Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • 100 days in office: ನಮ್ಮ ಸರ್ಕಾರ ಸಮಾನತೆಯ ಹಾದಿಯಲ್ಲಿ ನಡೆಯುತ್ತಿದೆ; ಸಿಎಂ ಸಿದ್ದರಾಮಯ್ಯ
  • ಬೆಂಗಳೂರು ನಗರ

100 days in office: ನಮ್ಮ ಸರ್ಕಾರ ಸಮಾನತೆಯ ಹಾದಿಯಲ್ಲಿ ನಡೆಯುತ್ತಿದೆ; ಸಿಎಂ ಸಿದ್ದರಾಮಯ್ಯ

Vighnesh Pawar August 27, 2023 11:30 PM 1 minute read
Karnataka: Our government is on the path of equality; CM Siddaramaiah

Karnataka: Our government is on the path of equality; CM Siddaramaiah

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು:

2023ರ ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನಗಳನ್ನು ಗೆಲ್ಲುವ ಮೂಲಕ ರಾಜ್ಯದಲ್ಲಿ ಸರ್ಕಾರ ರಚಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ನೂರು ದಿನಗಳನ್ನು ಪೂರೈಸಿದ್ದು, ‘ಗ್ಯಾರಂಟಿ ಸರ್ಕಾರಕ್ಕೆ 100 ದಿನ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಸ ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ ” 100 ದಿನಗಳು” ಪೂರೈಸಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾಡಿನ ಮತದಾರರು ನಮ್ಮ ಮೇಲೆ ನಂಬಿಕೆ ಮತ್ತು ಭರವಸೆಯನ್ನಿಟ್ಟು 135 ಸ್ಥಾನಗಳಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿ ಪೂರ್ಣ ಬಹುಮತದ ಸುಭದ್ರ ಸರ್ಕಾರ ರಚನೆಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಜನರು ನೀಡಿರುವ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು, ಅವರ ನಿರೀಕ್ಷೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತಿದ್ದೇವೆ.

ಗ್ಯಾರಂಟಿ ಮತ್ತು ಅಭಿವೃದ್ಧಿ ಯೋಜನೆಗಳ ಅನುಷ್ಠಾನದ ಜೊತೆಜೊತೆಗೆ ಬುದ್ಧ, ಬಸವ, ಅಂಬೇಡ್ಕರ್, ಕುವೆಂಪು, ಕನಕದಾಸರು, ನಾರಾಯಣ ಗುರು ಮುಂತಾದ ದಾರ್ಶನಿಕರು ತೋರಿದ ಸಮಾನತೆಯ ಹಾದಿಯಲ್ಲಿ ನಾಡನ್ನು ಮುನ್ನಡಿಸಿಕೊಂಡು ಹೋಗುತ್ತಿದ್ದೇವೆ. ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಸರ್ಕಾರದ ಕಾರ್ಯಕ್ರಮಗಳ ಮೂಲಕ ತಲುಪಬೇಕೆಂಬ ಆಶಯದೊಂದಿಗೆ ಆರಂಭಿಸಿರುವ ನಮ್ಮ ಪಯಣಕ್ಕಿಂದು ಶತಕ ಸಂಭ್ರಮ.

ಈ ವಿಶೇಷ ಸಂದರ್ಭದಲ್ಲಿ ನಮ್ಮೊಂದಿಗೆ ಕೈಜೋಡಿಸಿ, ಬೆಂಬಲವಾಗಿ ನಿಂತಿರುವ ನಾಡಿನ ಪ್ರತಿಯೊಬ್ಬರಿಗೂ ಧನ್ಯವಾದಗಳು. ನಿಮ್ಮೆಲ್ಲರ ಸಹಕಾರ ನಿರಂತರವಾಗಿರಲಿ ಎಂದು ಹೇಳಿದ್ದಾರೆ.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ " 100 ದಿನಗಳು" ಪೂರೈಸಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾಡಿನ ಮತದಾರರು ನಮ್ಮ ಮೇಲೆ ನಂಬಿಕೆ ಮತ್ತು ಭರವಸೆಯನ್ನಿಟ್ಟು 135 ಸ್ಥಾನಗಳಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿ ಪೂರ್ಣ ಬಹುಮತದ ಸುಭದ್ರ ಸರ್ಕಾರ ರಚನೆಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಜನರು ನೀಡಿರುವ ಈ ಅವಕಾಶವನ್ನು ಸದುಪಯೋಗ… pic.twitter.com/yGZ1JtPBu6

