ಬೆಂಗಳೂರು:
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಶುಕ್ರವಾರ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೊಂದಿಗೆ ಬೊಮ್ಮಾಯಿ ಅವರ ರೇಸ್ ಕೋರ್ಸ್ ರಸ್ತೆಯ ಸರ್ಕಾರಿ ರೇಸ್ವ್ಯೂ ಕಾಟೇಜ್ಗೆ ಭೇಟಿ ನೀಡಿ ಮಾತುಕತೆ ನಡೆಸಿದರು.
ಮಾತುಕತೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಶಿವಕುಮಾರ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು 2 ವರ್ಷಗಳ ಕಾಲ ರಾಜ್ಯದ ಮುಖ್ಯಮಂತ್ರಿಗಳಾಗಿ, ಬೆಂಗಳೂರಿನ ಅಭಿವೃದ್ಧಿಗೆ ಕೆಲವು ಉತ್ತಮ ಯೋಜನೆ ಹಾಕಿಕೊಂಡಿದ್ದರು. ಆ ಯೋಜನೆಗಳು ಇನ್ನೂ ಜಾರಿಯಾಗಿಲ್ಲ. ಹೀಗಾಗಿ ಅವರನ್ನು ಭೇಟಿ ಮಾಡಿ ಅವರ ಸಲಹೆ, ಅಭಿಪ್ರಾಯ ಪಡೆದಿದ್ದೇನೆ ಎಂದು ಹೇಳಿದರು.
ಉಪ ಮುಖ್ಯಮಂತ್ರಿಯಾದ ಬಳಿಕ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಎಸ್.ಎಂ. ಕೃಷ್ಣ, ಬಿ.ಎಸ್. ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಅವರನ್ನು ಭೇಟಿ ಮಾಡಿದರು.