ, ಉಜ್ವಲ ಅವಕಾಶಗಳ ತಾಣ: ಅಶ್ವತ್ಥನಾರಾಯಣ
  • ಬೆಂಗಳೂರು ನಗರ
  • ಶಿಕ್ಷಣ

ರಾಜ್ಯವು ಗುಣಮಟ್ಟದ ಶಿಕ್ಷಣ, ಉಜ್ವಲ ಅವಕಾಶಗಳ ತಾಣ: ಅಶ್ವತ್ಥನಾರಾಯಣ

The Bengaluru Live December 8, 2021 5:00 PM 1 minute read
Karnataka is a destination of quality education and bright opportunities: Ashwathanarayan

ರಾಜ್ಯವು ಗುಣಮಟ್ಟದ ಶಿಕ್ಷಣ, ಉಜ್ವಲ ಅವಕಾಶಗಳ ತಾಣ: ಅಶ್ವತ್ಥನಾರಾಯಣ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಆರ್.ವಿ.ವಿಶ್ವವಿದ್ಯಾಲಯ ಉದ್ಘಾಟನಾ ಸಮಾರಂಭದಲ್ಲಿ ಭಾಗಿ

ಬೆಂಗಳೂರು:

ಕರ್ನಾಟಕವು ಜಾಗತಿಕ ಮಟ್ಟದಲ್ಲಿ ಗುಣಮಟ್ಟದ ಶಿಕ್ಷಣ ಮತ್ತು ಉಜ್ವಲ ಅವಕಾಶಗಳಿಗೆ ಹೇಳಿಮಾಡಿಸಿದ ರಾಜ್ಯವಾಗಿದೆ. ಇಡೀ ದೇಶದಲ್ಲಿ ಇಂದು ಶಿಕ್ಷಣದಲ್ಲಿ ರಾಜ್ಯವು ಮುಂಚೂಣಿಯಲ್ಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

ನಗರದ ಮೈಸೂರು ರಸ್ತೆಯಲ್ಲಿ ನಿರ್ಮಾಣವಾಗಿರುವ ಆರ್.ವಿ.ವಿಶ್ವವಿದ್ಯಾಲಯವನ್ನು ಉದ್ಘಾಟಿಸಿ ಬುಧವಾರ ಮಾತನಾಡಿದ ಅವರು, 21ನೇ ಶತಮಾನವು ಜ್ಞಾನಾಧಾರಿತ ಆರ್ಥಿಕತೆಯ ಯುಗವಾಗಿದ್ದು, ಗುಣಮಟ್ಟದ ಶಿಕ್ಷಣವು ಮಾತ್ರ ನಮ್ಮ ಸಮಸ್ಯೆಗಳಿಗೆ ಸದೃಢ ಪರಿಹಾರ ಕೊಡುತ್ತದಷ್ಟೆ ಎಂದು ನುಡಿದರು.

ಇಂದು ಉದ್ಯೋಗರಂಗದಲ್ಲಿ ಕೌಶಲ್ಯಪೂರ್ಣ ಮಾನವ ಸಂಪನ್ಮೂಲಕ್ಕೆ ಅಪಾರ ಬೇಡಿಕೆ ಇದೆ. ಇದಕ್ಕೆ ತಕ್ಕಂತೆ ರಾಜ್ಯದಲ್ಲಿ ಶಿಕ್ಷಣವನ್ನು ಉದ್ಯೋಗದಾತ ಕಂಪನಿಗಳೊಂದಿಗೆ ಬೆಸೆಯಲಾಗಿದೆ. ಜೊತೆಗೆ ಪ್ರಧಾನಿ ಮೋದಿಯವರ ಆಶಯದಂತೆ ರಾಜ್ಯವು ದೇಶದಲ್ಲೇ ಮೊದಲನೆಯದಾಗಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಷ್ಠಾನಕ್ಕೆ ತರಲಾಗುತ್ತಿದೆ ಎಂದು ಅವರು ಪ್ರತಿಪಾದಿಸಿದರು.

Karnataka is a destination of quality education and bright opportunities: Ashwathanarayan

ರಾಜ್ಯದಲ್ಲಿ 8 ಸಾವಿರ ಸ್ಮಾರ್ಟ್ ಕ್ಲಾಸ್ ರೂಮುಗಳನ್ನು ತೆರೆಯಲಾಗಿದ್ದು, 3.50 ಲಕ್ಷ ಆಧುನಿಕ ಕೋರ್ಸುಗಳು ವಿದ್ಯಾರ್ಥಿಗಳಿಗೆ ಉಚಿತವಾಗಿ ಲಭ್ಯವಿವೆ. ಇದಲ್ಲದೆ, ಸರಕಾರಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಮತ್ತು ಲ್ಯಾಪ್ ಟಾಪ್ ಗಳನ್ನು ವಿತರಿಸಲಾಗಿದೆ ಎಂದು ಅವರು ವಿವರಿಸಿದರು.

ರಾಜ್ಯದಲ್ಲಿ ಎಲ್ಲ ವಲಯಗಳಲ್ಲೂ ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಜತೆಗೆ ಡಿಜಿಟಲ್ ಎಕಾನಮಿ ಮಿಷನ್ ಯೋಜನೆಯು ಸಮಗ್ರ ಬೆಳವಣಿಗೆಗೆ ಒತ್ತು ಕೊಡುತ್ತಿದೆ. ಈ ವಿಚಾರದಲ್ಲಿ ರಾಜ್ಯವು ಸಿಂಗಪುರವನ್ನು ಬಿಟ್ಟರೆ ಇಡೀ ಜಗತ್ತಿನಲ್ಲಿ ದ್ವಿತೀಯ ಸ್ಥಾನದಲ್ಲಿದೆ  ಎಂದು ಅಶ್ವತ್ಥನಾರಾಯಣ ಹೇಳಿದರು.

ಮೋದಿಯವರು 2024ರ ಹೊತ್ತಿಗೆ ಭಾರತವನ್ನು 5 ಟ್ರಿಲಿಯನ್ ಮೌಲ್ಯದ ಆರ್ಥಿಕತೆಯಾಗಿ ಬೆಳೆಸುವ ಸಂಕಲ್ಪ ಮಾಡಿದ್ದಾರೆ. ಹಾಗೆಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರಾಜ್ಯವನ್ನು 1.50 ಟ್ರಿಲಿಯನ್ ಮೌಲ್ಯದ ಆರ್ಥಿಕ ವ್ಯವಸ್ಥೆಯನ್ನಾಗಿ ಬೆಳೆಸುವ ಹೊಂಗನಸು ಹೊಂದಿದ್ದಾರೆ. ಅತ್ಯುತ್ತಮ ಶಿಕ್ಷಣದ ಮೂಲಕ ಈ ಕನಸನ್ನು ನನಸು ಮಾಡಿಕೊಳ್ಳಬಹುದು. ಡಿಜಿಟಲೀಕರಣದ ಮೂಲಕ ಈ ನಿಟ್ಟಿನಲ್ಲಿ ಶೇ.50ರಷ್ಟು ಕಾಣಿಕೆ ನೀಡಬಹುದು ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರ್.ವಿ.ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಎಂ.ಕೆ.ಪಾಂಡುರಂಗ ಶೆಟ್ಟಿ, ಆರ್.ವಿ. ವಿಶ್ವವಿದ್ಯಾಲಯದ ಕುಲಪತಿ ವೈ.ಎಸ್.ಆರ್.ಮೂರ್ತಿ, ಸಮಕುಲಪತಿಗಳಾದ ನಾಗರಾಜ್ ಮತ್ತು ದ್ವಾರಕೀಪ್ರಸಾದ್, ರಿಜಿಸ್ಟ್ರಾರ್ ಕೃಪಾಶಂಕರ್ ಮುಂತಾದವರು ಉಪಸ್ಥಿತರಿದ್ದರು.

About the Author

The Bengaluru Live

Administrator

Visit Website View All Posts

Post navigation

Previous: ಪೋಲೀಸರ ಮೇಲಿನ ಹಲ್ಲೆ ಘಟನೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಖಂಡನೆ
Next: ರಾಜ್ಯದಲ್ಲಿ ಶೈಕ್ಷಣಿಕ ಕ್ಯಾಂಪಸ್ ಆರಂಭಕ್ಕೆ ಫ್ರಾನ್ಸ್ ಒಲವು: ಅಶ್ವತ್ಥನಾರಾಯಣ

Related Stories

ಶಾಲಾ ಕಾರ್ಯಕ್ರಮದಲ್ಲಿ ಬಣ್ಣದ ಕೈಪಿಡಿಗಳನ್ನು ಹಿಡಿದ ಸಮವಸ್ತ್ರದ ಇಬ್ಬರು ವಿದ್ಯಾರ್ಥಿನಿಯರು ಮತ್ತು ಕೆಲವು ಪುರುಷರು
  • ಕರ್ನಾಟಕ
  • ವಿಜಯಪುರ
  • ಶಿಕ್ಷಣ

ಮುಂದಿನ ವರ್ಷದಿಂದ ಎಲ್‌ಕೆಜಿಯಿಂದ 12ನೇ ತರಗತಿವರೆಗೆ ಒಂದೇ ಸೂರು; ಪೋಷಕರ ಸಭೆಗಳಿಂದ ಗುಣಮಟ್ಟ ಸುಧಾರಣೆ: ಮಧು ಬಂಗಾರಪ್ಪ

The Bengaluru Live November 14, 2026 10:47 PM
ಮಕ್ಕಳ ವಿಜ್ಞಾನ ಜಾತ್ರೆಯ ವೇದಿಕೆಯಲ್ಲಿ ಅಧಿಕಾರಿಗಳು ಮತ್ತು ಕೇಸರಿ ವಸ್ತ್ರದ ಸ್ವಾಮೀಜಿ ದೀಪ ಬೆಳಗುತ್ತಿರುವುದು
  • ಕರ್ನಾಟಕ
  • ವಿಜಯಪುರ
  • ಶಿಕ್ಷಣ

ಸರ್ಕಾರಿ ಶಾಲೆಗಳಿಗೆ ಸುಮಾರು ₹4,500 ಕೋಟಿ, ಉಚಿತ ಬಸ್, ಎಲ್‌ಕೆಜಿಯಿಂದ ಪಿಯುಸಿವರೆಗೆ ಒಂದೇ ಸೂರು: ತಿಕೋಟಾದಲ್ಲಿ ಮಧು ಬಂಗಾರಪ್ಪ

The Bengaluru Live November 14, 2026 10:30 PM
ವಿಧಾನಸೌಧ ಆವರಣದಲ್ಲಿ ಹೂಮಾಲೆ ಹಾಕಿದ ಜವಾಹರಲಾಲ್ ನೆಹರು ಪ್ರತಿಮೆ ಮತ್ತು ಕೆಳಗೆ ಅವರ ಭಾವಚಿತ್ರ
  • ಬೆಂಗಳೂರು ನಗರ
  • ರಾಜಕೀಯ

ನೆಹರು ಪ್ರತಿಮೆಗೆ ಪುಷ್ಪನಮನ; ನಿಗಮ ಮಂಡಳಿ ನೇಮಕದ ಎರಡನೇ ಪಟ್ಟಿ ಒಂದೆರಡು ದಿನಗಳಲ್ಲಿ: ಸಿಎಂ ಶಿವಕುಮಾರ್

The Bengaluru Live November 14, 2026 10:28 PM

Latest Post

ವಿಶ್ವನಾಥಪುರ ಪ್ರಜಾ ಸೇವಾ ಸಭೆ: ಅರ್ಜಿ ಸ್ವೀಕರಿಸಿದ ತಹಶೀಲ್ದಾರ್ ಅನಿಲ್, 30 ದಿನಗಳಲ್ಲಿ ಸಮಸ್ಯೆ ಇತ್ಯರ್ಥ ಪ್ರಜಾ ಸೇವಾ ಬ್ಯಾನರ್ ಇರುವ ವಿಶ್ವನಾಥಪುರ ಪ್ರಜಾ ಸೇವಾ ಆಂದೋಲನ ಸಭೆಯ ವೇದಿಕೆ
  • ಕರ್ನಾಟಕ

ವಿಶ್ವನಾಥಪುರ ಪ್ರಜಾ ಸೇವಾ ಸಭೆ: ಅರ್ಜಿ ಸ್ವೀಕರಿಸಿದ ತಹಶೀಲ್ದಾರ್ ಅನಿಲ್, 30 ದಿನಗಳಲ್ಲಿ ಸಮಸ್ಯೆ ಇತ್ಯರ್ಥ