— CM of Karnataka (@CMofKarnataka) August 27, 2023

ಹಸಿವುಮುಕ್ತ ಕರ್ನಾಟಕ” ನಿರ್ಮಾಣದ ಸಂಕಲ್ಪದೊಂದಿಗೆ ನಾವು ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆಯಡಿ ನಾಡಿನ 1.28 ಕೋಟಿ ಬಡ ಕುಟುಂಬಗಳ ಪ್ರತಿ ವ್ಯಕ್ತಿಗೆ ತಲಾ 10 ಕೆ.ಜಿ ಅಕ್ಕಿಯನ್ನು ಉಚಿತವಾಗಿ ವಿತರಿಸಲು ಉದ್ದೇಶಿಸಲಾಗಿದೆ. ಸದ್ಯ ಪೂರ್ಣ ಪ್ರಮಾಣದಲ್ಲಿ ಅಕ್ಕಿಯ ಲಭ್ಯತೆಯಿಲ್ಲದ ಕಾರಣಕ್ಕೆ ತಲಾ 5 ಕೆ.ಜಿ ಅಕ್ಕಿ ಹಾಗೂ ಇನ್ನುಳಿದ 5 ಕೆ.ಜಿ ಅಕ್ಕಿಯ ಬದಲಿಗೆ ರೂ.170 ಅನ್ನು ಫಲಾನುಭವಿಗಳ ಖಾತೆಗೆ ನೇರ ವರ್ಗಾವಣೆ ಮಾಡಲಾಗಿದೆ.

ನಮ್ಮ ಮೊದಲ ‘100 ದಿನಗಳ’ ಆಡಳಿತದಲ್ಲಿ ನುಡಿದಂತೆ ನಡೆಯುತ್ತಿದ್ದೇವೆ ಎಂದು ಹೆಮ್ಮೆಯಿಂದ ಹೇಳಬಯಸುತ್ತೇನೆ. ಗ್ಯಾರಂಟಿಗಳ ಈಡೇರಿಕೆಯ ಜೊತೆಗೆ ಅಭಿವೃದ್ಧಿಯ ರಥವನ್ನು ಮುನ್ನಡೆಸುತ್ತಿರುವ ನಮ್ಮೊಂದಿಗೆ ನಿಮ್ಮೆಲ್ಲರ ಸಹಕಾರವಿರಲಿ.

ಹಸಿವುಮುಕ್ತ ಕರ್ನಾಟಕ ನಿರ್ಮಾಣದ ಸಂಕಲ್ಪದೊಂದಿಗೆ ನಾವು ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆಯಡಿ ನಾಡಿನ 1.28 ಕೋಟಿ ಬಡ ಕುಟುಂಬಗಳ ಪ್ರತಿ ವ್ಯಕ್ತಿಗೆ ತಲಾ 10 ಕೆ.ಜಿ ಅಕ್ಕಿಯನ್ನು ಉಚಿತವಾಗಿ ವಿತರಿಸಲು ಉದ್ದೇಶಿಸಲಾಗಿದೆ. ಸದ್ಯ ಪೂರ್ಣ ಪ್ರಮಾಣದಲ್ಲಿ ಅಕ್ಕಿಯ ಲಭ್ಯತೆಯಿಲ್ಲದ ಕಾರಣಕ್ಕೆ ತಲಾ 5 ಕೆ.ಜಿ ಅಕ್ಕಿ ಹಾಗೂ ಇನ್ನುಳಿದ 5 ಕೆ.ಜಿ… pic.twitter.com/sZRLJDaP0u

— CM of Karnataka (@CMofKarnataka) August 27, 2023

ಬೆಲೆಯೇರಿಕೆಯ ಕತ್ತಲು ಸರಿಸಿ ಭರವಸೆಯ ಬೆಳಕು ಹರಿಸುವ ಆಶಯದೊಂದಿಗೆ ನಾವು ಜಾರಿಗೆ ತಂದಿರುವ “ಗೃಹಜ್ಯೋತಿ” ಯೋಜನೆಯಡಿ ನಾಡಿನ ಗೃಹಬಳಕೆದಾರರಿಗೆ 200 ಯುನಿಟ್ ವರೆಗೆ ಉಚಿತ ವಿದ್ಯುತ್ ಅನ್ನು ನೀಡಲಾಗುತ್ತಿದೆ. ಈಗಾಗಲೇ 1.48 ಕೋಟಿ ಕುಟುಂಬಗಳು ಯಶಸ್ವಿಯಾಗಿ ನೋಂದಣಿ ಮಾಡಿಕೊಳ್ಳುವ ಮೂಲಕ ಯೋಜನೆಯ ಲಾಭ ಪಡೆಯುತ್ತಿವೆ.

