Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ‘ಬಿಗ್ ಬುಲೆಟಿನ್’ ಹೇಳಿಕೆ: ಪಬ್ಲಿಕ್ ಟಿವಿಯ ಎಚ್.ಆರ್. ರಂಗನಾಥ್, ಅರುಣ್ ಬಡಿಗೇರ್‌ಗೆ ಲೋಕಾಯುಕ್ತ ನೋಟಿಸ್
  • ಕರ್ನಾಟಕ

‘ಬಿಗ್ ಬುಲೆಟಿನ್’ ಹೇಳಿಕೆ: ಪಬ್ಲಿಕ್ ಟಿವಿಯ ಎಚ್.ಆರ್. ರಂಗನಾಥ್, ಅರುಣ್ ಬಡಿಗೇರ್‌ಗೆ ಲೋಕಾಯುಕ್ತ ನೋಟಿಸ್

The Bengaluru Live November 23, 2026 7:14 PM 1 minute read
ಕರ್ನಾಟಕ ಲೋಕಾಯುಕ್ತ ಕಚೇರಿ — ಕಡತ ಚಿತ್ರ

ಕರ್ನಾಟಕ ಲೋಕಾಯುಕ್ತ ಕಚೇರಿ — ಕಡತ ಚಿತ್ರ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು: ಪಬ್ಲಿಕ್ ಟಿವಿಯ ‘ಬಿಗ್ ಬುಲೆಟಿನ್’ ಕಾರ್ಯಕ್ರಮದಲ್ಲಿ ಮಾಡಿದ ಹೇಳಿಕೆಗಳ ಕುರಿತು ವಿವರಣೆ ನೀಡಲು ನವೆಂಬರ್ 30ರಂದು ಮಧ್ಯಾಹ್ನ 3.30ಕ್ಕೆ ಲೋಕಾಯುಕ್ತರ ಮುಂದೆ ಖುದ್ದಾಗಿ ಹಾಜರಾಗುವಂತೆ ಪಬ್ಲಿಕ್ ಟಿವಿ ಸಂಸ್ಥಾಪಕ ಹಾಗೂ ಆಡಳಿತ ನಿರ್ದೇಶಕ ಎಚ್.ಆರ್. ರಂಗನಾಥ್ ಮತ್ತು ಅರುಣ್ ಬಡಿಗೇರ್ ಅವರಿಗೆ ನೋಟಿಸ್ ನೀಡಲು ಕರ್ನಾಟಕ ಲೋಕಾಯುಕ್ತ ನಿರ್ಧರಿಸಿದೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

ನವೆಂಬರ್ 18ರಂದು ರಾತ್ರಿ 9ಕ್ಕೆ ಪಬ್ಲಿಕ್ ಟಿವಿ ಕನ್ನಡದಲ್ಲಿ ಪ್ರಸಾರವಾದ ಕಾರ್ಯಕ್ರಮದಲ್ಲಿ ಲೋಕಾಯುಕ್ತ ಸಂಸ್ಥೆಯ ಕಾರ್ಯವೈಖರಿ ಹಾಗೂ ದಾಖಲೆಗಳಿಗೆ ಧಕ್ಕೆ ತರುವ ಮತ್ತು ಸಾರ್ವಜನಿಕರಲ್ಲಿ ಸಂಸ್ಥೆಯ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸಬಹುದಾದ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸಿರುವುದಾಗಿ ಪ್ರಕಟಣೆ ತಿಳಿಸಿದೆ. ರಂಗನಾಥ್ ಮತ್ತು ಬಡಿಗೇರ್ ಅವರು ಲೋಕಾಯುಕ್ತ ಸಂಸ್ಥೆ ಅನುಪಯುಕ್ತ, ಅದರ ಕಾರ್ಯಚಟುವಟಿಕೆಗಳಿಂದ ಫಲಿತಾಂಶ ದೊರೆಯುತ್ತಿಲ್ಲ ಮತ್ತು ಕೇವಲ ಮಾಧ್ಯಮಗಳ ಮೂಲಕ ಪ್ರಚಾರ ಪಡೆಯುತ್ತಿದೆ ಎಂದು ಹೇಳಿದ್ದಾರೆ ಹಾಗೂ ಆಧಾರರಹಿತ ಅಂಕಿ-ಅಂಶಗಳನ್ನು ಉಲ್ಲೇಖಿಸಿ ಸಂಸ್ಥೆಯ ಕಾರ್ಯಸಂಸ್ಕೃತಿ ಮತ್ತು ಕೆಲಸದ ಗುಣಮಟ್ಟವನ್ನು ಅಪಹಾಸ್ಯ ಮಾಡಿದ್ದಾರೆ ಎಂದು ಪ್ರಕಟಣೆ ಆರೋಪಿಸಿದೆ.