November 15, 2026 9:02 AM
ಮುಂದಿನ ವರ್ಷದಿಂದ ಎಲ್‌ಕೆಜಿಯಿಂದ 12ನೇ ತರಗತಿವರೆಗೆ ಒಂದೇ ಸೂರು; ಪೋಷಕರ ಸಭೆಗಳಿಂದ ಗುಣಮಟ್ಟ ಸುಧಾರಣೆ: ಮಧು ಬಂಗಾರಪ್ಪ ಶಾಲಾ ಕಾರ್ಯಕ್ರಮದಲ್ಲಿ ಬಣ್ಣದ ಕೈಪಿಡಿಗಳನ್ನು ಹಿಡಿದ ಸಮವಸ್ತ್ರದ ಇಬ್ಬರು ವಿದ್ಯಾರ್ಥಿನಿಯರು ಮತ್ತು ಕೆಲವು ಪುರುಷರು
  • ಕರ್ನಾಟಕ
  • ವಿಜಯಪುರ
  • ಶಿಕ್ಷಣ

ಮುಂದಿನ ವರ್ಷದಿಂದ ಎಲ್‌ಕೆಜಿಯಿಂದ 12ನೇ ತರಗತಿವರೆಗೆ ಒಂದೇ ಸೂರು; ಪೋಷಕರ ಸಭೆಗಳಿಂದ ಗುಣಮಟ್ಟ ಸುಧಾರಣೆ: ಮಧು ಬಂಗಾರಪ್ಪ

November 14, 2026 10:47 PM
ಸರ್ಕಾರಿ ಶಾಲೆಗಳಿಗೆ ಸುಮಾರು ₹4,500 ಕೋಟಿ, ಉಚಿತ ಬಸ್, ಎಲ್‌ಕೆಜಿಯಿಂದ ಪಿಯುಸಿವರೆಗೆ ಒಂದೇ ಸೂರು: ತಿಕೋಟಾದಲ್ಲಿ ಮಧು ಬಂಗಾರಪ್ಪ ಮಕ್ಕಳ ವಿಜ್ಞಾನ ಜಾತ್ರೆಯ ವೇದಿಕೆಯಲ್ಲಿ ಅಧಿಕಾರಿಗಳು ಮತ್ತು ಕೇಸರಿ ವಸ್ತ್ರದ ಸ್ವಾಮೀಜಿ ದೀಪ ಬೆಳಗುತ್ತಿರುವುದು
  • ಕರ್ನಾಟಕ
  • ವಿಜಯಪುರ
  • ಶಿಕ್ಷಣ

ಸರ್ಕಾರಿ ಶಾಲೆಗಳಿಗೆ ಸುಮಾರು ₹4,500 ಕೋಟಿ, ಉಚಿತ ಬಸ್, ಎಲ್‌ಕೆಜಿಯಿಂದ ಪಿಯುಸಿವರೆಗೆ ಒಂದೇ ಸೂರು: ತಿಕೋಟಾದಲ್ಲಿ ಮಧು ಬಂಗಾರಪ್ಪ

November 14, 2026 10:30 PM
ನೆಹರು ಪ್ರತಿಮೆಗೆ ಪುಷ್ಪನಮನ; ನಿಗಮ ಮಂಡಳಿ ನೇಮಕದ ಎರಡನೇ ಪಟ್ಟಿ ಒಂದೆರಡು ದಿನಗಳಲ್ಲಿ: ಸಿಎಂ ಶಿವಕುಮಾರ್ ವಿಧಾನಸೌಧ ಆವರಣದಲ್ಲಿ ಹೂಮಾಲೆ ಹಾಕಿದ ಜವಾಹರಲಾಲ್ ನೆಹರು ಪ್ರತಿಮೆ ಮತ್ತು ಕೆಳಗೆ ಅವರ ಭಾವಚಿತ್ರ
  • ಬೆಂಗಳೂರು ನಗರ
  • ರಾಜಕೀಯ

