Home ಆರೋಗ್ಯ ಕೋವಿಡ್ ಸೋಂಕಿತರಲ್ಲಿ ಆತ್ಮವಿಶ್ವಾಸ ತುಂಬಲು ಸಚಿವ ಸುರೇಶ್ ಕುಮಾರ್ ಅವರ ವೈದ್ಯೆ ಪುತ್ರಿ ಡಾ. ದಿಶಾ.ಎಸ್.ಕುಮಾರ್...

ಕೋವಿಡ್ ಸೋಂಕಿತರಲ್ಲಿ ಆತ್ಮವಿಶ್ವಾಸ ತುಂಬಲು ಸಚಿವ ಸುರೇಶ್ ಕುಮಾರ್ ಅವರ ವೈದ್ಯೆ ಪುತ್ರಿ ಡಾ. ದಿಶಾ.ಎಸ್.ಕುಮಾರ್ ನೃತ್ಯ

45
0

ಬೆಂಗಳೂರು:

ತಾವು ಕೆಲಸ ಮಾಡುವ ಆಸ್ಪತ್ರೆಯಲ್ಲಿ ಮಾನಸಿಕ ಖಿನ್ನತೆಗೆ ಒಳಗಾದ ಕೋವಿಡ್ ಸೋಂಕಿತರ ಕೈಹಿಡಿದು ತಮ್ಮ‌ ನೃತ್ಯದ ಮೂಲಕ ಧೈರ್ಯವಾಗಿರಲು ಹುರಿದುಂಬಿಸಿದ ಸಚಿವ ಸುರೇಶ್ ಕುಮಾರ್‌ ಅವರ ವೈದ್ಯೆ ಪುತ್ರಿ ಡಾ.ದಿಶಾ.ಎಸ್.ಕುಮಾರ್ ತಮ್ಮ ನಡೆಯಿಂದ ಮಾದರಿಯಾಗಿದ್ದಾರೆ.

ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆಯಲ್ಲಿ ಕೆಲ ಕೋವಿಡ್ ಸೋಂಕಿತರು ವೈದ್ಯಕೀಯ ಶುಶ್ರೂಶೆಯ ಬಳಿಕವೂ ಮಾನಸಿಕ ಖಿನ್ನತೆಯನ್ನು ಅನುಭವಿಸುತ್ತಿದ್ದು, ಅವರಲ್ಲಿ ಆತ್ಮವಿಶ್ವಾಸ ತುಂಬಲು ಈ ರೀತಿ ಅಚಾನಕ್ಕಾದ ನಡೆಯನ್ನು ಅನುಸರಿಸಿದೆವು. ಸೋಂಕಿತರೊಬ್ಬರ ಕೈ ಹಿಡಿದು ಅವರ ಜೊತೆ ನಾವಿದ್ದೇವೆ ಎಂದು ಸ್ಥೈರ್ಯ ತುಂಬಿದೆವು. ನಾನು ಸತ್ತು ಹೋಗ್ತೇನೆ ಅಂತ ಭಯಭೀತನಾಗಿ ಮಲಗಿದ್ದ ಯುವಕನೊಬ್ಬ ನಮ್ಮೊಂದಿಗೆ ನೃತ್ಯ ಮಾಡಿದ್ದು, ತದನಂತರದಲ್ಲಿ ಆತ ತನ್ನ ಖಾಯಿಲೆಯಿಂದ ಚೇತರಿಸಿಕೊಂಡಿದ್ದು ಒಬ್ಬ ವೈದ್ಯೆಯಾಗಿ ನನಗೆ ಅತೀವ ತೃಪ್ತಿ ತಂದ ವಿಷಯ ಎಂದು ಡಾ.ದಿಶಾ.ಎಸ್.ಕುಮಾರ್ ಹೇಳಿದರು.

LEAVE A REPLY

Please enter your comment!
Please enter your name here