ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ 11 ಅಭ್ಯರ್ಥಿಗಳೂ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಕಾಂಗ್ರೆಸ್‌ನಿಂದ 7, ಬಿಜೆಪಿಯಿಂದ 3, ಜೆಡಿಎಸ್‌ನಿಂದ 1 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಸಂಬಂಧ ಚುನಾವಣಾ ಅಧಿಕಾರಿ ವಿಶಾಲಾಕ್ಷಿ ಅಧಿಕೃತ ಘೋಷಣೆ ಮಾಡಿದ್ದಾರೆ.
ಕಾಂಗ್ರೆಸ್‌ನಿಂದ ಕಾಂಗ್ರೆಸ್ ಪಕ್ಷದ ಶ್ರೀ ಐವಾನ್ ಡಿ’ ಸೋಜಾ, ಶ್ರೀ ಕೆ. ಗೋವಿಂದರಾಜ್, ಶ್ರೀ ಜಗದೇವ ಗುತ್ತೇದಾರ್, ಶ್ರೀಮತಿ ಬಲ್ಲೀಸ್ ಬಾನು, ಶ್ರೀ ಎನ್.ಎಸ್. ಬೋಸರಾಜು, ಡಾ. ಯತೀಂದ್ರ ಎಸ್. ಹಾಗೂ ಶ್ರೀ ಎ. ವಸಂತ ಕುಮಾರ ಮತ್ತು ಭಾರತೀಯ ಜನತಾ ಪಾರ್ಟಿಯ ಶ್ರೀ ಮೂಳೆ ಮಾರುತಿರಾವ್ ಹಾಗೂ ಜನತಾದಳ(ಜಾ) ಪಕ್ಷದ ಶ್ರೀ ಟಿ.ಎನ್.ಜವರಾಯಿ ಗೌಡ ಅವರುಗಳು ಚುನಾವಣಾಧಿಕಾರಿ ಹಾಗೂ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರಿಂದ ಚುನಾವಣಾ ಪ್ರಮಾಣಪತ್ರವನ್ನು ಸ್ವೀಕರಿಸಿದರು.