Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • ರಾಜ್ಯದಲ್ಲಿ ಇನ್ನೊಂದು ವರ್ಷದಲ್ಲಿ ಎವಿಜಿಸಿ ನೀತಿ: ಅಶ್ವತ್ಥನಾರಾಯಣ
  • ಬೆಂಗಳೂರು ನಗರ

ರಾಜ್ಯದಲ್ಲಿ ಇನ್ನೊಂದು ವರ್ಷದಲ್ಲಿ ಎವಿಜಿಸಿ ನೀತಿ: ಅಶ್ವತ್ಥನಾರಾಯಣ

The Bengaluru Live January 20, 2022 5:00 PM 1 minute read
Karnataka govt launches AVGC Center of Excellence in Bengaluru

ರಾಜ್ಯದಲ್ಲಿ ಇನ್ನೊಂದು ವರ್ಷದಲ್ಲಿ ಎವಿಜಿಸಿ ನೀತಿ: ಅಶ್ವತ್ಥನಾರಾಯಣ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ದೇಶದ ಪ್ರಪ್ರಥಮ ಎವಿಜಿಸಿ ಉತ್ಕೃಷ್ಟತಾ ಕೇಂದ್ರಕ್ಕೆ ಬೆಂಗಳೂರಿನಲ್ಲಿ ಚಾಲನೆ

ಬೆಂಗಳೂರು:

ಡಿಜಿಟಲ್ ಮನೋರಂಜನಾ ಕ್ಷೇತ್ರವು ಅಗಾಧವಾಗಿ ಬೆಳೆಯುತ್ತಿದ್ದು, ಒಂದು ವರ್ಷದಲ್ಲಿ ನೂತನ `ಅನಿಮೇಷನ್, ವಿಷುಯಲ್ ಎಫೆಕ್ಟ್ಸ್, ಗೇಮಿಂಗ್ ಮತ್ತು ಕಾಮಿಕ್ಸ್ ನೀತಿ’ (ಎವಿಜಿಸಿ ಪಾಲಿಸಿ)ಯನ್ನು ರಾಜ್ಯದಲ್ಲಿ ಜಾರಿಗೆ ತರಲಾಗುವುದು ಎಂದು ಐಟಿ, ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ಇಲ್ಲಿನ ಮಹದೇವಪುರದಲ್ಲಿ ದೇಶದ ಪ್ರಪ್ರಥಮ ಮತ್ತು ಏಷ್ಯಾದ ಅತಿದೊಡ್ಡ ಅನಿಮೇಷನ್, ವಿಷುಯಲ್ ಎಫೆಕ್ಟ್ಸ್, ಗೇಮಿಂಗ್ ಮತ್ತು ಕಾಮಿಕ್ಸ್ ಉತ್ಕೃಷ್ಟತಾ ಕೇಂದ್ರ’ಕ್ಕೆ (ಎವಿಜಿಸಿ ಸೆಂಟರ್ ಆಫ್ ಎಕ್ಸಲೆನ್ಸ್) ಗುರುವಾರದಂದು ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿಡಿಜಿಟಲ್ ಮಾಧ್ಯಮ ಮನೋರಂಜನಾ ಪ್ರದೇಶ’ವನ್ನು ಕೂಡ ಇನ್ನು ಒಂದು ವರ್ಷದಲ್ಲಿ ಮಹದೇವಪುರದ ಸಮೀಪವೇ ಸ್ಥಾಪಿಸಲಾಗುವುದು. ಇದಕ್ಕೆ ಅಗತ್ಯ ಭೂಮಿಯನ್ನು ಗುರುತಿಸುವಂತೆ ಕೈಗಾರಿಕಾ ಇಲಾಖೆಗೆ ಹೇಳಲಾಗುವುದು ಎಂದರು.

Karnataka govt launches AVGC Center of Excellence in Bengaluru

ಇದರೊಂದಿಗೆ, ರಾಜ್ಯವು ಎವಿಜಿಸಿ ವಲಯದಲ್ಲಿ ಉತ್ಕೃಷ್ಟತಾ ಕೇಂದ್ರವನ್ನು ಸ್ಥಾಪಿಸಿದ ಮೊಟ್ಟಮೊದಲ ರಾಜ್ಯವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ರಾಜ್ಯವು 2012ರಲ್ಲೇ ಎವಿಜಿಸಿ ನೀತಿಯನ್ನು ಜಾರಿಗೆ ತಂದ ಹಿರಿಮೆಯನ್ನು ಕೂಡ ಹೊಂದಿರುವುದನ್ನು ಇಲ್ಲಿ ನೆನೆಯಬಹುದು. ಈ ಉತ್ಕೃಷ್ಟತಾ ಕೇಂದ್ರವನ್ನು ಅಭಯ್’ ಸಂಸ್ಥೆಯು (ಹಿಂದಿನಅಸೋಸಿಯೇಶನ್ ಆಫ್ ಬೆಂಗಳೂರು ಅನಿಮೇಷನ್ ಇಂಡಸ್ಟ್ರಿ’) ನಿರ್ವಹಿಸಲಿದೆ.

ಈ ಉತ್ಕೃಷ್ಟತಾ ಕೇಂದ್ರದೊಂದಿಗೆ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳೆಲ್ಲವೂ ಒಡಂಬಡಿಕೆ ಮಾಡಿಕೊಳ್ಳುವಂತೆ ಮಾಡಲಾಗುವುದು. ಇದರ ಜೊತೆಗೆ ರಾಜ್ಯದ ವಿ.ವಿ.ಗಳಲ್ಲಿ ಸಣ್ಣ ಪ್ರಮಾಣದ ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಇದರಿಂದ ವಿದ್ಯಾರ್ಥಿಗಳ ಕಲಿಕೆಯನ್ನು ಹೆಚ್ಚು ಆಸಕ್ತಿಕರಗೊಳಿಸಿ, ಹೆಚ್ಚುಹೆಚ್ಚು ವಿದ್ಯಾರ್ಥಿಗಳಿಗೆ ಜಾಗತಿಕ ಗುಣಮಟ್ಟದ ಶಿಕ್ಷಣ ಒದಗಿಸಬಹುದು ಎಂದು ಸಚಿವರು ನುಡಿದರು.

The center has advanced-level capabilities benefitting content creation for the digital world. The CoE houses three main facilities under one roof with a complete state-of-the-art post-production with real-time infrastructure. pic.twitter.com/kgLou6io6W

— Dr. Ashwathnarayan C. N. (@drashwathcn) January 20, 2022

ದಕ್ಷಿಣ ಏಷ್ಯಾದ ಅತ್ಯಾಧುನಿಕ ಡಿಜಿಟಲ್ ಮಾಧ್ಯಮ ತಾಣವಾಗಿರುವ ಈ ಎವಿಜಿಸಿ ಉತ್ಕೃಷ್ಟತಾ ಕೇಂದ್ರಕ್ಕೆ ರಾಜ್ಯ ವಿದ್ಯುನ್ಮಾನ, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯು `ಇನ್ನೋವೇಟ್ ಕರ್ನಾಟಕ’ ಉಪಕ್ರಮದಡಿ ಅಗತ್ಯ ಹಣಕಾಸು ನೆರವು ನೀಡಲಾಗಿದೆ ಎಂದರು.

`ದಕ್ಷಿಣ ಕೊರಿಯಾದಂತಹ ಸಣ್ಣ ದೇಶ ಇಂದು ಟ್ರಿಲಿಯನ್ ಮೌಲ್ಯದ ಆರ್ಥಿಕ ಶಕ್ತಿಯಾಗಿ ಬೆಳೆದಿದೆ. ಮನೋರಂಜನೆ ಮತ್ತು ಅದಕ್ಕೆ ಪೂರಕವಾಗಿರುವ ಇತರ ಕ್ಷೇತ್ರಗಳನ್ನು ನಮ್ಮ ಚಿತ್ರೋದ್ಯಮ, ಫೋಟೋಗ್ರಫಿ ಜಾಹೀರಾತು, ಮಾಧ್ಯಮಲೋಕ, ಅನಿಮೇಷನ್ ಮತ್ತು ಗ್ರಾಫಿಕ್ಸ್ ವಲಯಗಳು ಸಹ ಗರಿಷ್ಠ ಮಟ್ಟದಲ್ಲಿ ಬೆಳೆಸಿಕೊಳ್ಳಬೇಕು. ಹೀಗಾದರೆ, 2030ರ ಹೊತ್ತಿಗೆ ಕರ್ನಾಟಕ ಕೂಡ ಟ್ರಿಲಿಯನ್ ಆರ್ಥಿಕತೆಯಾಗಿ ಬೆಳೆಯಬಹುದು’ ಎಂದು ಅವರು ಸೂಚಿಸಿದರು.

In India, AVGC is growing at 20%, one of the fastest-growing globally. Karnataka has ample opportunity to maximise growth with this Centre of Excellence.@AshwiniVaishnaw @Rajeev_GoI @karnatakadem @investkarnataka

— Dr. Ashwathnarayan C. N. (@drashwathcn) January 20, 2022

ಇಲ್ಲಿರುವ `ಫಿನಿಶಿಂಗ್ ಸ್ಕೂಲ್’ನಲ್ಲಿ ಭವಿಷ್ಯದ ತಂತ್ರಜ್ಞಾನಗಳಾದ ವರ್ಚುಯಲ್ ರಿಯಾಲಿಟಿ, ಡಿಜಿಟಲ್ ಕಂಪ್ರೆಷನ್, ಫೋಟೋಗ್ರಾಮಿಟ್ರಿ, ಶೈಕ್ಷಣಿಕ ಗೇಮಿಫಿಕೇಶನ್ ಮುಂತಾದವುಗಳಲ್ಲಿ ವಿಶಿಷ್ಟ ಕೋರ್ಸುಗಳನ್ನು ಕಲಿಸಲಾಗುವುದು ಎಂದು ಸಚಿವರು ನುಡಿದರು.

ಎವಿಜಿಸಿ ಉತ್ಕೃಷ್ಟತಾ ಕೇಂದ್ರವು ಜಾಗತಿಕ ಮಟ್ಟದ ಅತ್ಯಾಧುನಿಕ ಮೂಲಸೌಲಭ್ಯಗಳನ್ನು ಹೊಂದಿದೆ. ವೈಯಕ್ತಿಕ ಮಟ್ಟದಲ್ಲಿ ಇದು ಸಾಧ್ಯವಿಲ್ಲ. ಆದ್ದರಿಂದ, ಎವಿಜಿಸಿ ವೃತ್ತಿಪರರಿಗೆ ಒಂದೇ ಕಡೆ ಅಗತ್ಯ ಸೌಲಭ್ಯಗಳು ಸಿಗಬೇಕೆನ್ನುವ ದೃಷ್ಟಿಯಿಂದ ಈ ಕೇಂದ್ರವನ್ನು ಸ್ಥಾಪಿಸಲಾಗಿದೆ ಎಂದು ಅವರು ವಿವರಿಸಿದರು.

We have 55 fine arts colleges and the best infrastructure and technology. Also, #NEP2020 implementation has enabled us to integrate our offerings in every field of education.@CMofKarnataka @KarnatakaVarthe pic.twitter.com/La1PssHrlM

— Dr. Ashwathnarayan C. N. (@drashwathcn) January 20, 2022

ಕಾರ್ಯಕ್ರಮದಲ್ಲಿ ಮಾತನಾಡಿದ ವಿದ್ಯುನ್ಮಾನ, ಐಟಿ ಮತ್ತು ಬಿಟಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ.ರಮಣ ರೆಡ್ಡಿ, `ಈ ಕೇಂದ್ರದಿಂದಾಗಿ ರಾಜ್ಯದಲ್ಲಿರುವ ಎವಿಜಿಸಿ ವಲಯದ ಕಾರ್ಯ ಪರಿಸರಕ್ಕೆ ಮತ್ತಷ್ಟು ಲಾಭವಾಗಲಿದೆ’ ಎಂದರು.

Also Read: Karnataka govt launches AVGC Center of Excellence in Bengaluru

ಕಾರ್ಯಕ್ರಮದಲ್ಲಿ ಶಾಸಕ ಅರವಿಂದ ಲಿಂಬಾವಳಿ ಮಾತನಾಡಿದರು. ಐಟಿ ಮತ್ತು ಬಿಟಿ ಇಲಾಖೆಯ ನಿರ್ದೇಶಕಿ ಸಿ.ಎನ್. ಮೀನಾ ನಾಗರಾಜ್, ಬೆಂಗಳೂರು ಅನಿಮೇಷನ್ ಉದ್ಯಮ ಒಕ್ಕೂಟದ ಅಧ್ಯಕ್ಷ ಬೀರೇನ್ ಘೋಷ್, ಕಾರ್ಯದರ್ಶಿ ಬಿ.ಎಸ್. ಶ್ರೀನಿವಾಸ್ ಉಪಸ್ಥಿತರಿದ್ದರು.