ನೆಹರು ಪ್ರತಿಮೆಗೆ ಪುಷ್ಪನಮನ; ನಿಗಮ ಮಂಡಳಿ ನೇಮಕದ ಎರಡನೇ ಪಟ್ಟಿ ಒಂದೆರಡು ದಿನಗಳಲ್ಲಿ: ಸಿಎಂ ಶಿವಕುಮಾರ್

November 14, 2026 10:28 PM
ರೈತರ ಆರ್ಥಿಕ ಸ್ವಾವಲಂಬನೆಗೆ ಸಹಕಾರ ಕ್ಷೇತ್ರವೇ ಹೆಬ್ಬಾಗಿಲು: 73ನೇ ಸಹಕಾರ ಸಪ್ತಾಹದಲ್ಲಿ ಸಿಎಂ ಶಿವಕುಮಾರ್ ಸಹಕಾರ ಸಪ್ತಾಹ ಉದ್ಘಾಟನೆಯಲ್ಲಿ ದೀಪದ ಬಳಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಇತರರು
  • ಕರ್ನಾಟಕ
  • ರಾಜಕೀಯ

ರೈತರ ಆರ್ಥಿಕ ಸ್ವಾವಲಂಬನೆಗೆ ಸಹಕಾರ ಕ್ಷೇತ್ರವೇ ಹೆಬ್ಬಾಗಿಲು: 73ನೇ ಸಹಕಾರ ಸಪ್ತಾಹದಲ್ಲಿ ಸಿಎಂ ಶಿವಕುಮಾರ್

November 14, 2026 10:25 PM
ಕಿದ್ವಾಯಿಯಲ್ಲಿ 200 ಹೆಚ್ಚುವರಿ ಹಾಸಿಗೆ: ಮಕ್ಕಳ ದಿನಾಚರಣೆಯಂದು ಭೇಟಿ ನೀಡಿದ ಸಿಎಂ ಶಿವಕುಮಾರ್ ಘೋಷಣೆ ಕಿದ್ವಾಯಿ ಆಸ್ಪತ್ರೆಯಲ್ಲಿ ಮಗುವಿನೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಆರೋಗ್ಯ
  • ಬೆಂಗಳೂರು ನಗರ

ಕಿದ್ವಾಯಿಯಲ್ಲಿ 200 ಹೆಚ್ಚುವರಿ ಹಾಸಿಗೆ: ಮಕ್ಕಳ ದಿನಾಚರಣೆಯಂದು ಭೇಟಿ ನೀಡಿದ ಸಿಎಂ ಶಿವಕುಮಾರ್ ಘೋಷಣೆ

November 14, 2026 10:05 PM

ನೀವು ತಪ್ಪಿಸಿಕೊಂಡಿರಬಹುದು

ಪ್ರಜಾ ಸೇವಾ ಬ್ಯಾನರ್ ಇರುವ ವಿಶ್ವನಾಥಪುರ ಪ್ರಜಾ ಸೇವಾ ಆಂದೋಲನ ಸಭೆಯ ವೇದಿಕೆ
  • ಕರ್ನಾಟಕ

ವಿಶ್ವನಾಥಪುರ ಪ್ರಜಾ ಸೇವಾ ಸಭೆ: ಅರ್ಜಿ ಸ್ವೀಕರಿಸಿದ ತಹಶೀಲ್ದಾರ್ ಅನಿಲ್, 30 ದಿನಗಳಲ್ಲಿ ಸಮಸ್ಯೆ ಇತ್ಯರ್ಥ

The Bengaluru Live November 15, 2026 9:02 AM
ಶಾಲಾ ಕಾರ್ಯಕ್ರಮದಲ್ಲಿ ಬಣ್ಣದ ಕೈಪಿಡಿಗಳನ್ನು ಹಿಡಿದ ಸಮವಸ್ತ್ರದ ಇಬ್ಬರು ವಿದ್ಯಾರ್ಥಿನಿಯರು ಮತ್ತು ಕೆಲವು ಪುರುಷರು
  • ಕರ್ನಾಟಕ
  • ವಿಜಯಪುರ
  • ಶಿಕ್ಷಣ

