ದೇಶದ ಪ್ರಪ್ರಥಮ ಎವಿಜಿಸಿ ಉತ್ಕೃಷ್ಟತಾ ಕೇಂದ್ರಕ್ಕೆ ಬೆಂಗಳೂರಿನಲ್ಲಿ ಚಾಲನೆ
ಬೆಂಗಳೂರು:
ಡಿಜಿಟಲ್ ಮನೋರಂಜನಾ ಕ್ಷೇತ್ರವು ಅಗಾಧವಾಗಿ ಬೆಳೆಯುತ್ತಿದ್ದು, ಒಂದು ವರ್ಷದಲ್ಲಿ ನೂತನ `ಅನಿಮೇಷನ್, ವಿಷುಯಲ್ ಎಫೆಕ್ಟ್ಸ್, ಗೇಮಿಂಗ್ ಮತ್ತು ಕಾಮಿಕ್ಸ್ ನೀತಿ’ (ಎವಿಜಿಸಿ ಪಾಲಿಸಿ)ಯನ್ನು ರಾಜ್ಯದಲ್ಲಿ ಜಾರಿಗೆ ತರಲಾಗುವುದು ಎಂದು ಐಟಿ, ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.
ಇಲ್ಲಿನ ಮಹದೇವಪುರದಲ್ಲಿ ದೇಶದ ಪ್ರಪ್ರಥಮ ಮತ್ತು ಏಷ್ಯಾದ ಅತಿದೊಡ್ಡ ಅನಿಮೇಷನ್, ವಿಷುಯಲ್ ಎಫೆಕ್ಟ್ಸ್, ಗೇಮಿಂಗ್ ಮತ್ತು ಕಾಮಿಕ್ಸ್ ಉತ್ಕೃಷ್ಟತಾ ಕೇಂದ್ರ’ಕ್ಕೆ (ಎವಿಜಿಸಿ ಸೆಂಟರ್ ಆಫ್ ಎಕ್ಸಲೆನ್ಸ್) ಗುರುವಾರದಂದು ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ
ಡಿಜಿಟಲ್ ಮಾಧ್ಯಮ ಮನೋರಂಜನಾ ಪ್ರದೇಶ’ವನ್ನು ಕೂಡ ಇನ್ನು ಒಂದು ವರ್ಷದಲ್ಲಿ ಮಹದೇವಪುರದ ಸಮೀಪವೇ ಸ್ಥಾಪಿಸಲಾಗುವುದು. ಇದಕ್ಕೆ ಅಗತ್ಯ ಭೂಮಿಯನ್ನು ಗುರುತಿಸುವಂತೆ ಕೈಗಾರಿಕಾ ಇಲಾಖೆಗೆ ಹೇಳಲಾಗುವುದು ಎಂದರು.

ಇದರೊಂದಿಗೆ, ರಾಜ್ಯವು ಎವಿಜಿಸಿ ವಲಯದಲ್ಲಿ ಉತ್ಕೃಷ್ಟತಾ ಕೇಂದ್ರವನ್ನು ಸ್ಥಾಪಿಸಿದ ಮೊಟ್ಟಮೊದಲ ರಾಜ್ಯವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ರಾಜ್ಯವು 2012ರಲ್ಲೇ ಎವಿಜಿಸಿ ನೀತಿಯನ್ನು ಜಾರಿಗೆ ತಂದ ಹಿರಿಮೆಯನ್ನು ಕೂಡ ಹೊಂದಿರುವುದನ್ನು ಇಲ್ಲಿ ನೆನೆಯಬಹುದು. ಈ ಉತ್ಕೃಷ್ಟತಾ ಕೇಂದ್ರವನ್ನು ಅಭಯ್’ ಸಂಸ್ಥೆಯು (ಹಿಂದಿನ
ಅಸೋಸಿಯೇಶನ್ ಆಫ್ ಬೆಂಗಳೂರು ಅನಿಮೇಷನ್ ಇಂಡಸ್ಟ್ರಿ’) ನಿರ್ವಹಿಸಲಿದೆ.
