ವಿಜಯಪುರ:
ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕಾನೂನು ಹೋರಾಟ ಮಾಡಬೇಕು. ಕಾಂಗ್ರೆಸ್ಸಿಗರು ಒಗ್ಗಟ್ಟಾಗಿದ್ದಾರೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.
ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಳೆಯ ಕೊರತೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬರ ಎದುರಾಗಿದೆ. ಈಗಾಗಲೇ ನಮ್ಮ ರಾಜ್ಯ ಬಹಳ ಸಂಕಷ್ಟದಲ್ಲಿದೆ. ಕಾವೇರಿ ಭಾಗದ ರೈತರೂ ಕಷ್ಟದಲ್ಲಿದ್ದಾರೆ. ಹೀಗಾಗಿ ಕಾವೇರಿ ನೀರು ಬಿಡುಗಡೆ ಮಾಡಬೇಕಾದ ಸನ್ನಿವೇಶ ಎದುರಾಗಿದೆ. ನಮ್ಮ ಸರಕಾರ ಇದನ್ನು ಹೇಗೆ ನಿಭಾಯಿಸುತ್ತದೆ ಎಂಬುದನ್ನು ಕಾದು ನೋಡಬೇಕಿದೆ ಎಂದು ಹೇಳಿದರು.
Also Read: FIR Filed Against Actor Darshan for Dog Bite Incident
ಒಂದು ಕಡೆ ಸುಪ್ರೀಂ ಕೋರ್ಟ್ ಒತ್ತಡ ಮತ್ತು ಆದೇಶ, ಹೀಗಾಗಿ ಬಿಡುಗಡೆ ಮಾಡಬೇಕಾದ ಸಂದರ್ಭ ಎದುರಾಗಿದೆ. ಈ ಹಿಂದಿನ ಸರಕಾರಗಳಲ್ಲಿಯೂ ಈ ಪರಿಸ್ಥಿತಿ ಎದುರಾಗಿತ್ತು. ಸಿಎಂ ಇದ್ದಾರೆ. ಡಿಸಿಎಂ ಇದ್ದಾರೆ ಹೇಗೆ ನಿಭಾಯಿಸುತ್ತಾರೆ ನೋಡೋಣ ಎಂದು ಅವರು ಹೇಳಿದರು.
ಕಾವೇರಿ ನದಿ ನೀರಿನ ವಿಚಾರದಲ್ಲಿ ರಾಜ್ಯ ಸರಕಾರ ನಿರ್ಲಕ್ಷ್ಯ ವಹಿಸುತ್ತಿದೆಯೋ ಅಥವಾ ಕೇಂದ್ರ ಸರಕಾರ ಇದನ್ನು ಜಟಿಲ ಮಾಡುತ್ತಿದೆಯೋ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಇರಬಹುದು. ನಾವು ಬಹಳ ಅಸಹಾಯಕ ಸ್ಥಿತಿಯಲ್ಲಿದ್ದೇವೆ. ನಮ್ಮ ನೆರವಿಗೆ ಕೇಂದ್ರ ಸರಕಾರ ಬರಬೇಕು ಎಂದು ಮನವಿ ಮಾಡಿದರು.