ಮುಂದಿನ ವರ್ಷದಿಂದ ಎಲ್‌ಕೆಜಿಯಿಂದ 12ನೇ ತರಗತಿವರೆಗೆ ಒಂದೇ ಸೂರು; ಪೋಷಕರ ಸಭೆಗಳಿಂದ ಗುಣಮಟ್ಟ ಸುಧಾರಣೆ: ಮಧು ಬಂಗಾರಪ್ಪ

The Bengaluru Live November 14, 2026 10:47 PM
ಮಕ್ಕಳ ವಿಜ್ಞಾನ ಜಾತ್ರೆಯ ವೇದಿಕೆಯಲ್ಲಿ ಅಧಿಕಾರಿಗಳು ಮತ್ತು ಕೇಸರಿ ವಸ್ತ್ರದ ಸ್ವಾಮೀಜಿ ದೀಪ ಬೆಳಗುತ್ತಿರುವುದು
  • ಕರ್ನಾಟಕ
  • ವಿಜಯಪುರ
  • ಶಿಕ್ಷಣ

ಸರ್ಕಾರಿ ಶಾಲೆಗಳಿಗೆ ಸುಮಾರು ₹4,500 ಕೋಟಿ, ಉಚಿತ ಬಸ್, ಎಲ್‌ಕೆಜಿಯಿಂದ ಪಿಯುಸಿವರೆಗೆ ಒಂದೇ ಸೂರು: ತಿಕೋಟಾದಲ್ಲಿ ಮಧು ಬಂಗಾರಪ್ಪ

The Bengaluru Live November 14, 2026 10:30 PM
ವಿಧಾನಸೌಧ ಆವರಣದಲ್ಲಿ ಹೂಮಾಲೆ ಹಾಕಿದ ಜವಾಹರಲಾಲ್ ನೆಹರು ಪ್ರತಿಮೆ ಮತ್ತು ಕೆಳಗೆ ಅವರ ಭಾವಚಿತ್ರ
  • ಬೆಂಗಳೂರು ನಗರ
  • ರಾಜಕೀಯ

ನೆಹರು ಪ್ರತಿಮೆಗೆ ಪುಷ್ಪನಮನ; ನಿಗಮ ಮಂಡಳಿ ನೇಮಕದ ಎರಡನೇ ಪಟ್ಟಿ ಒಂದೆರಡು ದಿನಗಳಲ್ಲಿ: ಸಿಎಂ ಶಿವಕುಮಾರ್

The Bengaluru Live November 14, 2026 10:28 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ವಿಶ್ವನಾಥಪುರ ಪ್ರಜಾ ಸೇವಾ ಸಭೆ: ಅರ್ಜಿ ಸ್ವೀಕರಿಸಿದ ತಹಶೀಲ್ದಾರ್ ಅನಿಲ್, 30 ದಿನಗಳಲ್ಲಿ ಸಮಸ್ಯೆ ಇತ್ಯರ್ಥ
  • ಮುಂದಿನ ವರ್ಷದಿಂದ ಎಲ್‌ಕೆಜಿಯಿಂದ 12ನೇ ತರಗತಿವರೆಗೆ ಒಂದೇ ಸೂರು; ಪೋಷಕರ ಸಭೆಗಳಿಂದ ಗುಣಮಟ್ಟ ಸುಧಾರಣೆ: ಮಧು ಬಂಗಾರಪ್ಪ
  • ಸರ್ಕಾರಿ ಶಾಲೆಗಳಿಗೆ ಸುಮಾರು ₹4,500 ಕೋಟಿ, ಉಚಿತ ಬಸ್, ಎಲ್‌ಕೆಜಿಯಿಂದ ಪಿಯುಸಿವರೆಗೆ ಒಂದೇ ಸೂರು: ತಿಕೋಟಾದಲ್ಲಿ ಮಧು ಬಂಗಾರಪ್ಪ
  • ನೆಹರು ಪ್ರತಿಮೆಗೆ ಪುಷ್ಪನಮನ; ನಿಗಮ ಮಂಡಳಿ ನೇಮಕದ ಎರಡನೇ ಪಟ್ಟಿ ಒಂದೆರಡು ದಿನಗಳಲ್ಲಿ: ಸಿಎಂ ಶಿವಕುಮಾರ್
©Copyright 2025 The Bengaluru Live All rights reserved. | MoreNews by AF themes.