ಬೆಂಗಳೂರು : ವಿವಿಧ ಬೇಡಿಕೆಗಳಿಗಾಗಿ ಆಗ್ರಹಿಸಿ ಜಂಟಿ ಕ್ರಿಯಾ ಸಮಿತಿ ಡಿ.31ರಿಂದ ಸಾರಿಗೆ ಮುಷ್ಕರಕ್ಕೆ ಕರೆ ನೀಡಿತ್ತು. ಆದರೆ ರವಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ನೇತೃತ್ವದಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಸಭೆ ಬೆನ್ನಲ್ಲೇ ಸಾರಿಗೆ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮುಷ್ಕರ ಹಿಂಪಡೆದಿದೆ.
ಸಾರಿಗೆ ಮುಷ್ಕರ ಕರೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮುಖ್ಯ ಕಾರ್ಯದರ್ಶಿ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸಾರಿಗೆ ಇಲಾಖೆ ಕಾರ್ಯದರ್ಶಿ ಸೇರಿದಂತೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ವಾಯವ್ಯ ಸಾರಿಗೆ, ಕಲ್ಯಾಣ ಕರ್ನಾಟಕ ಸಾರಿಗೆ ಎಂಡಿಗಳ ಜೊತೆ ಸಭೆ ನಡೆಸಿದ್ರು.
ಬಳಿಕ ಮಾತನಾಡಿದ ಅವರು, 13 ಬೇಡಿಕೆಗಳನ್ನು ಇಟ್ಟಿದ್ದಾರೆ. ಆದರೆ, ಬಿಜೆಪಿ ಸರ್ಕಾರ 5,900 ಕೋಟಿ ಸಾಲ ಬಿಟ್ಟು ಹೋಗಿದ್ದಾರೆ. ಸಾರಿಗೆ ನಿಗಮಗಳ ಆರ್ಥಿಕ ಸ್ಥಿತಿ ಬಗ್ಗೆ ಸಿಎಂ ಗಮನಕ್ಕೆ ತಂದಿದ್ದೇವೆ. ಸಂಕ್ರಾಂತಿ ನಂತರ ಸಿಎಂ ಜೊತೆ ಸಭೆ ಮಾಡ್ತೇವೆ ಎಂದರು.
ಸಿಎಂ 2,000 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ. ಬಜೆಟ್‌ನಲ್ಲಿ ಉಳಿದ ಮೊತ್ತ ಕೊಡ್ತಾರೆ. ಪ್ರಣಾಳಿಕೆಯಲ್ಲೂ ಸಮಾನ ವೇತನ ಅಂತ ಹೇಳಿದ್ದೇವೆ. ಬಸ್ ನಿಲ್ಲಿಸಬಾರದು. ಸಾರ್ವಜನಿಕರ ಹಿತದೃಷ್ಟಿಯಿಂದ ಕೈಬಿಡಿ ಅಂತ ಮನವಿ ಮಾಡಿದರು. ಅಲ್ಲದೇ, ಟಿಕೆಟ್ ದರ ಏರಿಕೆ ಬಗ್ಗೆ ಸಲಹೆ ಕೊಡಬಹುದು. ಎಷ್ಟು ಏರಿಕೆ ಮಾಡ್ಬೋದು ಅಂತ 4 ಬೋರ್ಡ್‌ಗಳು ಪ್ರಸ್ತಾವನೆ ಸಲ್ಲಿಸಬಹುದು. ನಾಳೆ ಜಂಟಿ ಕ್ರಿಯಾ ಸಮಿತಿ ಜೊತೆ ಸಿಎಂ ಮಾತುಕತೆ ನಡೆಸ್ತಾರೆ ಅಂತ ರಾಮಲಿಂಗಾರೆಡ್ಡಿ ಹೇಳಿದ್ರು.