ನವದೆಹಲಿ/ಬೆಂಗಳೂರು:
ತುಂಗಭದ್ರಾ ಸಲಹಾ ಸಮಿತಿಗೆ ಸಚಿವ ಶಿವರಾಜ್ ತಂಗಡಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಲಾಗಿದೆ ಎಂದು ಡಿಸಿಎಂ ಹಾಗೂ ಜಲ ಸಂಪನ್ಮೂಲ ಸಚಿವರಾದ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿ ಇವರ ಅಧ್ಯಕ್ಷತೆಯಲ್ಲಿ ತುಂಗಭದ್ರಾ ಸಲಹಾ ಸಮಿತಿ ಸಭೆ ಮಾಡಿ, ರೈತರ ಬೆಳೆಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಯಾವ, ಯಾವ ಕಾಲಕ್ಕೆ ಎಷ್ಟು ನೀರು ಬಿಡಬೇಕು ಎಂಬುದನ್ನು ತೀರ್ಮಾನ ಮಾಡಲಾಗುವುದು” ಎಂದು ಶಿವಕುಮಾರ್ ಅವರು ತಿಳಿಸಿದ್ದಾರೆ.