
Karnataka Lokayukta Searches house of BBMP's Mahadevapura zone's Revenue Inspector Nataraj
ಬೆಂಗಳೂರು:
ಹಲವು ಜಿಲ್ಲೆಗಳಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕಂದಾಯ ನಿರೀಕ್ಷಕರು ಅಧಿಕಾರಿ ನಟರಾಜು ಮನೆಮೇಲೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಶಿವನಹಳ್ಳಿ ಗ್ರಾಮದಲ್ಲಿರುವ ನಟರಾಜು ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ಹಿಂದೆ ಹಣ ಪಡೆಯುವಾಗ ನಟರಾಜ್ ಟ್ರಾಪ್ ಆಗಿದ್ದರು.
ಕೊಡಗೇಹಳ್ಳಿಯಲ್ಲಿರುವ ಮುಕಾಂತ ಡೆವಲಪರ್ಸ್‌ನ 79 ಫ್ಲ್ಯಾಟ್‌ಗಳಿಗೆ ಪ್ರಮಾಣಪತ್ರ ನೀಡಲು ₹ 7,90,000 ಕೇಳಿದ್ದರು. ಲಂಚದ ಭಾಗವಾಗಿ 5 ಲಕ್ಷ ರೂ.ಗಳನ್ನು ನೀಡಿದಾಗ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದರು.