ರಾತ್ರಿ 9 ರಿಂದ ಬೆಳಿಗ್ಗೆ 5 ರವರೆಗೆ ರಾಜ್ಯವ್ಯಾಪಿ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ
ಬೆಂಗಳೂರು:
ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿರುವ ಬೆನ್ನಲ್ಲೇ , ರಾಜ್ಯ ಸರ್ಕಾರವು ಈಗಿರುವ ಕೆಲವು ನಿರ್ಬಂಧಗಳನ್ನು ಸಡಿಲಿಸುವ ಮೂಲಕ ಸಮತೋಲನ ಕಾಯ್ದೆಯನ್ನು ಮಾಡಿದೆ.
ಕೋವಿಡ್-19 ನಿಯಂತ್ರಣ ತಾಂತ್ರಿಕ ಸಲಹೆಗಳನ್ನು ಗಮನಿಸಿ ಸಚಿವ ಸಂಪುಟದ ಸಹೋದ್ಯೋಗಿಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಜುಲೈ 5, ರಂದು ಬೆಳಿಗ್ಗೆ 5 ಗಂಟೆಯಿಂದ ಜುಲೈ 19 ಬೆಳಿಗ್ಗೆ 5 ಗಂಟೆಯವರೆಗೆ ಜಾರಿಗೆ ಬರುವಂತೆ ಈ ಕೆಳ ಕಾಣಿಸಿದ ಸಡಿಲಿಕೆಗಳು/ನಿರ್ಬಂಧಗಳು ಜಾರಿಯಲ್ಲಿರುತ್ತವೆ.
- ಸರ್ಕಾರಿ/ಖಾಸಗಿ ಕಛೇರಿಗಳು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳು ಶೇ. 100 ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.
- ಮಾಲ್ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.
- ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆ ಶೇ. 100 ರಷ್ಟು ಪ್ರಮಾಣಿಕರೊಂದಿಗೆ ಸಂಚರಿಸಲು ಅವಕಾಶ ನೀಡಲಾಗಿದೆ.
- ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಅವಕಾಶ ನೀಡಲಾಗಿದೆ.
- ಮದುವೆ ಹಾಗೂ ಇನ್ನಿತರೆ ಕೌಟುಂಬಿಕ ಶುಭ ಸಮಾರಂಭಗಳಿಗೆ 100 ಜನರೊಂದಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ.
- ಈಜುಕೊಳಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.
- ಕ್ರೀಡಾ ಸಂಕೀರ್ಣಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.
- ಅಂತ್ಯ ಸಂಸ್ಕಾರಕ್ಕೆ 20 ಸದಸ್ಯರು ಭಾಗವಹಿಸಲು ಅವಕಾಶ ನೀಡಲಾಗಿದೆ.
- ಕೊರೋನಾ ಕರ್ಫ್ಯೂ (ನೈರ್ಟ್ ಕರ್ಫ್ಯೂ) ರಾತ್ರಿ 9.00 ರಿಂದ ಬೆಳಿಗ್ಗೆ 5.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
- ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುವುದಿಲ್ಲ.
- ಸಾಮಾಜಿಕ, ಧಾರ್ಮಿಕ, ಮತ್ತು ರಾಜಕೀಯ ಸಭೆ ಸಮಾರಂಭಗಳಿಗೆ, ಪ್ರತಿಭಟನೆಗಳಿಗೆ ಹಾಗೂ ಇತರೆ ಸಮಾರಂಭಗಳಿಗೆ ಅವಕಾಶವಿಲ್ಲ.
- ಶೈಕ್ಷಣಿಕ ಸಂಸ್ಥೆಗಳನ್ನು ತೆರೆಯುವ ಬಗ್ಗೆ ಪ್ರತ್ಯೇಕವಾಗಿ ತೀರ್ಮಾನಿಸಲಾಗುವುದು.
- ಪಬ್ಗಳು ಕಾರ್ಯನಿರ್ವಹಿಸಲು ಅವಕಾಶವಿಲ್ಲ. ಬಾರ್ಗಳು ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.
- ಚಿತ್ರಮಂದಿರಗಳು ಕಾರ್ಯನಿರ್ವಹಣೆಗೆ ಅವಕಾಶವಿಲ್ಲ.
• ಜಿಲ್ಲೆಯಲ್ಲಿರುವ ಪರಿಸ್ಥಿತಿಗನುಗುಣವಾಗಿ ಆಯಾಯ ಜಿಲ್ಲೆಯ ಜಿಲ್ಲಾಡಳಿತಗಳು ಇನ್ನೂ ಹೆಚ್ಚಿನ ನಿರ್ಬಂಧಗಳು ಅವಶ್ಯವಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳೊಂದಿಗೆ ಸಮಾಲೋಚಿಸಿ ತೀರ್ಮಾನ ತೆಗೆದುಕೊಳ್ಳಲು ಸೂಚಿಸಿದೆ.
• ಕೋವಿಡ್-19 ನಿಯಂತ್ರಿಸುವ ದೃಷ್ಟಿಯಿಂದ ಸಾರ್ವಜನಿಕರು ನಿಯಂತ್ರಣ ಕ್ರಮಗಳಾದ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ವೈಯಕ್ತಿಕ ಮತ್ತು ಸಾಮಾಜಿಕ ಸ್ವಚ್ಛತೆ ಕಡೆಗೆ ಗಮನ ಹರಿಸಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಲು ವಿನಂತಿ.