ಪಬ್ಲಿಕ್ ಟಿವಿ ಬಿಗ್ ಬುಲೆಟಿನ್ ಹೇಳಿಕೆ ಕುರಿತ ಕರ್ನಾಟಕ ಲೋಕಾಯುಕ್ತ ಪತ್ರಿಕಾ ಪ್ರಕಟಣೆಯ 1 ಮತ್ತು 2ನೇ ಪುಟ
ಕರ್ನಾಟಕ ಲೋಕಾಯುಕ್ತ ಪತ್ರಿಕಾ ಪ್ರಕಟಣೆ, 1 ಮತ್ತು 2ನೇ ಪುಟ.
ಪಬ್ಲಿಕ್ ಟಿವಿ ಬಿಗ್ ಬುಲೆಟಿನ್ ಹೇಳಿಕೆ ಕುರಿತ ಕರ್ನಾಟಕ ಲೋಕಾಯುಕ್ತ ಪತ್ರಿಕಾ ಪ್ರಕಟಣೆಯ 3 ಮತ್ತು 4ನೇ ಪುಟ
ಕರ್ನಾಟಕ ಲೋಕಾಯುಕ್ತ ಪತ್ರಿಕಾ ಪ್ರಕಟಣೆ, 3 ಮತ್ತು 4ನೇ ಪುಟ.

ಲೋಕಾಯುಕ್ತ ಸಂಸ್ಥೆ ಕರ್ನಾಟಕ ಲೋಕಾಯುಕ್ತ ಕಾಯ್ದೆ, 1984ರ ಅಡಿ ಸ್ಥಾಪನೆಯಾದ ಶಾಸನಬದ್ಧ ಸ್ವತಂತ್ರ ಸಂಸ್ಥೆಯಾಗಿದ್ದು, ಭ್ರಷ್ಟಾಚಾರ ನಿಯಂತ್ರಣ, ಸಾರ್ವಜನಿಕ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಸಾರ್ವಜನಿಕ ಕುಂದುಕೊರತೆ ನಿವಾರಣೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಟ್ರ್ಯಾಪ್ ಪ್ರಕರಣಗಳ ನಂತರ ಆರೋಪಿ ಸರ್ಕಾರಿ ನೌಕರರ ಆಸ್ತಿ ಮತ್ತು ಆರ್ಥಿಕ ವಿವರಗಳನ್ನು ವಿವಿಧ ಮೂಲಗಳಿಂದ ಸಂಗ್ರಹಿಸಿ, ಸಮಗ್ರ ತನಿಖೆ ನಡೆಸಿ, ಕಾನೂನುಬದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ; ಇದಕ್ಕೆ ಸಮಯ ಮತ್ತು ಪರಿಣತಿ ಅಗತ್ಯ. ಇದನ್ನು ಪರಿಗಣಿಸದೆ ಸಂಸ್ಥೆಯನ್ನು ಏಕಪಕ್ಷೀಯವಾಗಿ ಟೀಕಿಸುವುದು ಆಕ್ಷೇಪಾರ್ಹ ಎಂದು ಲೋಕಾಯುಕ್ತ ಹೇಳಿದೆ.