ನಮ್ಮ ಮೊದಲ ‘100 ದಿನಗಳ’ ಆಡಳಿತದಲ್ಲಿ ನುಡಿದಂತೆ ನಡೆಯುತ್ತಿದ್ದೇವೆ ಎಂದು ಹೆಮ್ಮೆಯಿಂದ ಹೇಳಬಯಸುತ್ತೇನೆ. ಗ್ಯಾರಂಟಿಗಳ ಈಡೇರಿಕೆಯ ಜೊತೆಗೆ ಅಭಿವೃದ್ಧಿಯ ರಥವನ್ನು ಮುನ್ನಡೆಸುತ್ತಿರುವ ನಮ್ಮೊಂದಿಗೆ ನಿಮ್ಮೆಲ್ಲರ ಸಹಕಾರವಿರಲಿ ಎಂದು ತಿಳಿಸಿದ್ದಾರೆ.

ಬೆಲೆಯೇರಿಕೆಯ ಕತ್ತಲು ಸರಿಸಿ ಭರವಸೆಯ ಬೆಳಕು ಹರಿಸುವ ಆಶಯದೊಂದಿಗೆ ನಾವು ಜಾರಿಗೆ ತಂದಿರುವ "ಗೃಹಜ್ಯೋತಿ" ಯೋಜನೆಯಡಿ ನಾಡಿನ ಗೃಹಬಳಕೆದಾರರಿಗೆ 200 ಯುನಿಟ್ ವರೆಗೆ ಉಚಿತ ವಿದ್ಯುತ್ ಅನ್ನು ನೀಡಲಾಗುತ್ತಿದೆ. ಈಗಾಗಲೇ 1.48 ಕೋಟಿ ಕುಟುಂಬಗಳು ಯಶಸ್ವಿಯಾಗಿ ನೋಂದಣಿ ಮಾಡಿಕೊಳ್ಳುವ ಮೂಲಕ ಯೋಜನೆಯ ಲಾಭ ಪಡೆಯುತ್ತಿವೆ.

ನಮ್ಮ ಮೊದಲ '100 ದಿನಗಳ'… pic.twitter.com/P5dyjuqcRj

— CM of Karnataka (@CMofKarnataka) August 27, 2023

ನಾಡಿನ ಮಹಿಳೆಯರು ಶಿಕ್ಷಣ, ಉದ್ಯೋಗ ಸಂಬಂಧಿತ ಪ್ರಯಾಣಗಳಿಗೆ ಯಾರ ಮೇಲೆಯೂ ಅವಲಂಬಿತರಾಗದೆ ಸಾರ್ವಜನಿಕ ಕ್ಷೇತ್ರಗಳಲ್ಲಿ ಪರಿಪೂರ್ಣವಾಗಿ ತೊಡಗಿಸಿಕೊಂಡು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕೆಂಬ ಸದಾಶಯದೊಂದಿಗೆ ಜಾರಿಗೆ ತಂದಿರುವ “ಶಕ್ತಿ” ಯೋಜನೆಯಡಿ ನಿತ್ಯ 50 ಲಕ್ಷಕ್ಕೂ ಹೆಚ್ಚು ಮಹಿಳೆಯರು ಮತ್ತು ವಿದ್ಯಾರ್ಥಿನಿಯರು ತಮ್ಮ ಕೆಲಸ ಕಾರ್ಯ ನಿಮಿತ್ತ ಉಚಿತವಾಗಿ ಸಂಚರಿಸುತ್ತಿದ್ದಾರೆ. ಯೋಜನೆ ಜಾರಿಯಾದ ದಿನದಿಂದ ಈ ವರೆಗೆ ಸುಮಾರು 43 ಕೋಟಿ (ಒಟ್ಟು ಪ್ರಯಾಣ ಸಂಖ್ಯೆ) ಮಂದಿ ಉಚಿತ ಪ್ರಯಾಣ ನಡೆಸಿದ್ದು, ಒಟ್ಟು ಟಿಕೆಟ್ ಮೌಲ್ಯ 1,000 ಕೋಟಿ ರೂಪಾಯಿ ದಾಟಿದೆ.

