Home ಬೆಂಗಳೂರು ನಗರ Karnataka Minister MB Patil | ರಾಜ್ಯದಲ್ಲಿ ವಹಿವಾಟು ಹೆಚ್ಚಳಕ್ಕೆ ಅಮೆರಿಕದ ಉದ್ಯಮಿಗಳ ಒಲವು, 60...

Karnataka Minister MB Patil | ರಾಜ್ಯದಲ್ಲಿ ವಹಿವಾಟು ಹೆಚ್ಚಳಕ್ಕೆ ಅಮೆರಿಕದ ಉದ್ಯಮಿಗಳ ಒಲವು, 60 ಉದ್ಯಮಿಗಳೊಂದಿಗೆ ಸಭೆ ನಡೆಸಿದ ಸಚಿವ ಎಂ ಬಿ ಪಾಟೀಲ

81
0
Karnataka Minister MB Patil held meeting with 60 businessmen on inclination of American businessmen to increase turnover in state
Karnataka Minister MB Patil held meeting with 60 businessmen on inclination of American businessmen to increase turnover in state

ಆಸ್ಟಿನ್/ಬೆಂಗಳೂರು:

`ಅಕ್ಕ’ (ಅಮೆರಿಕ ಕನ್ನಡ ಕೂಟಗಳ ಆಗರ) ಸಂಘಟನೆ ಮತ್ತು ಯುಎಸ್- ಇಂಡಿಯಾ ಚೇಂಬರ್ ಆಫ್ ಕಾಮರ್ಸ್ ಶುಕ್ರವಾರದಂದು ಸಂಯುಕ್ತವಾಗಿ ಏರ್ಪಡಿಸಿದ್ದ ಉದ್ಯಮಿಗಳ ದುಂಡು ಮೇಜಿನ ಸಭೆಯಲ್ಲಿ ರಾಜ್ಯದ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಭಾಗವಹಿಸಿದ್ದರು.

60ಕ್ಕೂ ಹೆಚ್ಚು ಉದ್ಯಮಿಗಳು ಈ ಸಭೆಯಲ್ಲಿ ಪಾಲ್ಗೊಂಡಿದ್ದು, ಹೆಚ್ಚಿನವರು ಕರ್ನಾಟಕದಲ್ಲಿ ತಮ್ಮ ವಹಿವಾಟು ಮತ್ತು ನೆಲೆಯನ್ನು ವಿಸ್ತರಿಸಿಕೊಳ್ಳುವ ಆಸಕ್ತಿಯನ್ನು ವ್ಯಕ್ತಪಡಿಸಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ. ಟೈ ಆಸ್ಟಿನ್ ಮತ್ತು ಆಸ್ಟಿನ್ ಚೇಂಬರ್ ಆಫ್ ಕಾಮರ್ಸ್ ಸಂಸ್ಥೆಗಳು ಕೂಡ ಈ ಸಭೆಯಲ್ಲಿ ಸಕ್ರಿಯವಾಗಿದ್ದವು.

ಈ ಸಭೆಯಲ್ಲಿ ಪಾಲ್ಗೊಂಡಿದ್ದ ಹೆಚ್ಚಿನ ಕಂಪನಿಗಳು ಈಗಾಗಲೇ ಕರ್ನಾಟಕದಲ್ಲಿ ತಮ್ಮ ವಹಿವಾಟು ನಡೆಸುತ್ತಿದ್ದು, ಕಚೇರಿ ಹೊಂದಿವೆ. ರಾಜ್ಯದಲ್ಲಿ ಕೈಗಾರಿಕೆಗಳ ಬೆಳವಣಿಗೆಗೆ ಇರುವ ಉತ್ತೇಜನವನ್ನು ಕಂಡು, ಅವು ತಮ್ಮ ವ್ಯಾಪ್ತಿಯನ್ನು ಮತ್ತಷ್ಟು ಹಿಗ್ಗಿಸಿಕೊಳ್ಳಲು ಉತ್ಸುಕವಾಗಿವೆ. ಜೊತೆಗೆ, ಇತ್ತೀಚಿನ ವರ್ಷಗಳಲ್ಲಿ ಪ್ರವರ್ಧಮಾನಕ್ಕೆ ಬಂದಿರುವ ನವೋದ್ಯಮಗಳ ಕಾರ್ಯಪರಿಸರಕ್ಕೆ ಮತ್ತಷ್ಟು ಇಂಬು ಕೊಡಬೇಕಾದ ಅಗತ್ಯವಿದೆ. ಇದನ್ನೆಲ್ಲ ಗಮನದಲ್ಲಿ ಇಟ್ಟುಕೊಂಡು, ಉದ್ಯಮಿಗಳೊಂದಿಗೆ ವಿಚಾರ ವಿನಿಮಯ ನಡೆಸಲಾಯಿತು ಎಂದು ಅವರು ಹೇಳಿದ್ದಾರೆ.