ಪ್ರಕಟಣೆ ನೀಡಿರುವ ಅಂಕಿ-ಅಂಶಗಳು ಹೀಗಿವೆ:

  • 2022ರ ಸೆಪ್ಟೆಂಬರ್ 10ರಿಂದ 2026ರ ನವೆಂಬರ್ 15ರವರೆಗೆ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಲೋಕಾಯುಕ್ತ 322 ಟ್ರ್ಯಾಪ್ ಪ್ರಕರಣ, 976 ಆದಾಯ ಮೀರಿ ಆಸ್ತಿ ಪ್ರಕರಣ ಮತ್ತು 138 ಇತರ ಪ್ರಕರಣಗಳನ್ನು ದಾಖಲಿಸಿದೆ. ರದ್ದಾದ ಭ್ರಷ್ಟಾಚಾರ ನಿಗ್ರಹ ದಳದಿಂದ 2,159 ಪ್ರಕರಣಗಳು ಸಂಸ್ಥೆಗೆ ವರ್ಗಾವಣೆಯಾಗಿವೆ.
  • ಇದೇ ಅವಧಿಯಲ್ಲಿ 952 ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿದೆ. ಮುಕ್ತಾಯಗೊಂಡ 697 ಪ್ರಕರಣಗಳ ಪೈಕಿ 153 ಪ್ರಕರಣಗಳಲ್ಲಿ ಆರೋಪಿಗಳಿಗೆ ಶಿಕ್ಷೆಯಾಗಿದೆ.
  • ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಅವರು 2022ರ ಜೂನ್ 15ರಂದು ಅಧಿಕಾರ ವಹಿಸಿಕೊಂಡ ನಂತರ 2026ರ ನವೆಂಬರ್ 15ರವರೆಗೆ ಒಟ್ಟು 46,298 ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ 29,242 ಪ್ರಕರಣಗಳ ತನಿಖೆ ನಡೆಸಿ ಮುಕ್ತಾಯಗೊಳಿಸಲಾಗಿದೆ.
  • ಇದೇ ಅವಧಿಯಲ್ಲಿ 1,115 ಇಲಾಖಾ ವಿಚಾರಣಾ ಪ್ರಕರಣಗಳು ದಾಖಲಾಗಿದ್ದು, 2,052 ಇಲಾಖಾ ವಿಚಾರಣಾ ಪ್ರಕರಣಗಳಲ್ಲಿ ಅಂತಿಮ ವರದಿಗಳನ್ನು ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ.
  • ಇತರ ವಿಭಾಗಗಳಿಗೆ ಸಂಬಂಧಿಸಿದಂತೆ 22,097 ಪ್ರಕರಣಗಳು ದಾಖಲಾಗಿದ್ದು, ಈ ಅವಧಿಯಲ್ಲಿ ವಿವಿಧ ವರ್ಗಗಳ 14,160 ಪ್ರಕರಣಗಳನ್ನು ಮುಕ್ತಾಯಗೊಳಿಸಲಾಗಿದೆ.

ಸಂಸ್ಥೆಯ ಕೆಲಸ ಭ್ರಷ್ಟಾಚಾರ ನಿಯಂತ್ರಣಕ್ಕೆ ಮಾತ್ರ ಸೀಮಿತವಲ್ಲ ಎಂದು ಲೋಕಾಯುಕ್ತ ಹೇಳಿದೆ. ಸರ್ಕಾರಿ ಇಲಾಖೆಗಳ ಕಾರ್ಯನಿರ್ವಹಣೆಯ ಮೇಲ್ವಿಚಾರಣೆ ಮತ್ತು ಪರಿಶೀಲನೆಯ ಮೂಲಕ ಕೆರೆಗಳ ಸಂರಕ್ಷಣೆ ಮತ್ತು ಒತ್ತುವರಿ ತೆರವು, ಕಸ ವಿಲೇವಾರಿ, ಸಾರ್ವಜನಿಕ ವಿತರಣಾ ವ್ಯವಸ್ಥೆಯ ಅವ್ಯವಹಾರ, ಕಂದಾಯ ಇಲಾಖೆಯ ಲೋಪ, ಬೀದಿ ನಾಯಿಗಳ ಸಮಸ್ಯೆ, ಸಾರಿಗೆ ಇಲಾಖೆ, ಉಪನೋಂದಣಾಧಿಕಾರಿ ಮತ್ತು ತಹಶೀಲ್ದಾರ್ ಕಚೇರಿಗಳು, ವಿದ್ಯಾರ್ಥಿ ನಿಲಯಗಳು ಹಾಗೂ ಸರ್ಕಾರಿ ಶಾಲೆಗಳಿಗೆ ಸಂಬಂಧಿಸಿದ ಸಾರ್ವಜನಿಕ ಹಿತಾಸಕ್ತಿಯ ವಿಷಯಗಳಲ್ಲಿ ಕ್ರಮ ಕೈಗೊಳ್ಳಲಾಗಿದೆ.