ನಾಡಿನ ಮಹಿಳೆಯರು ಶಿಕ್ಷಣ, ಉದ್ಯೋಗ ಸಂಬಂಧಿತ ಪ್ರಯಾಣಗಳಿಗೆ ಯಾರ ಮೇಲೆಯೂ ಅವಲಂಬಿತರಾಗದೆ ಸಾರ್ವಜನಿಕ ಕ್ಷೇತ್ರಗಳಲ್ಲಿ ಪರಿಪೂರ್ಣವಾಗಿ ತೊಡಗಿಸಿಕೊಂಡು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕೆಂಬ ಸದಾಶಯದೊಂದಿಗೆ ಜಾರಿಗೆ ತಂದಿರುವ "ಶಕ್ತಿ" ಯೋಜನೆಯಡಿ ನಿತ್ಯ 50 ಲಕ್ಷಕ್ಕೂ ಹೆಚ್ಚು ಮಹಿಳೆಯರು ಮತ್ತು ವಿದ್ಯಾರ್ಥಿನಿಯರು ತಮ್ಮ ಕೆಲಸ ಕಾರ್ಯ… pic.twitter.com/Plo5daIoXP

— CM of Karnataka (@CMofKarnataka) August 27, 2023

ನಾಡಿನ ಮಹಿಳೆಯರಿಂದ ವ್ಯಕ್ತವಾಗುತ್ತಿರುವ ಪ್ರಶಂಸೆಯ ಮಾತುಗಳು ಯೋಜನೆಯ ಸಫಲತೆಗೆ ಹಿಡಿದ ಕನ್ನಡಿಯಂತಿದೆ. ನಮ್ಮ ಮೊದಲ ‘100 ದಿನಗಳ’ ಆಡಳಿತದಲ್ಲಿ ನುಡಿದಂತೆ ನಡೆಯುತ್ತಿದ್ದೇವೆ ಎಂದು ಹೆಮ್ಮೆಯಿಂದ ಹೇಳಬಯಸುತ್ತೇನೆ.ಗ್ಯಾರಂಟಿಗಳ ಈಡೇರಿಕೆಯ ಜೊತೆಗೆ ಅಭಿವೃದ್ಧಿಯ ರಥವನ್ನು ಮುನ್ನಡೆಸುತ್ತಿರುವ ನಮ್ಮೊಂದಿಗೆ ನಿಮ್ಮೆಲ್ಲರ ಸಹಕಾರವಿರಲಿ.

ಕುಟುಂಬ ನಿರ್ವಹಣೆಯ ಹೊಣೆ ಹೊತ್ತ ಮಹಿಳೆಯರಿಗೆ ನಿತ್ಯ ಎದುರಾಗುವ ಬೆಲೆಯೇರಿಕೆಯ ಸಂಕಷ್ಟಗಳನ್ನು ತಗ್ಗಿಸಿ, ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ನೆರವಾಗುವ ಉದ್ದೇಶದೊಂದಿಗೆ ನಾವು ಜಾರಿಗೊಳಿಸಲಿರುವ “ಗೃಹಲಕ್ಷ್ಮಿ” ಯೋಜನೆಗೆ ಈ ವರೆಗೆ 1.08 ಕೋಟಿ ಮಹಿಳೆಯರು ಯಶಸ್ವಿಯಾಗಿ ನೋಂದಣಿ ಮಾಡಿದ್ದು, ಈ ತಿಂಗಳ 30 ರಿಂದ ಎಲ್ಲಾ ನೋಂದಾಯಿತ ಮಹಿಳೆಯರ ಬ್ಯಾಂಕ್ ಖಾತೆಗೆ ಮಾಸಿಕ ರೂ. 2,000 ನೇರ ವರ್ಗಾವಣೆ ಮಾಡಲಿದ್ದೇವೆ. ಪ್ರಸಕ್ತ ಸಾಲಿನಲ್ಲಿ ಈ ಕಾರ್ಯಕ್ರಮಕ್ಕಾಗಿ ರೂ. 17,500 ಕೋಟಿ ಮೀಸಲಿಡಲಾಗಿದೆ.

