Home ಅಪರಾಧ ಬೆಂಗಳೂರಿನ ಎರಡು, ಬೀದರ್, ತುಮಕೂರು, ಹಾವೇರಿ ಹಾಗೂ ಮೈಸೂರಿನಲ್ಲಿ ಲೋಕಾಯುಕ್ತ ದಾಳಿ

ಬೆಂಗಳೂರಿನ ಎರಡು, ಬೀದರ್, ತುಮಕೂರು, ಹಾವೇರಿ ಹಾಗೂ ಮೈಸೂರಿನಲ್ಲಿ ಲೋಕಾಯುಕ್ತ ದಾಳಿ

28
0
Karnataka Lokayukta.jpg1.jpg

ಬೆಂಗಳೂರು:

ಬೆಂಗಳೂರಿನ ಎರಡು ಕಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ನಗರದ ಬಸವೇಶ್ವರನಗರದಲ್ಲಿರುವ ಬೆಸ್ಕಾ ಟೆಕ್ನಿಕಲ್ ಡೈರೆಕ್ಟರ್ ರಮೇಶ್ ಮನೆ ಮೇಲೆ ದಾಳಿಯಾಗಿದೆ.

ಇನ್ನು ಇಂಡಸ್ಟ್ರೀಸ್ ಆಂಡ್ ಬಾಯ್ಲರ್ ಇಲಾಖೆ ಅಧಿಕಾರಿಯೊಬ್ಬರ ಮನೆ ಮೇಲೆ ಲೋಕಾಯುಕ್ತ ದಾಳಿ ಮಾಡಿದ್ದ, ಕಡತಗಳ ಪರಿಶೀಲನೆ ನಡೆಸಿದ್ದಾರೆ.

ತುಮಕೂರಿನ ಕೆಐಎಡಿಬಿ ಅಧಿಕಾರಿ ನರಸಿಂಹಮೂರ್ತಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನಗರದ ಆರ್.ಟಿ. ನಗರದಲ್ಲಿ ಇರುವ ಮನೆ ಮೇಲೆ ಲೋಕಾಯುಕ್ತ ಡಿಎಸ್ ಪಿಗಳಾದ ಮಂಜುನಾಥ್ ಹಾಗೂ ಹರೀಶ್ ತಂಡ ದಾಳಿ ಮಾಡಿದ್ದು, ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸುತ್ತಿದೆ.

ಹಾವೇರಿಯ ನಿರ್ಮಿತಿ ಕೇಂದ್ರದ ಇಂಜಿನಿಯರ್ ವಾಗೀಶ್ ಶೇಟ್ಟರ್ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ರಾಣೆಬೆನ್ನೂರು ನಗರದ ನಿವಾಸ ಹಾಗೂ ಹಾವೇರಿಯ ದೇವಗರಿಯ ಜಿಲ್ಲಾಧಿಕಾರಿ ಕಚೇರಿ ಬಳಿ ಇರುವ ನಿರ್ಮಿತಿ ಕೇಂದ್ರ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

ಮೈಸೂರಿನ ನಿವೇದಿತಾ ನಗರ ಸಂಕ್ರಾಂತಿ ವೃತ್ತದ ಬಳಿ ಇರುವ ಮೈಸೂರು ಮಹಾನಗರ ಪಾಲಿಕೆ ಅಧಿಕಾರಿ ಮಹೇಶ್ ಕುಮಾರ್ ನಿವಾಸದ ಮೇಲೆ ದಾಳಿಯಾಗಿದೆ.

ಬೀದರ್ ಭೂಸೇನಾ ನಿಗಮದ ಅಧಿಕಾರಿ ಮನೆ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here