Home ಬೆಂಗಳೂರು ನಗರ Karnataka legislative Council Chairman Basavaraj Horatti in Limca Book of Records| ಲಿಮ್ಕಾ...

Karnataka legislative Council Chairman Basavaraj Horatti in Limca Book of Records| ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ಪಟ್ಟಿಯಲ್ಲಿ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ

224
0
Basavaraj Horrati

ಬೆಂಗಳೂರು:

ಒಂದೇ ಕ್ಷೇತ್ರದಿಂದ ಸತತ ಎಂಟು ಬಾರಿ ಆಯ್ಕೆಯಾಗಿ ದಾಖಲೆ ನಿರ್ಮಿಸಿರುವ ಸಭಾಪತಿ ಬಸವರಾಜ ಹೊರಟ್ಟಿ ಅವರ ಹೆಸರು ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ದಾಖಲೆಯ ಗರಿ ಸೇರ್ಪಡೆಯಾಗಿದೆ.

1990ರಲ್ಲಿ ಆರಂಭಗೊಂಡ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ಸಂಸ್ಥೆ ಭಾರತೀಯರ ವಿಶ್ವ ದಾಖಲೆಗಳನ್ನು ದಾಖಲಿಸುವ ಸಂಸ್ಥೆಯಾಗಿದೆ.

ಭಾರತದಲ್ಲಿ ಪ್ರಕಟವಾದ 2024ನೇ ಸಾಲಿನ ವಾರ್ಷಿಕ ಪುಸ್ತಕದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರ ಐತಿಹಾಸಿಕ ದಾಖಲೆಗಳನ್ನು ದಾಖಲಿಸಿ ಪ್ರಕಟಿಸಲಾಗಿದೆ.

ಈ ಬಾರಿಯ ವಾರ್ಷಿಕ ಪುಸ್ತಕದಲ್ಲಿ ಸಿಕ್ಕಿಂ ರಾಜ್ಯದ ಮಾಜಿ ಮುಖ್ಯಮಂತ್ರಿ ಪವನ್ ಕುಮಾರ್ ಅವರು 24 ವರ್ಷ 165 ದಿನಗಳ ಕಾಲ ಮುಖ್ಯಮಂತ್ರಿಯಾಗಿ ಸಲ್ಲಿಸಿದ ಸೇವಾ ಅವಧಿ ದಿನಗಳನ್ನು ದಾಖಲಿಸಲಾಗಿದೆ. ಜೊತೆಗೆ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಜ್ಯೋತಿ ಬಸು ಅವರ 23 ವರ್ಷ 137 ದಿನಗಳ ಕಾಲ ಮುಖ್ಯಮಂತ್ರಿ ಅವಧಿಯನ್ನು ದಾಖಲಿಸಲಾಗಿದೆ.

ಸಭಾಪತಿ ಬಸವರಾಜ ಹೊರಟ್ಟಿ ಅವರು 1980 ರಿಂದ ಸ್ಪರ್ಧಿಸಿದ ಎಲ್ಲ ಚುನಾವಣೆಗಳಲ್ಲಿ ಜಯಗಳಿಸಿದ ಅಂಕಿ ಸಂಖ್ಯೆಗಳು ಹಾಗೂ ಇನ್ನಿತರ ಮಾಹಿತಿ ನೀಡಲಾಗಿದೆ. ಹೊರಟ್ಟಿ ಅವರು 1980ರಿಂದ ವಿಧಾನ ಪರಿಷತ್‌ ಸದಸ್ಯರಾಗಿದ್ದಾರೆ. 43 ವರ್ಷ 201 ದಿನಗಳ ಕಾಲ ಒಂದೇ ಕ್ಷೇತ್ರದ ಪ್ರತಿನಿಧಿಯಾಗಿದ್ದಾರೆ. ಈ ದಾಖಲೆ ನಿರ್ಮಿಸಿರುವುದಕ್ಕಾಗಿ ಅವರ ಹೆಸರನ್ನು ಲಿಮ್ಕಾ ದಾಖಲೆ ಪುಸ್ತಕದಲ್ಲಿ ಸೇರಿಸಲಾಗಿದೆ.

LEAVE A REPLY

Please enter your comment!
Please enter your name here