ಸಂಸ್ಥೆಗೆ ಸಾರ್ವಜನಿಕರಿಂದ ನಿರಂತರವಾಗಿ ದೂರು ಮತ್ತು ಅರ್ಜಿಗಳು ಬರುತ್ತಿದ್ದು, ದೂರದಾರರಿಂದ ಮೆಚ್ಚುಗೆ ಮತ್ತು ಅಭಿನಂದನಾ ಪತ್ರಗಳೂ ಬರುತ್ತಿರುವುದು ಸಾರ್ವಜನಿಕರ ವಿಶ್ವಾಸಕ್ಕೆ ಸಾಕ್ಷಿ ಎಂದು ಲೋಕಾಯುಕ್ತ ಹೇಳಿದೆ.

ಕರ್ನಾಟಕ ಲೋಕಾಯುಕ್ತ ಕಾಯ್ದೆ, 1984ರ ಕಲಂ 17 ಮತ್ತು 17-ಎ ಅಡಿಯ ಸಂಬಂಧಿತ ಕಾನೂನು ಅಂಶಗಳ ಹಿನ್ನೆಲೆಯಲ್ಲಿ ಮುಂದಿನ ಕ್ರಮ ಕೈಗೊಳ್ಳಲು ಮತ್ತು ರಂಗನಾಥ್ ಹಾಗೂ ಬಡಿಗೇರ್ ಅವರಿಂದ ವಿವರಣೆ ಪಡೆಯಲು ಉದ್ದೇಶಿಸಲಾಗಿದೆ. ಇಬ್ಬರಿಗೂ ನೋಟಿಸ್ ಜಾರಿಗೊಳಿಸಿ, ನವೆಂಬರ್ 30ರಂದು ಮಧ್ಯಾಹ್ನ 3.30ಕ್ಕೆ ಖುದ್ದಾಗಿ ಹಾಜರಾಗಿ ಹೇಳಿಕೆಗಳ ಕುರಿತು ಸ್ಪಷ್ಟನೆ ಸಲ್ಲಿಸುವಂತೆ ಸೂಚಿಸಲಾಗುತ್ತದೆ.

ಸಾರ್ವಜನಿಕ ಹಿತಾಸಕ್ತಿಯಲ್ಲಿ ತನ್ನ ಕಾನೂನುಬದ್ಧ ಕರ್ತವ್ಯಗಳನ್ನು ನಿರಂತರವಾಗಿ ನಿರ್ವಹಿಸುವುದಾಗಿ ಹೇಳಿರುವ ಸಂಸ್ಥೆ, ತನ್ನ ಕಾರ್ಯವೈಖರಿಯ ಕುರಿತ ರಚನಾತ್ಮಕ ಟೀಕೆಯನ್ನು ಸ್ವಾಗತಿಸುತ್ತದೆ; ಆದರೆ ಅಂತಹ ಟೀಕೆ ವಾಸ್ತವಾಂಶಗಳು ಮತ್ತು ನಿಖರ ಮಾಹಿತಿಯ ಆಧಾರದ ಮೇಲಿರಬೇಕೆಂದು ನಿರೀಕ್ಷಿಸುತ್ತದೆ ಎಂದು ತಿಳಿಸಿದೆ.

ಇದನ್ನೂ ಓದಿ:

  • ಲೋಕಾಯುಕ್ತ ಕ್ರಮ ಕೈಗೊಂಡಿಲ್ಲ ಎಂಬ ಅರ್ಥದ ಸುದ್ದಿ: ಸಂಪೂರ್ಣ ನ್ಯೂಸ್ ಮುಖ್ಯಸ್ಥ ಆರ್.ಕೆ. ಚಂದ್ರಶೇಖರ್ ಬೇಷರತ್ ಕ್ಷಮೆಯಾಚನೆ