ಅಮೆರಿಕದ ಕಂಪನಿಗಳು ಭಾರತ ಮತ್ತು ಕರ್ನಾಟಕದ ಆರ್ಥಿಕ ಬೆಳವಣಿಗೆಯಲ್ಲಿ ಮಹತ್ತ್ವದ ಪಾತ್ರ ವಹಿಸಿಕೊಂಡು ಬಂದಿವೆ. ಇತ್ತೀಚಿನ ದಶಕಗಳಲ್ಲಿ ಎರಡೂ ದೇಶಗಳು ನಿಕಟವಾಗಿದ್ದು, ಪರಸ್ಪರ ಮಾರುಕಟ್ಟೆಯನ್ನು ಆವಿಷ್ಕರಿಸುತ್ತಲೇ ಇವೆ. ಇದನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಬೇಕೆನ್ನುವುದು ಕರ್ನಾಟಕ ಸರಕಾರದ ಮಹತ್ವಾಕಾಂಕ್ಷೆಯಾಗಿದೆ. ಈ ನಿಟ್ಟಿನಲ್ಲಿ ನಾವು ರೂಪಿಸುತ್ತಿರುವ ವಿನೂತನ ಕೈಗಾರಿಕಾ ಉಪಕ್ರಮಗಳನ್ನು ಮನದಟ್ಟು ಮಾಡಿಕೊಡಲಾಯಿತು ಎಂದು ಅವರು ಮಾಹಿತಿ ನೀಡಿದ್ದಾರೆ.

ಗ್ಲೋಬಲ್ ಫೌಂಡ್ರೀಸ್ ಜತೆ ಮಾತುಕತೆ

ಬೆಂಗಳೂರಿನಲ್ಲಿ ಕಚೇರಿ ಹೊಂದಿರುವ ಗ್ಲೋಬಲ್ ಫೌಂಡ್ರೀಸ್ ಕಂಪನಿಯು 2025ರ ವೇಳೆಗೆ ತನ್ನ ಉದ್ಯೋಗಿಗಳ ಸಂಖ್ಯೆಯನ್ನು ಶೇಕಡ 25ರಷ್ಟು ಹೆಚ್ಚಿಸಲು ತೀರ್ಮಾನಿಸಿದೆ. ಇದಕ್ಕೆ ಪೂರಕವಾಗಿ ಸರಕಾರವು ಸುಸಜ್ಜಿತ ಮಾನವ ಸಂಪನ್ಮೂಲವನ್ನು ಒದಗಿಸಲು ಬದ್ಧವಾಗಿದೆ ಎಂದು ಸಚಿವ ಪಾಟೀಲ ತಿಳಿಸಿದ್ದಾರೆ.

ಕಂಪನಿಯ ಉನ್ನತ ಪ್ರತಿನಿಧಿಗಳೊಂದಿಗೆ ಶುಕ್ರವಾರ ನಿರ್ಣಾಯಕ ಮಾತುಕತೆ ನಡೆಸಲಾಗಿದೆ. 30 ಬಿಲಿಯನ್ ಡಾಲರ್ ಮೌಲ್ಯದ ಗ್ಲೋಬಲ್ ಫೌಂಡ್ರೀಸ್ ಕಂಪನಿಯು ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಜಾಗತಿಕ ಮಟ್ಟದಲ್ಲಿ ಸಾಧನೆ ಮಾಡಿದೆ. ರಾಜ್ಯದಲ್ಲಿ ಇದು ತನ್ನ ನೆಲೆಯನ್ನು ವಿಸ್ತರಿಸಿಕೊಳ್ಳಲು ಬಯಸಿದ್ದು, ಇದಕ್ಕೆ ಸರಕಾರದ ವತಿಯಿಂದ ಅಗತ್ಯ ನೆರವು ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ರಕ್ಷಣೆ ಮತ್ತು ವೈಮಾಂತರಿಕ್ಷ ವಲಯಗಳಲ್ಲಿ ಛಾಪು ಮೂಡಿಸಲು ಕಂಪನಿಯು ಒಲವು ಹೊಂದಿದೆ. ಇದಕ್ಕೆ ಅಗತ್ಯವಾದ ವ್ಯಾಪಾರ ಕಾರ್ಯತಂತ್ರವನ್ನು ಅದು ಅಭಿವೃದ್ಧಿ ಪಡಿಸಲಿದೆ. ಈ ಮೂಲಕ ರಾಜ್ಯದಲ್ಲಿ ಹೂಡಿಕೆ ಹೆಚ್ಚಳ ಮತ್ತು ಉದ್ಯೋಗಸೃಷ್ಟಿ ಎರಡೂ ಸಾಧ್ಯವಾಗಲಿದೆ ಎಂದು ಸಚಿವರು ವಿವರಿಸಿದ್ದಾರೆ.

ಈ ಮಾತುಕತೆಯಲ್ಲಿ ಕಂಪನಿಯ ಪರವಾಗಿ ಸಿಐಒ ಮೈಕ್ ಕ್ಯಾಡಿಗಾನ್ ಮತ್ತು ಭಾರತದ ವ್ಯವಹಾರಗಳ ಮುಖ್ಯಸ್ಥ ಜಿತೇಂದ್ರ ಛಡ್ಡಾ ಪಾಲ್ಗೊಂಡಿದ್ದರು. ರಾಜ್ಯ ಸರಕಾರದ ನಿಯೋಗದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್ ಸೆಲ್ವಕುಮಾರ್ ಮತ್ತು ಆಯುಕ್ತೆ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.

(Disclaimer: The above release comes to you under an arrangement with the Karnataka’s Large and Medium Industries Minister MB Patil. TheBengaluruLive takes no editorial responsibility for the same.)

LEAVE A REPLY

Please enter your comment!
Please enter your name here