Home ಬೆಂಗಳೂರು ನಗರ ಡಿಸೆಂಬರ್​ ನಲ್ಲಿ ಬಿಬಿಎಂಪಿ ಚುನಾವಣೆ ನಡೆಸಲು ಸಚಿವ ರಾಮಲಿಂಗಾರೆಡ್ಡಿ ಚಿಂತನೆ

ಡಿಸೆಂಬರ್​ ನಲ್ಲಿ ಬಿಬಿಎಂಪಿ ಚುನಾವಣೆ ನಡೆಸಲು ಸಚಿವ ರಾಮಲಿಂಗಾರೆಡ್ಡಿ ಚಿಂತನೆ

84
0
Karnataka Minister Ramalinga Reddy hints of holding BBMP elections in December
Karnataka Minister Ramalinga Reddy hints of holding BBMP elections in December

ವಾರ್ಡ್‌ ವಿಂಗಡಣೆ ಹಸ್ತಕ್ಷೇಪ ಮಾಡುವುದಿಲ್ಲ

ಬೆಂಗಳೂರು:

ಡಿಸೆಂಬರ್‌ನಲ್ಲಿ ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಬಿಬಿಎಂಪಿ ವಾರ್ಡ್ ಮರು ವಿಂಗಡಣೆಗೆ ಕರ್ನಾಟಕ ಸರ್ಕಾರ ಹೊಸ ಆಯೋಗವನ್ನು ರಚಿಸಿ ಆದೇಶ ಹೊರಡಿಸಿದ ಒಂದು ದಿನದ ನಂತರ ರಾಮಲಿಂಗಾ ರೆಡ್ಡಿ ಈ ಹೇಳಿಕೆ ನೀಡಿದ್ದಾರೆ.

ಸರ್ಕಾರದ ಕೋರಿಕೆಯ ಮೇರೆಗೆ ವಾರ್ಡ್ ವಿಂಗಡಣೆಯನ್ನು ಮರುಪರಿಶೀಲಿಸಲು ಜೂನ್ 19ರಂದು ಹೈಕೋರ್ಟ್ 12 ವಾರಗಳ ಕಾಲಾವಕಾಶವನ್ನು ನೀಡಿತ್ತು. ಹೈಕೋರ್ಟ್ ಆದೇಶದ ನಂತರ ಸರ್ಕಾರ ಬಿಬಿಎಂಪಿ ಆಯುಕ್ತರ ನೇತೃತ್ವದಲ್ಲಿ ಆಯೋಗ ರಚಿಸಿ ಆದೇಶ ಹೊರಡಿಸಿತ್ತು. ಬಿಡಿಎ ಆಯುಕ್ತರು, ಬೆಂಗಳೂರು ಉಪ ಆಯುಕ್ತರು ಮತ್ತು ಬಿಬಿಎಂಪಿ ವಿಶೇಷ ಆಯುಕ್ತರು(ಕಂದಾಯ) ಸಮಿತಿಯ ಸದಸ್ಯರಾಗಿದ್ದಾರೆ.

ಡಿಸೆಂಬರ್ ವೇಳೆಗೆ ಬಿಬಿಎಂಪಿ ಚುನಾವಣೆ ನಡೆಸುತ್ತೇವೆ. ಬಿಜೆಪಿ ಸರ್ಕಾರ ಅವರ ಇಚ್ಛೆಯಂತೆ ವಾರ್ಡ್‌ ವಿಂಗಡಣೆ ಮಾಡಿತ್ತು. ಈಗ ನಾವು ಸಮಿತಿ ರಚಿಸಿದ್ದೇವೆ ಮತ್ತು ಅಧಿಕಾರಿಗಳು ತಮ್ಮ ಕೆಲಸವನ್ನು ಮಾಡುತ್ತಾರೆ. ನಾವು ಅದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಹೊಸ ಬಿಬಿಎಂಪಿ ಕಾಯ್ದೆ ಪ್ರಕಾರ 243 ವಾರ್ಡ್‌ಗಳಿಗೆ ಚುನಾವಣೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here