About the Author

The Bengaluru Live

Administrator

Visit Website View All Posts

Post navigation

Previous: ರಸ್ತೆ ಅಪಘಾತ ತಗ್ಗಿಸಲು ಎಐ ಕ್ಯಾಮೆರಾ; ತುರ್ತು ಚಿಕಿತ್ಸೆಗೆ ₹2.5 ಲಕ್ಷದವರೆಗೆ ನಗದುರಹಿತ ನೆರವು, ₹322 ಕೋಟಿ ಕ್ರಿಯಾ ಯೋಜನೆ

Related Stories

ರಸ್ತೆ ಸುರಕ್ಷತಾ ಪ್ರಾಧಿಕಾರದ ಸಭೆಯಲ್ಲಿ ಮೈಕ್‌ಗಳಿರುವ ಮೇಜಿನ ಬಳಿ ಕುಳಿತಿರುವ ಹಿರಿಯ ಅಧಿಕಾರಿಗಳು
  • ಕರ್ನಾಟಕ

ರಸ್ತೆ ಅಪಘಾತ ತಗ್ಗಿಸಲು ಎಐ ಕ್ಯಾಮೆರಾ; ತುರ್ತು ಚಿಕಿತ್ಸೆಗೆ ₹2.5 ಲಕ್ಷದವರೆಗೆ ನಗದುರಹಿತ ನೆರವು, ₹322 ಕೋಟಿ ಕ್ರಿಯಾ ಯೋಜನೆ

The Bengaluru Live November 23, 2026 5:59 PM
ವಿಧಾನಸೌಧದ ಸಂವಾದ ಸಭೆಯಲ್ಲಿ ಸಭಾ ಮೇಜಿನ ಬಳಿ ಕುಳಿತಿರುವ ಅಧಿಕಾರಿಗಳು ಮತ್ತು ಭೇಟಿ ನೀಡಿದ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ
  • ಕರ್ನಾಟಕ

ವಿಧಾನಸೌಧದಲ್ಲಿ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ ಹೆಬಾ ಹಗ್ರಾಸ್ ಅವರಿಗೆ ಕರ್ನಾಟಕದ ವಿಕಲಚೇತನ ಸಬಲೀಕರಣ ಮಾದರಿ ಪ್ರಸ್ತುತ

The Bengaluru Live November 23, 2026 5:37 PM
ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ನವೆಂಬರ್ 24 ಮತ್ತು 25ರಂದು ದಕ್ಷಿಣ ಒಳನಾಡಿನಲ್ಲಿ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ

The Bengaluru Live November 23, 2026 5:34 PM

Latest Post

‘ಬಿಗ್ ಬುಲೆಟಿನ್’ ಹೇಳಿಕೆ: ಪಬ್ಲಿಕ್ ಟಿವಿಯ ಎಚ್.ಆರ್. ರಂಗನಾಥ್, ಅರುಣ್ ಬಡಿಗೇರ್‌ಗೆ ಲೋಕಾಯುಕ್ತ ನೋಟಿಸ್ ಕರ್ನಾಟಕ ಲೋಕಾಯುಕ್ತ ಕಚೇರಿ — ಕಡತ ಚಿತ್ರ
  • ಕರ್ನಾಟಕ

‘ಬಿಗ್ ಬುಲೆಟಿನ್’ ಹೇಳಿಕೆ: ಪಬ್ಲಿಕ್ ಟಿವಿಯ ಎಚ್.ಆರ್. ರಂಗನಾಥ್, ಅರುಣ್ ಬಡಿಗೇರ್‌ಗೆ ಲೋಕಾಯುಕ್ತ ನೋಟಿಸ್

November 23, 2026 7:14 PM
ರಸ್ತೆ ಅಪಘಾತ ತಗ್ಗಿಸಲು ಎಐ ಕ್ಯಾಮೆರಾ; ತುರ್ತು ಚಿಕಿತ್ಸೆಗೆ ₹2.5 ಲಕ್ಷದವರೆಗೆ ನಗದುರಹಿತ ನೆರವು, ₹322 ಕೋಟಿ ಕ್ರಿಯಾ ಯೋಜನೆ ರಸ್ತೆ ಸುರಕ್ಷತಾ ಪ್ರಾಧಿಕಾರದ ಸಭೆಯಲ್ಲಿ ಮೈಕ್‌ಗಳಿರುವ ಮೇಜಿನ ಬಳಿ ಕುಳಿತಿರುವ ಹಿರಿಯ ಅಧಿಕಾರಿಗಳು
  • ಕರ್ನಾಟಕ