About the Author

The Bengaluru Live

Administrator

Visit Website View All Posts

Post navigation

Previous: ರಾಮನಗರ ಸರಕಾರಿ ಎಂಜಿನಿಯರಿಂಗ್ ಕಾಲೇಜು: ಜೂನ್ ಹೊತ್ತಿಗೆ ಕಾಮಗಾರಿ ಮುಗಿಸಲು ಸೂಚನೆ
Next: ಕವಿ ಚನ್ನವೀರ ಕಣವಿ ಅವರ ಚಿಕಿತ್ಸಾ ವೆಚ್ಚ ಭರಿಸಲಿರುವ ಸರ್ಕಾರ: ಸಿಎಂ ಬಸವರಾಜ ಬೊಮ್ಮಾಯಿ

Related Stories

ರೈಲು ನಿಲ್ದಾಣದ ಟಿಕೆಟ್ ಕೌಂಟರ್‌ಗಳ ಮುಂದೆ ಸರತಿ ಸಾಲಿನ ಕಂಬಗಳ ಬಳಿ ನಿಂತಿರುವ ಪ್ರಯಾಣಿಕರು
  • ಕರ್ನಾಟಕ
  • ಬೆಂಗಳೂರು ನಗರ

ಕಾನ್ಪುರ ಸೆಂಟ್ರಲ್–ಎಸ್‌ಎಂವಿಟಿ ಬೆಂಗಳೂರು ನಡುವಿನ ಸಾಪ್ತಾಹಿಕ ವಿಶೇಷ ರೈಲು ಡಿ.30ರವರೆಗೆ ವಿಸ್ತರಣೆ, ಪ್ರತಿ ದಿಕ್ಕಿನಲ್ಲಿ ಆರು ಟ್ರಿಪ್

The Bengaluru Live November 22, 2026 8:08 AM
ಪರಿಶೀಲನೆ ವೇಳೆ ಮರಗಳಿರುವ ಕೆರೆಯ ದಡದಲ್ಲಿ ನಿಂತಿರುವ ಅಧಿಕಾರಿಗಳು
  • ಬೆಂಗಳೂರು ನಗರ

ಪಶ್ಚಿಮ ನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಐದು ವಿಭಾಗಗಳ ಪರಿಶೀಲನೆ: ಕಸ ತೆರವು, ಕೆರೆ ಹೂಳೆತ್ತುವಿಕೆ, ಜಂಕ್ಷನ್ ಕಾಮಗಾರಿಗೆ ಸೂಚನೆ

The Bengaluru Live November 21, 2026 7:39 PM
ರಾತ್ರಿ ವೇಳೆ ರಸ್ತೆಯಲ್ಲಿ ಬಿಳಿ ಅಂಗಿ ಧರಿಸಿದ ಅಧಿಕಾರಿಗಳು ನಿಂತಿದ್ದು ಒಬ್ಬರು ಜೆಟ್ ಹೋಸ್‌ನಿಂದ ನೀರು ಚಿಮ್ಮಿಸುತ್ತಿದ್ದಾರೆ
  • ಬೆಂಗಳೂರು ನಗರ

ಕೇಂದ್ರ ನಗರ ಪಾಲಿಕೆಯ ಪ್ರತಿ ವಿಭಾಗಕ್ಕೆ ಒಂದು ಜೆಟ್ ಸ್ಪ್ರೇ ವಾಹನ: ವಿಧಾನಸೌಧ ಬಳಿ ಪ್ರಾತ್ಯಕ್ಷಿಕೆ ಪರಿಶೀಲಿಸಿದ ಆಯುಕ್ತ ಜಗದೀಶ್

The Bengaluru Live November 21, 2026 7:36 PM

Latest Post

ಕರ್ನಾಟಕ ಹವಾಮಾನ: ಒಣ ಹವೆ ಮುಂದುವರಿಕೆ, ನವೆಂಬರ್ 24ರಿಂದ 26ರವರೆಗೆ ಕೆಲವೆಡೆ ಮಳೆ ಸಾಧ್ಯತೆ ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ಕರ್ನಾಟಕ ಹವಾಮಾನ: ಒಣ ಹವೆ ಮುಂದುವರಿಕೆ, ನವೆಂಬರ್ 24ರಿಂದ 26ರವರೆಗೆ ಕೆಲವೆಡೆ ಮಳೆ ಸಾಧ್ಯತೆ

November 22, 2026 2:01 PM
ನವೆಂಬರ್ 23ರಿಂದ ಕರ್ನಾಟಕದ ಕೆಲವೆಡೆ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ನವೆಂಬರ್ 23ರಿಂದ ಕರ್ನಾಟಕದ ಕೆಲವೆಡೆ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ

November 22, 2026 11:32 AM
ಕಾಂಗೋದಲ್ಲಿ 95 ಹಕ್ಕಿಪಿಕ್ಕಿ ಸಮುದಾಯದವರು ವಶಕ್ಕೆ ಎಂಬ ವರದಿ: ನೆರವಿಗೆ ಮನವಿ ಸಾಂಪ್ರದಾಯಿಕ ಉಡುಪಿನಲ್ಲಿರುವ ಮಹಿಳೆಯೊಂದಿಗೆ ಮೈಕ್‌ನಲ್ಲಿ ಮಾತನಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಸುತ್ತ ಕುಳಿತಿರುವ ಜನರು
  • ಕರ್ನಾಟಕ

ಕಾಂಗೋದಲ್ಲಿ 95 ಹಕ್ಕಿಪಿಕ್ಕಿ ಸಮುದಾಯದವರು ವಶಕ್ಕೆ ಎಂಬ ವರದಿ: ನೆರವಿಗೆ ಮನವಿ

November 22, 2026 11:16 AM
ಕಾನ್ಪುರ ಸೆಂಟ್ರಲ್–ಎಸ್‌ಎಂವಿಟಿ ಬೆಂಗಳೂರು ನಡುವಿನ ಸಾಪ್ತಾಹಿಕ ವಿಶೇಷ ರೈಲು ಡಿ.30ರವರೆಗೆ ವಿಸ್ತರಣೆ, ಪ್ರತಿ ದಿಕ್ಕಿನಲ್ಲಿ ಆರು ಟ್ರಿಪ್ ರೈಲು ನಿಲ್ದಾಣದ ಟಿಕೆಟ್ ಕೌಂಟರ್‌ಗಳ ಮುಂದೆ ಸರತಿ ಸಾಲಿನ ಕಂಬಗಳ ಬಳಿ ನಿಂತಿರುವ ಪ್ರಯಾಣಿಕರು
  • ಕರ್ನಾಟಕ
  • ಬೆಂಗಳೂರು ನಗರ

ಕಾನ್ಪುರ ಸೆಂಟ್ರಲ್–ಎಸ್‌ಎಂವಿಟಿ ಬೆಂಗಳೂರು ನಡುವಿನ ಸಾಪ್ತಾಹಿಕ ವಿಶೇಷ ರೈಲು ಡಿ.30ರವರೆಗೆ ವಿಸ್ತರಣೆ, ಪ್ರತಿ ದಿಕ್ಕಿನಲ್ಲಿ ಆರು ಟ್ರಿಪ್

November 22, 2026 8:08 AM
ಪಿಜಿ ಆಯುಷ್: ಮೊದಲ ಸುತ್ತಿನ ಸೀಟು ಹಂಚಿಕೆಯ ಅಣಕು ಫಲಿತಾಂಶ ಪ್ರಕಟ, 887 ಮಂದಿಗೆ ಸೀಟು, ನ.24ರವರೆಗೆ ಆಯ್ಕೆ ಬದಲಾವಣೆಗೆ ಅವಕಾಶ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಹೆಸರಿನ ಫಲಕ ಮತ್ತು ಲಾಂಛನದ ಮುಂದೆ ತಮ್ಮ ಮೇಜಿನ ಬಳಿ ಮಾತನಾಡುತ್ತಿರುವ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ
  • ಶಿಕ್ಷಣ

ಪಿಜಿ ಆಯುಷ್: ಮೊದಲ ಸುತ್ತಿನ ಸೀಟು ಹಂಚಿಕೆಯ ಅಣಕು ಫಲಿತಾಂಶ ಪ್ರಕಟ, 887 ಮಂದಿಗೆ ಸೀಟು, ನ.24ರವರೆಗೆ ಆಯ್ಕೆ ಬದಲಾವಣೆಗೆ ಅವಕಾಶ

November 22, 2026 8:06 AM
ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟಿಸಿದ ಕೆಪಿಎಸ್‌ಸಿ: ನವೆಂಬರ್ 23ರ ಬೆಳಿಗ್ಗೆ 11ರವರೆಗೆ ಆಕ್ಷೇಪಣೆಗೆ ಅವಕಾಶ ಕಮಾನು ಬಾಲ್ಕನಿಗಳು ಮತ್ತು ಪ್ರವೇಶದ್ವಾರದಲ್ಲಿ ಪ್ರತಿಮೆ ಇರುವ ಬೂದು ಕಲ್ಲಿನ ಕಟ್ಟಡ, ಕರ್ನಾಟಕ ಲೋಕಸೇವಾ ಆಯೋಗದ ಕಚೇರಿ
  • ಕರ್ನಾಟಕ

ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟಿಸಿದ ಕೆಪಿಎಸ್‌ಸಿ: ನವೆಂಬರ್ 23ರ ಬೆಳಿಗ್ಗೆ 11ರವರೆಗೆ ಆಕ್ಷೇಪಣೆಗೆ ಅವಕಾಶ

November 22, 2026 7:42 AM

ನೀವು ತಪ್ಪಿಸಿಕೊಂಡಿರಬಹುದು

ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ಕರ್ನಾಟಕ ಹವಾಮಾನ: ಒಣ ಹವೆ ಮುಂದುವರಿಕೆ, ನವೆಂಬರ್ 24ರಿಂದ 26ರವರೆಗೆ ಕೆಲವೆಡೆ ಮಳೆ ಸಾಧ್ಯತೆ

The Bengaluru Live November 22, 2026 2:01 PM
ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ನವೆಂಬರ್ 23ರಿಂದ ಕರ್ನಾಟಕದ ಕೆಲವೆಡೆ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ

The Bengaluru Live November 22, 2026 11:32 AM
ಸಾಂಪ್ರದಾಯಿಕ ಉಡುಪಿನಲ್ಲಿರುವ ಮಹಿಳೆಯೊಂದಿಗೆ ಮೈಕ್‌ನಲ್ಲಿ ಮಾತನಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಸುತ್ತ ಕುಳಿತಿರುವ ಜನರು
  • ಕರ್ನಾಟಕ

ಕಾಂಗೋದಲ್ಲಿ 95 ಹಕ್ಕಿಪಿಕ್ಕಿ ಸಮುದಾಯದವರು ವಶಕ್ಕೆ ಎಂಬ ವರದಿ: ನೆರವಿಗೆ ಮನವಿ

The Bengaluru Live November 22, 2026 11:16 AM
ರೈಲು ನಿಲ್ದಾಣದ ಟಿಕೆಟ್ ಕೌಂಟರ್‌ಗಳ ಮುಂದೆ ಸರತಿ ಸಾಲಿನ ಕಂಬಗಳ ಬಳಿ ನಿಂತಿರುವ ಪ್ರಯಾಣಿಕರು
  • ಕರ್ನಾಟಕ
  • ಬೆಂಗಳೂರು ನಗರ

ಕಾನ್ಪುರ ಸೆಂಟ್ರಲ್–ಎಸ್‌ಎಂವಿಟಿ ಬೆಂಗಳೂರು ನಡುವಿನ ಸಾಪ್ತಾಹಿಕ ವಿಶೇಷ ರೈಲು ಡಿ.30ರವರೆಗೆ ವಿಸ್ತರಣೆ, ಪ್ರತಿ ದಿಕ್ಕಿನಲ್ಲಿ ಆರು ಟ್ರಿಪ್

The Bengaluru Live November 22, 2026 8:08 AM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಕರ್ನಾಟಕ ಹವಾಮಾನ: ಒಣ ಹವೆ ಮುಂದುವರಿಕೆ, ನವೆಂಬರ್ 24ರಿಂದ 26ರವರೆಗೆ ಕೆಲವೆಡೆ ಮಳೆ ಸಾಧ್ಯತೆ
  • ನವೆಂಬರ್ 23ರಿಂದ ಕರ್ನಾಟಕದ ಕೆಲವೆಡೆ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ
  • ಕಾಂಗೋದಲ್ಲಿ 95 ಹಕ್ಕಿಪಿಕ್ಕಿ ಸಮುದಾಯದವರು ವಶಕ್ಕೆ ಎಂಬ ವರದಿ: ನೆರವಿಗೆ ಮನವಿ
  • ಕಾನ್ಪುರ ಸೆಂಟ್ರಲ್–ಎಸ್‌ಎಂವಿಟಿ ಬೆಂಗಳೂರು ನಡುವಿನ ಸಾಪ್ತಾಹಿಕ ವಿಶೇಷ ರೈಲು ಡಿ.30ರವರೆಗೆ ವಿಸ್ತರಣೆ, ಪ್ರತಿ ದಿಕ್ಕಿನಲ್ಲಿ ಆರು ಟ್ರಿಪ್
©Copyright 2025 The Bengaluru Live All rights reserved. | MoreNews by AF themes.