ಕುಟುಂಬ ನಿರ್ವಹಣೆಯ ಹೊಣೆ ಹೊತ್ತ ಮಹಿಳೆಯರಿಗೆ ನಿತ್ಯ ಎದುರಾಗುವ ಬೆಲೆಯೇರಿಕೆಯ ಸಂಕಷ್ಟಗಳನ್ನು ತಗ್ಗಿಸಿ, ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ನೆರವಾಗುವ ಉದ್ದೇಶದೊಂದಿಗೆ ನಾವು ಜಾರಿಗೊಳಿಸಲಿರುವ "ಗೃಹಲಕ್ಷ್ಮಿ" ಯೋಜನೆಗೆ ಈ ವರೆಗೆ 1.08 ಕೋಟಿ ಮಹಿಳೆಯರು ಯಶಸ್ವಿಯಾಗಿ ನೋಂದಣಿ ಮಾಡಿದ್ದು, ಈ ತಿಂಗಳ 30 ರಿಂದ ಎಲ್ಲಾ ನೋಂದಾಯಿತ ಮಹಿಳೆಯರ… pic.twitter.com/XqrSNtqIkz

— CM of Karnataka (@CMofKarnataka) August 27, 2023

ನಾಡಿನ ಎಲ್ಲಾ ಅರ್ಹ ಕುಟುಂಬಗಳಿಗೆ ಯೋಜನೆಯ ಲಾಭ ತಲುಪಿಸಿ, ಬಡಜನರಿಗೂ ಸ್ವಾವಲಂಬಿ ಬದುಕು ಕಟ್ಟಿಕೊಡಬೇಕು ಎಂಬ ನಮ್ಮ ಆಶಯಕ್ಕೆ ನಿಮ್ಮ ಬೆಂಬಲವಿರಲಿ. ನಮ್ಮ ಮೊದಲ ‘100 ದಿನಗಳ’ ಆಡಳಿತದಲ್ಲಿ ನುಡಿದಂತೆ ನಡೆಯುತ್ತಿದ್ದೇವೆ ಎಂದು ಹೆಮ್ಮೆಯಿಂದ ಹೇಳಬಯಸುತ್ತೇನೆ. ಗ್ಯಾರಂಟಿಗಳ ಈಡೇರಿಕೆಯ ಜೊತೆಗೆ ಅಭಿವೃದ್ಧಿಯ ರಥವನ್ನು ಮುನ್ನಡೆಸುತ್ತಿರುವ ನಮ್ಮೊಂದಿಗೆ ನಿಮ್ಮೆಲ್ಲರ ಸಹಕಾರವಿರಲಿ.

ಪ್ರಾದೇಶಿಕ ಅಸಮತೋಲನದಿಂದಾಗಿ ನೈಸರ್ಗಿಕ ಸಂಪನ್ಮೂಲಗಳ ಕೊರತೆಯಿರುವ ಕಲ್ಯಾಣ ಕರ್ನಾಟಕ ಪ್ರದೇಶವನ್ನು ನಾಡಿನ ಅಭಿವೃದ್ಧಿಯ ವೇಗಕ್ಕೆ ಸಮಾನವಾಗಿ ಮುನ್ನಡೆಸಿಕೊಂಡು ಹೋಗಬೇಕೆಂಬ ಮಹತ್ವಾಕಾಂಕ್ಷೆಯೊಂದಿಗೆ ಪ್ರಸಕ್ತ ಸಾಲಿನಲ್ಲಿ ರೂ.3,000 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನಕ್ಕೆ ಕ್ರಮಕೈಗೊಳ್ಳಲಾಗಿದೆ.