ರಸ್ತೆ ಅಪಘಾತ ತಗ್ಗಿಸಲು ಎಐ ಕ್ಯಾಮೆರಾ; ತುರ್ತು ಚಿಕಿತ್ಸೆಗೆ ₹2.5 ಲಕ್ಷದವರೆಗೆ ನಗದುರಹಿತ ನೆರವು, ₹322 ಕೋಟಿ ಕ್ರಿಯಾ ಯೋಜನೆ

November 23, 2026 5:59 PM
ವಿಧಾನಸೌಧದಲ್ಲಿ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ ಹೆಬಾ ಹಗ್ರಾಸ್ ಅವರಿಗೆ ಕರ್ನಾಟಕದ ವಿಕಲಚೇತನ ಸಬಲೀಕರಣ ಮಾದರಿ ಪ್ರಸ್ತುತ ವಿಧಾನಸೌಧದ ಸಂವಾದ ಸಭೆಯಲ್ಲಿ ಸಭಾ ಮೇಜಿನ ಬಳಿ ಕುಳಿತಿರುವ ಅಧಿಕಾರಿಗಳು ಮತ್ತು ಭೇಟಿ ನೀಡಿದ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ
  • ಕರ್ನಾಟಕ

ವಿಧಾನಸೌಧದಲ್ಲಿ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ ಹೆಬಾ ಹಗ್ರಾಸ್ ಅವರಿಗೆ ಕರ್ನಾಟಕದ ವಿಕಲಚೇತನ ಸಬಲೀಕರಣ ಮಾದರಿ ಪ್ರಸ್ತುತ

November 23, 2026 5:37 PM
ನವೆಂಬರ್ 24 ಮತ್ತು 25ರಂದು ದಕ್ಷಿಣ ಒಳನಾಡಿನಲ್ಲಿ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ನವೆಂಬರ್ 24 ಮತ್ತು 25ರಂದು ದಕ್ಷಿಣ ಒಳನಾಡಿನಲ್ಲಿ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ

November 23, 2026 5:34 PM
ನವೆಂಬರ್ 25ರಂದು ಹೆಣ್ಣೂರು, ಹೊರಮಾವು, ಹೊಯ್ಸಳ ನಗರ ಸುತ್ತಮುತ್ತ ವಿದ್ಯುತ್ ವ್ಯತ್ಯಯ ಬೆಂಗಳೂರಿನ ಬೆಸ್ಕಾಂ ಕಾರ್ಪೊರೇಟ್ ಕಚೇರಿಯ ಫೈಲ್ ಚಿತ್ರ
  • ಬೆಂಗಳೂರು ನಗರ

ನವೆಂಬರ್ 25ರಂದು ಹೆಣ್ಣೂರು, ಹೊರಮಾವು, ಹೊಯ್ಸಳ ನಗರ ಸುತ್ತಮುತ್ತ ವಿದ್ಯುತ್ ವ್ಯತ್ಯಯ

November 23, 2026 5:28 PM
ನವೆಂಬರ್ 24ರಂದು ವಿಲ್ಸನ್ ಗಾರ್ಡನ್, ಶಾಂತಿನಗರ, ರಿಚ್‌ಮಂಡ್ ಸರ್ಕಲ್ ಸುತ್ತಮುತ್ತ ವಿದ್ಯುತ್ ಕಡಿತ ಬೆಂಗಳೂರಿನ ಬೆಸ್ಕಾಂ ಕಾರ್ಪೊರೇಟ್ ಕಚೇರಿಯ ಫೈಲ್ ಚಿತ್ರ
  • ಬೆಂಗಳೂರು ನಗರ

ನವೆಂಬರ್ 24ರಂದು ವಿಲ್ಸನ್ ಗಾರ್ಡನ್, ಶಾಂತಿನಗರ, ರಿಚ್‌ಮಂಡ್ ಸರ್ಕಲ್ ಸುತ್ತಮುತ್ತ ವಿದ್ಯುತ್ ಕಡಿತ