ಈ ಉತ್ಕೃಷ್ಟತಾ ಕೇಂದ್ರದೊಂದಿಗೆ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳೆಲ್ಲವೂ ಒಡಂಬಡಿಕೆ ಮಾಡಿಕೊಳ್ಳುವಂತೆ ಮಾಡಲಾಗುವುದು. ಇದರ ಜೊತೆಗೆ ರಾಜ್ಯದ ವಿ.ವಿ.ಗಳಲ್ಲಿ ಸಣ್ಣ ಪ್ರಮಾಣದ ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಇದರಿಂದ ವಿದ್ಯಾರ್ಥಿಗಳ ಕಲಿಕೆಯನ್ನು ಹೆಚ್ಚು ಆಸಕ್ತಿಕರಗೊಳಿಸಿ, ಹೆಚ್ಚುಹೆಚ್ಚು ವಿದ್ಯಾರ್ಥಿಗಳಿಗೆ ಜಾಗತಿಕ ಗುಣಮಟ್ಟದ ಶಿಕ್ಷಣ ಒದಗಿಸಬಹುದು ಎಂದು ಸಚಿವರು ನುಡಿದರು.
The center has advanced-level capabilities benefitting content creation for the digital world. The CoE houses three main facilities under one roof with a complete state-of-the-art post-production with real-time infrastructure. pic.twitter.com/kgLou6io6W
— Dr. Ashwathnarayan C. N. (@drashwathcn) January 20, 2022
ದಕ್ಷಿಣ ಏಷ್ಯಾದ ಅತ್ಯಾಧುನಿಕ ಡಿಜಿಟಲ್ ಮಾಧ್ಯಮ ತಾಣವಾಗಿರುವ ಈ ಎವಿಜಿಸಿ ಉತ್ಕೃಷ್ಟತಾ ಕೇಂದ್ರಕ್ಕೆ ರಾಜ್ಯ ವಿದ್ಯುನ್ಮಾನ, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯು `ಇನ್ನೋವೇಟ್ ಕರ್ನಾಟಕ’ ಉಪಕ್ರಮದಡಿ ಅಗತ್ಯ ಹಣಕಾಸು ನೆರವು ನೀಡಲಾಗಿದೆ ಎಂದರು.
`ದಕ್ಷಿಣ ಕೊರಿಯಾದಂತಹ ಸಣ್ಣ ದೇಶ ಇಂದು ಟ್ರಿಲಿಯನ್ ಮೌಲ್ಯದ ಆರ್ಥಿಕ ಶಕ್ತಿಯಾಗಿ ಬೆಳೆದಿದೆ. ಮನೋರಂಜನೆ ಮತ್ತು ಅದಕ್ಕೆ ಪೂರಕವಾಗಿರುವ ಇತರ ಕ್ಷೇತ್ರಗಳನ್ನು ನಮ್ಮ ಚಿತ್ರೋದ್ಯಮ, ಫೋಟೋಗ್ರಫಿ ಜಾಹೀರಾತು, ಮಾಧ್ಯಮಲೋಕ, ಅನಿಮೇಷನ್ ಮತ್ತು ಗ್ರಾಫಿಕ್ಸ್ ವಲಯಗಳು ಸಹ ಗರಿಷ್ಠ ಮಟ್ಟದಲ್ಲಿ ಬೆಳೆಸಿಕೊಳ್ಳಬೇಕು. ಹೀಗಾದರೆ, 2030ರ ಹೊತ್ತಿಗೆ ಕರ್ನಾಟಕ ಕೂಡ ಟ್ರಿಲಿಯನ್ ಆರ್ಥಿಕತೆಯಾಗಿ ಬೆಳೆಯಬಹುದು’ ಎಂದು ಅವರು ಸೂಚಿಸಿದರು.
