Representational Image: Karnataka CM Siddaramaiah
ಬೆಂಗಳೂರು:
ಫೆಬ್ರವರಿ 12ರಿಂದ 23ರ ವರೆಗೆ ರಾಜ್ಯ ವಿಧಾನಮಂಡಲ ಅಧಿವೇಶನ (Karnataka Legislature joint session) ನಡೆಯಲಿದ್ದು, ವಿಧಾನಮಂಡಲ ಅಧಿವೇಶನದ ಮೊದಲ ದಿನ(ಫೆ.12) ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಫೆ.16ರಂದು ಕರ್ನಾಟಕ ರಾಜ್ಯ ಬಜೆಟ್ ಮಂಡನೆಯಾಗಲಿದೆ.
ಲೋಕಸಭಾ ಚುನಾವಣೆ ಇನ್ನೂ ಕೆಲವೇ ತಿಂಗಳು ಇರುವುದರಿಂದ ಮಾರ್ಚ್‌ನಿಂದಲೇ ಜಾರಿಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯ ಬಜೆಟ್ ನ್ನು ಫೆಬ್ರವರಿಯಲ್ಲಿ ಮಂಡಿಸಲು ಸರ್ಕಾರ ತೀರ್ಮಾನಿಸಿದೆ.
