Home ಕರ್ನಾಟಕ Karnataka Lokayukta: 9 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಕಾರ್ಮಿಕ ಇಲಾಖೆ ಇನ್ಸ್ಪೆಕ್ಟರ್ ಲೋಕಾಯುಕ್ತ...

Karnataka Lokayukta: 9 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಕಾರ್ಮಿಕ ಇಲಾಖೆ ಇನ್ಸ್ಪೆಕ್ಟರ್ ಲೋಕಾಯುಕ್ತ ಪೊಲೀಸರ ಬಲೆಗೆ

37
0
Karnataka Lokayukta.jpg1.jpg

ಬೆಂಗಳೂರು: ನಗರದಲ್ಲಿ 9 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಕಾರ್ಮಿಕ ಇಲಾಖೆ ಇನ್ಸ್ಪೆಕ್ಟರ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಹೋಟೆಲ್‌ವೊಂದರ ಪರವಾನಗಿ ಕೊಡಲು ಕಾರ್ಮಿಕ ಇಲಾಖೆ ಇನ್ಸ್ಪೆಕ್ಟರ್ ಭೋಪಾಲ್ 9 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟದ್ದ. ಈ ಬಗ್ಗೆ ಮಂಗಳೂರು ಮೂಲದ ಹೋಟೆಲ್ ಮಾಲೀಕ ದೀಕ್ಷಿತ್ ಭಾಸ್ಕರ್ ಶೆಟ್ಟಿ ಅವರು ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು.

ಲಂಚ ಪಡೆಯುತ್ತಿದ್ದಾಗಲೇ ಕಾರ್ಮಿಕ ಭವನದಲ್ಲೇ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಡಿವೈಎಸ್ಪಿ ನಾಗೇಶ್ ನೇತೃತ್ವದಲ್ಲಿ ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್ ಹಾಲಪ್ಪ ಬಲದಂಡಿ ಅವರು ಬಲೆ ಬೀಸಿದ್ದಾರೆ.

LEAVE A REPLY

Please enter your comment!
Please enter your name here