In India, AVGC is growing at 20%, one of the fastest-growing globally. Karnataka has ample opportunity to maximise growth with this Centre of Excellence.@AshwiniVaishnaw @Rajeev_GoI @karnatakadem @investkarnataka
— Dr. Ashwathnarayan C. N. (@drashwathcn) January 20, 2022
ಇಲ್ಲಿರುವ `ಫಿನಿಶಿಂಗ್ ಸ್ಕೂಲ್’ನಲ್ಲಿ ಭವಿಷ್ಯದ ತಂತ್ರಜ್ಞಾನಗಳಾದ ವರ್ಚುಯಲ್ ರಿಯಾಲಿಟಿ, ಡಿಜಿಟಲ್ ಕಂಪ್ರೆಷನ್, ಫೋಟೋಗ್ರಾಮಿಟ್ರಿ, ಶೈಕ್ಷಣಿಕ ಗೇಮಿಫಿಕೇಶನ್ ಮುಂತಾದವುಗಳಲ್ಲಿ ವಿಶಿಷ್ಟ ಕೋರ್ಸುಗಳನ್ನು ಕಲಿಸಲಾಗುವುದು ಎಂದು ಸಚಿವರು ನುಡಿದರು.
ಎವಿಜಿಸಿ ಉತ್ಕೃಷ್ಟತಾ ಕೇಂದ್ರವು ಜಾಗತಿಕ ಮಟ್ಟದ ಅತ್ಯಾಧುನಿಕ ಮೂಲಸೌಲಭ್ಯಗಳನ್ನು ಹೊಂದಿದೆ. ವೈಯಕ್ತಿಕ ಮಟ್ಟದಲ್ಲಿ ಇದು ಸಾಧ್ಯವಿಲ್ಲ. ಆದ್ದರಿಂದ, ಎವಿಜಿಸಿ ವೃತ್ತಿಪರರಿಗೆ ಒಂದೇ ಕಡೆ ಅಗತ್ಯ ಸೌಲಭ್ಯಗಳು ಸಿಗಬೇಕೆನ್ನುವ ದೃಷ್ಟಿಯಿಂದ ಈ ಕೇಂದ್ರವನ್ನು ಸ್ಥಾಪಿಸಲಾಗಿದೆ ಎಂದು ಅವರು ವಿವರಿಸಿದರು.
We have 55 fine arts colleges and the best infrastructure and technology. Also, #NEP2020 implementation has enabled us to integrate our offerings in every field of education.@CMofKarnataka @KarnatakaVarthe pic.twitter.com/La1PssHrlM
— Dr. Ashwathnarayan C. N. (@drashwathcn) January 20, 2022
ಕಾರ್ಯಕ್ರಮದಲ್ಲಿ ಮಾತನಾಡಿದ ವಿದ್ಯುನ್ಮಾನ, ಐಟಿ ಮತ್ತು ಬಿಟಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ.ರಮಣ ರೆಡ್ಡಿ, `ಈ ಕೇಂದ್ರದಿಂದಾಗಿ ರಾಜ್ಯದಲ್ಲಿರುವ ಎವಿಜಿಸಿ ವಲಯದ ಕಾರ್ಯ ಪರಿಸರಕ್ಕೆ ಮತ್ತಷ್ಟು ಲಾಭವಾಗಲಿದೆ’ ಎಂದರು.
Also Read: Karnataka govt launches AVGC Center of Excellence in Bengaluru
ಕಾರ್ಯಕ್ರಮದಲ್ಲಿ ಶಾಸಕ ಅರವಿಂದ ಲಿಂಬಾವಳಿ ಮಾತನಾಡಿದರು. ಐಟಿ ಮತ್ತು ಬಿಟಿ ಇಲಾಖೆಯ ನಿರ್ದೇಶಕಿ ಸಿ.ಎನ್. ಮೀನಾ ನಾಗರಾಜ್, ಬೆಂಗಳೂರು ಅನಿಮೇಷನ್ ಉದ್ಯಮ ಒಕ್ಕೂಟದ ಅಧ್ಯಕ್ಷ ಬೀರೇನ್ ಘೋಷ್, ಕಾರ್ಯದರ್ಶಿ ಬಿ.ಎಸ್. ಶ್ರೀನಿವಾಸ್ ಉಪಸ್ಥಿತರಿದ್ದರು.