ಬೆಂಗಳೂರು:
ಉಭಯ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ನಾಯಕರ ಹೇಳಿಕೆಗಳ ನಂತರ ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವಿನ ಗಡಿ ವಿವಾದವು ಗರಿಗೆದರಿದ್ದು, ವಿವಾದಾತ್ಮಕ ವಿಷಯದ ಕುರಿತು ಮುಂದಿನ ವಾರ ಸರ್ವಪಕ್ಷ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಹೇಳಿದರು.
ಸರ್ವಪಕ್ಷ ಸಭೆಯಲ್ಲಿ ಮಹಾರಾಷ್ಟ್ರ ಸರ್ಕಾರದ ಉದ್ದೇಶಗಳ ಬಗ್ಗೆ ವಿವರವಾಗಿ ಚರ್ಚಿಸಲಿದ್ದು, ಮಾತುಕತೆಯ ಮೂಲಕ ಸೌಹಾರ್ದಯುತವಾಗಿ ಗಡಿ ವಿವಾದವನ್ನು ಬಗೆಹರಿಸಲಾಗುವುದು ಎಂದು ಬೊಮ್ಮಾಯಿ ತಿಳಿಸಿದ್ದಾರೆ.
ಗಡಿ ವಿವಾದ ಈಗಾಗಲೇ ಮುಗಿದಿದೆ ಆದರೆ ಮಹಾರಾಷ್ಟ್ರ ಸರಕಾರ ಮತ್ತೆ ಕ್ಯಾತೆ ತೆಗೆದಿದೆ. ಗ್ರಾಮ ಪಂಚಾಯತ್ ಮತ್ತು ಇತರ ಸಂಬಂಧಿತ ಸಮಸ್ಯೆಗಳ ಬಗ್ಗೆ ಪರಿಹಾರವು ನಮ್ಮ ಬಳಿ ಇದೆ. ಇವೆಲ್ಲವನ್ನೂ ಸುಪ್ರೀಂ ಕೋರ್ಟ್‌ನಲ್ಲಿ ಚರ್ಚಿಸಲಾಗುವುದು ಎಂದು ಬೊಮ್ಮಾಯಿ ಹೇಳಿದ್ದಾರೆ.
ಉಭಯ ರಾಜ್ಯಗಳ ಗಡಿಯಲ್ಲಿರುವ ಹಲವು ಗ್ರಾಮಗಳ ಮಾಲೀಕತ್ವಕ್ಕೆ ಸಂಬಂಧಿಸಿದಂತೆ ಗಡಿ ವಿವಾದ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದ್ದು, ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕದ ವಾದ ಮಂಡಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಾತುಕತೆಯ ಮೂಲಕ ಈ ಬಿಕ್ಕಟ್ಟನ್ನು ಬಗೆಹರಿಸುವ ಬಗ್ಗೆ ಮಾತುಕತೆ ನಡೆದಿದೆ ಎಂಬ ಮಾಹಿತಿ ಕೂಡ ಇದೆ ಹಾಗೂ ಮಹಾರಾಷ್ಟ್ರ ಸರ್ಕಾರ ಈಗಾಗಲೇ ಸುಪ್ರೀಂ ಕೋರ್ಟ್‌ನಲ್ಲಿ ಮೊಕದ್ದಮೆ ಹೂಡಿದ್ದು. ಕರ್ನಾಟಕ ಸರ್ಕಾರವು ಸರ್ವಪಕ್ಷ ಸಭೆಯನ್ನು ನಡೆಸುವುದರೊಂದಿಗೆ ಗಡಿ ಅಭಿವೃದ್ಧಿ ಪ್ರಾಧಿಕಾರದೊಂದಿಗೆ ಚರ್ಚೆ ನಡೆಸಲಿದೆ ಎಂದು ಅವರು ಹೇಳಿದರು.
ಮಾಜಿ ಮುಖ್ಯಮಂತ್ರಿ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಇದೇ ಬೇಡಿಕೆಯ ನಂತರ ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ಕಾನೂನು ತಂಡವನ್ನು ಬಲಪಡಿಸಬೇಕು ಎಂದು ಅವರು ಕೋರಿದ್ದರು. ಇದರಿಂದ ಸರ್ವಪಕ್ಷ ಸಭೆ ನಡೆಸಲು ಬೊಮ್ಮಾಯಿ ನಿರ್ಧರಿಸಿದ್ದಾರೆ.