November 23, 2026 5:28 PM

ನೀವು ತಪ್ಪಿಸಿಕೊಂಡಿರಬಹುದು

ಕರ್ನಾಟಕ ಲೋಕಾಯುಕ್ತ ಕಚೇರಿ — ಕಡತ ಚಿತ್ರ
  • ಕರ್ನಾಟಕ

‘ಬಿಗ್ ಬುಲೆಟಿನ್’ ಹೇಳಿಕೆ: ಪಬ್ಲಿಕ್ ಟಿವಿಯ ಎಚ್.ಆರ್. ರಂಗನಾಥ್, ಅರುಣ್ ಬಡಿಗೇರ್‌ಗೆ ಲೋಕಾಯುಕ್ತ ನೋಟಿಸ್

The Bengaluru Live November 23, 2026 7:14 PM
ರಸ್ತೆ ಸುರಕ್ಷತಾ ಪ್ರಾಧಿಕಾರದ ಸಭೆಯಲ್ಲಿ ಮೈಕ್‌ಗಳಿರುವ ಮೇಜಿನ ಬಳಿ ಕುಳಿತಿರುವ ಹಿರಿಯ ಅಧಿಕಾರಿಗಳು
  • ಕರ್ನಾಟಕ

ರಸ್ತೆ ಅಪಘಾತ ತಗ್ಗಿಸಲು ಎಐ ಕ್ಯಾಮೆರಾ; ತುರ್ತು ಚಿಕಿತ್ಸೆಗೆ ₹2.5 ಲಕ್ಷದವರೆಗೆ ನಗದುರಹಿತ ನೆರವು, ₹322 ಕೋಟಿ ಕ್ರಿಯಾ ಯೋಜನೆ

The Bengaluru Live November 23, 2026 5:59 PM
ವಿಧಾನಸೌಧದ ಸಂವಾದ ಸಭೆಯಲ್ಲಿ ಸಭಾ ಮೇಜಿನ ಬಳಿ ಕುಳಿತಿರುವ ಅಧಿಕಾರಿಗಳು ಮತ್ತು ಭೇಟಿ ನೀಡಿದ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ
  • ಕರ್ನಾಟಕ

ವಿಧಾನಸೌಧದಲ್ಲಿ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ ಹೆಬಾ ಹಗ್ರಾಸ್ ಅವರಿಗೆ ಕರ್ನಾಟಕದ ವಿಕಲಚೇತನ ಸಬಲೀಕರಣ ಮಾದರಿ ಪ್ರಸ್ತುತ

The Bengaluru Live November 23, 2026 5:37 PM
ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ನವೆಂಬರ್ 24 ಮತ್ತು 25ರಂದು ದಕ್ಷಿಣ ಒಳನಾಡಿನಲ್ಲಿ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ

The Bengaluru Live November 23, 2026 5:34 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ‘ಬಿಗ್ ಬುಲೆಟಿನ್’ ಹೇಳಿಕೆ: ಪಬ್ಲಿಕ್ ಟಿವಿಯ ಎಚ್.ಆರ್. ರಂಗನಾಥ್, ಅರುಣ್ ಬಡಿಗೇರ್‌ಗೆ ಲೋಕಾಯುಕ್ತ ನೋಟಿಸ್
  • ರಸ್ತೆ ಅಪಘಾತ ತಗ್ಗಿಸಲು ಎಐ ಕ್ಯಾಮೆರಾ; ತುರ್ತು ಚಿಕಿತ್ಸೆಗೆ ₹2.5 ಲಕ್ಷದವರೆಗೆ ನಗದುರಹಿತ ನೆರವು, ₹322 ಕೋಟಿ ಕ್ರಿಯಾ ಯೋಜನೆ
  • ವಿಧಾನಸೌಧದಲ್ಲಿ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ ಹೆಬಾ ಹಗ್ರಾಸ್ ಅವರಿಗೆ ಕರ್ನಾಟಕದ ವಿಕಲಚೇತನ ಸಬಲೀಕರಣ ಮಾದರಿ ಪ್ರಸ್ತುತ
  • ನವೆಂಬರ್ 24 ಮತ್ತು 25ರಂದು ದಕ್ಷಿಣ ಒಳನಾಡಿನಲ್ಲಿ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ
©Copyright 2025 The Bengaluru Live All rights reserved. | MoreNews by AF themes.