ಪ್ರಾದೇಶಿಕ ಅಸಮತೋಲನದಿಂದಾಗಿ ನೈಸರ್ಗಿಕ ಸಂಪನ್ಮೂಲಗಳ ಕೊರತೆಯಿರುವ ಕಲ್ಯಾಣ ಕರ್ನಾಟಕ ಪ್ರದೇಶವನ್ನು ನಾಡಿನ ಅಭಿವೃದ್ಧಿಯ ವೇಗಕ್ಕೆ ಸಮಾನವಾಗಿ ಮುನ್ನಡೆಸಿಕೊಂಡು ಹೋಗಬೇಕೆಂಬ ಮಹತ್ವಾಕಾಂಕ್ಷೆಯೊಂದಿಗೆ ಪ್ರಸಕ್ತ ಸಾಲಿನಲ್ಲಿ ರೂ.3,000 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನಕ್ಕೆ ಕ್ರಮಕೈಗೊಳ್ಳಲಾಗಿದೆ.
ಗುಣಮಟ್ಟದ ರಸ್ತೆ,… pic.twitter.com/Tl53JOX8aL

— CM of Karnataka (@CMofKarnataka) August 27, 2023

ಗುಣಮಟ್ಟದ ರಸ್ತೆ, ಶುದ್ಧ ಕುಡಿಯುವ ನೀರು, ವಸತಿ, ಉತ್ಕೃಷ್ಟ ಆರೋಗ್ಯ ಸೇವೆ, ಆಧುನಿಕ ಶಿಕ್ಷಣ ಸೌಲಭ್ಯಗಳನ್ನು ನೀಡುವ ಮೂಲಕ ಕಲ್ಯಾಣ ಕರ್ನಾಟಕ ಪ್ರದೇಶದ ಸರ್ವಾಂಗೀಣ ಪ್ರಗತಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ನಮ್ಮ ಮೊದಲ ‘100 ದಿನಗಳ’ ಆಡಳಿತದಲ್ಲಿ ನುಡಿದಂತೆ ನಡೆಯುತ್ತಿದ್ದೇವೆ ಎಂದು ಹೆಮ್ಮೆಯಿಂದ ಹೇಳಬಯಸುತ್ತೇನೆಂದು ಎಂದು ತಿಳಿಸಿದ್ದಾರೆ.

About the Author

Vighnesh Pawar

Subscriber

View All Posts

Post navigation

Previous: Karnataka: ಭಾರತವನ್ನು ಕಾಪಾಡಲು ನಾವೆಲ್ಲಾ ಒಂದಾಗಬೇಕಿದೆ: ಡಿಸಿಎಂ ಡಿ.ಕೆ.ಶಿವಕುಮಾರ್ ಕರೆ
Next: Mangalore: ಕುಖ್ಯಾತ ಡ್ರಗ್ ಪೆಡ್ಲರ್​​ಗಳ ಬಂಧನ; 2.6 ಲಕ್ಷ ರೂ. ಮೌಲ್ಯದ ಎಮ್​ಡಿಎಮ್​ಎ ಡ್ರಗ್​ ವಶ

Related Stories

ರೈಲು ನಿಲ್ದಾಣದ ಟಿಕೆಟ್ ಕೌಂಟರ್‌ಗಳ ಮುಂದೆ ಸರತಿ ಸಾಲಿನ ಕಂಬಗಳ ಬಳಿ ನಿಂತಿರುವ ಪ್ರಯಾಣಿಕರು
  • ಕರ್ನಾಟಕ
  • ಬೆಂಗಳೂರು ನಗರ

ಕಾನ್ಪುರ ಸೆಂಟ್ರಲ್–ಎಸ್‌ಎಂವಿಟಿ ಬೆಂಗಳೂರು ನಡುವಿನ ಸಾಪ್ತಾಹಿಕ ವಿಶೇಷ ರೈಲು ಡಿ.30ರವರೆಗೆ ವಿಸ್ತರಣೆ, ಪ್ರತಿ ದಿಕ್ಕಿನಲ್ಲಿ ಆರು ಟ್ರಿಪ್

The Bengaluru Live November 22, 2026 8:08 AM
ಪರಿಶೀಲನೆ ವೇಳೆ ಮರಗಳಿರುವ ಕೆರೆಯ ದಡದಲ್ಲಿ ನಿಂತಿರುವ ಅಧಿಕಾರಿಗಳು
  • ಬೆಂಗಳೂರು ನಗರ

ಪಶ್ಚಿಮ ನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಐದು ವಿಭಾಗಗಳ ಪರಿಶೀಲನೆ: ಕಸ ತೆರವು, ಕೆರೆ ಹೂಳೆತ್ತುವಿಕೆ, ಜಂಕ್ಷನ್ ಕಾಮಗಾರಿಗೆ ಸೂಚನೆ

The Bengaluru Live November 21, 2026 7:39 PM
ರಾತ್ರಿ ವೇಳೆ ರಸ್ತೆಯಲ್ಲಿ ಬಿಳಿ ಅಂಗಿ ಧರಿಸಿದ ಅಧಿಕಾರಿಗಳು ನಿಂತಿದ್ದು ಒಬ್ಬರು ಜೆಟ್ ಹೋಸ್‌ನಿಂದ ನೀರು ಚಿಮ್ಮಿಸುತ್ತಿದ್ದಾರೆ
  • ಬೆಂಗಳೂರು ನಗರ

ಕೇಂದ್ರ ನಗರ ಪಾಲಿಕೆಯ ಪ್ರತಿ ವಿಭಾಗಕ್ಕೆ ಒಂದು ಜೆಟ್ ಸ್ಪ್ರೇ ವಾಹನ: ವಿಧಾನಸೌಧ ಬಳಿ ಪ್ರಾತ್ಯಕ್ಷಿಕೆ ಪರಿಶೀಲಿಸಿದ ಆಯುಕ್ತ ಜಗದೀಶ್

The Bengaluru Live November 21, 2026 7:36 PM

Latest Post

ಕೆಇಎ ಪಿಯು ಕಾಲೇಜು ಪ್ರಾಂಶುಪಾಲರ ಪರೀಕ್ಷೆಗೆ ಶೇ 82ರಷ್ಟು ಹಾಜರಾತಿ, 2,349 ಅಭ್ಯರ್ಥಿಗಳು ಭಾಗಿ ಕೆಇಎ ಹೆಸರು ಮತ್ತು ಲಾಂಛನದ ಮುಂದೆ ಕುಳಿತಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಅವರ ಕಡತ ಚಿತ್ರ
  • ಶಿಕ್ಷಣ

ಕೆಇಎ ಪಿಯು ಕಾಲೇಜು ಪ್ರಾಂಶುಪಾಲರ ಪರೀಕ್ಷೆಗೆ ಶೇ 82ರಷ್ಟು ಹಾಜರಾತಿ, 2,349 ಅಭ್ಯರ್ಥಿಗಳು ಭಾಗಿ

November 22, 2026 9:22 PM
ಕರ್ನಾಟಕ ಹವಾಮಾನ: ಒಣ ಹವೆ ಮುಂದುವರಿಕೆ, ನವೆಂಬರ್ 24ರಿಂದ 26ರವರೆಗೆ ಕೆಲವೆಡೆ ಮಳೆ ಸಾಧ್ಯತೆ ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ಕರ್ನಾಟಕ ಹವಾಮಾನ: ಒಣ ಹವೆ ಮುಂದುವರಿಕೆ, ನವೆಂಬರ್ 24ರಿಂದ 26ರವರೆಗೆ ಕೆಲವೆಡೆ ಮಳೆ ಸಾಧ್ಯತೆ

November 22, 2026 2:01 PM
ನವೆಂಬರ್ 23ರಿಂದ ಕರ್ನಾಟಕದ ಕೆಲವೆಡೆ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ನವೆಂಬರ್ 23ರಿಂದ ಕರ್ನಾಟಕದ ಕೆಲವೆಡೆ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ

November 22, 2026 11:32 AM
ಕಾಂಗೋದಲ್ಲಿ 95 ಹಕ್ಕಿಪಿಕ್ಕಿ ಸಮುದಾಯದವರು ವಶಕ್ಕೆ ಎಂಬ ವರದಿ: ನೆರವಿಗೆ ಮನವಿ ಸಾಂಪ್ರದಾಯಿಕ ಉಡುಪಿನಲ್ಲಿರುವ ಮಹಿಳೆಯೊಂದಿಗೆ ಮೈಕ್‌ನಲ್ಲಿ ಮಾತನಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಸುತ್ತ ಕುಳಿತಿರುವ ಜನರು
  • ಕರ್ನಾಟಕ

ಕಾಂಗೋದಲ್ಲಿ 95 ಹಕ್ಕಿಪಿಕ್ಕಿ ಸಮುದಾಯದವರು ವಶಕ್ಕೆ ಎಂಬ ವರದಿ: ನೆರವಿಗೆ ಮನವಿ

November 22, 2026 11:16 AM
ಕಾನ್ಪುರ ