ಹುಮ್ನಾಬಾದ್/ಬೀದರ್:
ಬೀದರ್ ಜಿಲ್ಲಾ ಪ್ರವಾಸದಲ್ಲಿರುವ ರೇಷ್ಮೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಚಿವರಾದ ಡಾ.ನಾರಾಯಣಗೌಡ ಅವರು ಹುಮ್ನಾಬಾದ್ ಬಿಜೆಪಿ ಕಚೇರಿಗೆ ಭೇಟಿ ನೀಡಿದರು.
ಹುಮ್ನಾಬಾದ್ ನಗರಕ್ಕೆ ಆಗಮಿಸಿದ ಸಚಿವ ನಾರಾಯಣ ಗೌಡ ಅವರಿಗೆ ಬಿಜೆಪಿ ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದರು.
ಹುಮ್ನಾಬಾದ್ ಬಿಜೆಪಿ ಕಾರ್ಯಕರ್ತರ ಜೊತೆ ಸಚಿವ ನಾರಾಯಣ ಗೌಡ ಅವರು ಪಕ್ಷದ ಸಂಘಟನೆ ಕುರಿತು ಕೆಲಕಾಲ ಮಾತುಕತೆ ನಡೆಸಿದರು.
ಇದೇ ವೇಳೆ ಕಾರ್ಯಕರ್ತರ ಅಹವಾಲು ಸ್ವೀಕರಿಸಿದ ಸಚಿವ ನಾರಾಯಣ ಗೌಡ ಅವರು, ಕಾರ್ಯಕರ್ತರ ಮನವಿಯಂತೆ
ಮಾಣಿಕ್ ನಗರ ರೇಷ್ಮೆ ಮಾರಾಟ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸುವ ಭರವಸೆ ನೀಡಿದರು.
ನಮ್ಮ ಸರ್ಕಾರ ಕ್ರೀಡೆಗೆ ಉತ್ತಮ ಪ್ರೋತ್ಸಾಹ ನೀಡುತ್ತಿದ್ದು, ಕ್ರೀಡಾ ಚಟುವಟಿಕೆಗಳಿಗೆ ಪೂರಕವಾಗಿ ಹಲವು ಯೋಜನೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವ ನಾರಾಯಣ ಗೌಡ ಅವರು ತಿಳಿಸಿದರು.
ಬೀದರ್ ಜಿಲ್ಲಾ ಪ್ರವಾಸ ವೇಳೆ ಹುಮ್ನಾಬಾದ್ ಬಿಜೆಪಿ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರ ಜೊತೆ ಮಾತುಕತೆ ನಡೆಸಲಾಯಿತು.
— Dr.Narayana Gowda / ಡಾ.ನಾರಾಯಣ ಗೌಡ (@narayanagowdakc) October 25, 2021
ಇದೇ ವೇಳೆ ಕಾರ್ಯಕರ್ತರ ಮನವಿಯಂತೆ ಮಾಣಿಕ್ ನಗರ ರೇಷ್ಮೆ ಮಾರಾಟ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸುವುದಾಗಿ ತಿಳಿಸಿದ್ದೇನೆ.@BJP4Karnataka pic.twitter.com/UxbPMiTPkC
ಈ ಭಾಗದಲ್ಲಿ ರೇಷ್ಮೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿದ್ದರೂ ಎಲ್ಲವನ್ನೂ ಬಗೆಹರಿಸುವುದಾಗಿ ಹಾಗೂ ಎಲ್ಲಾ ರೀತಿಯ ನೆರವನ್ನು ನೀಡುವುದಾಗಿ ಸಚಿವ ಡಾ. ನಾರಾಯಯಗೌಡ ಅವರು ಭರವಸೆ ನೀಡಿದರು.
ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷೆ ಸವಿತಾ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಶಿವಾನಂದ ಮಂಠಾಳಕರ್, ಬಿಎಸ್ ಎಸ್ ಕೆ ಅಧ್ಯಕ್ಷ ಸುಭಾಷ ಕಲ್ಲೂರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.