Home ಮೈಸೂರು ಚಾಮುಂಡಿಬೆಟ್ಟ ಭೂಕುಸಿತದ ದುರಸ್ಥಿ ಕಾರ್ಯ ತ್ವರಿತವಾಗಿ ನಡೆಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ

ಚಾಮುಂಡಿಬೆಟ್ಟ ಭೂಕುಸಿತದ ದುರಸ್ಥಿ ಕಾರ್ಯ ತ್ವರಿತವಾಗಿ ನಡೆಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ

232
0
Karnataka Minister directs District Administration to speed up road restoration after landslide reported near Chamundi Hills

ಮೈಸೂರು:

ಬುಧವಾರ ಸಂಜೆ ಸುರಿದ ಧಾರಾಕಾರ ಮಳೆಯಿಂದಾಗಿ ಚಾಮುಂಡಿಬೆಟ್ಡದಲ್ಲಿ ಬೃಹತ್ ನಂದಿ ಪ್ರತಿಮೆಗೆ ತೆರಳುವ ಮಾರ್ಗದಲ್ಲಿ ಭೂಕುಸಿತ ಉಂಟಾಗಿ ರಸ್ತೆ ಹಾನಿಗೀಡಾಗಿರುವುದು ದುರದೃಷ್ಟಕರ ಎಂದು ಸಹಕಾರ ಸಚಿವರು ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಎಸ್.ಟಿ.ಸೋಮಶೇಖರ್ ಹೇಳಿದರು.

Karnataka Minister directs District Administration to speed up road restoration after landslide reported near Chamundi Hills

ಜಿಲ್ಲಾಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ಪರಿಸ್ಥಿತಿ ಅವಲೋಕಿಸಿ ತುರ್ತು ಕ್ರಮ ಕೈಗೊಳ್ಳಬೇಕು. ಮುಂದಾಗಬಹುದಾದ ಅನಾಹುತ ತಪ್ಪಿಸಲು ಕೂಡಲೇ ಆ ರಸ್ತೆ ಸಂಚಾರವನ್ನು ಬಂದ್ ಮಾಡಿ, ದುರಸ್ಥಿ ಕಾರ್ಯವನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.

ಆದಷ್ಟು ಶೀಘ್ರದಲ್ಲಿ ನಾನು ಬಂದು ಪರಿಶೀಲಿಸುತ್ತೇನೆ. ದುರಸ್ತಿ ಕಾರ್ಯವನ್ನು ಸಮರೋಪಾದಿಯಲ್ಲಿ ತೆಗೆದುಕೊಂಡು ಪ್ರವಾಸಿಗರಿಗೆ ಅನುಕೂಲ ಮಾಡಿಕೊಡಬೇಕು ಎಂದು ಸೂಚಿಸಿದೆ.

LEAVE A REPLY

Please enter your comment!
Please enter your name here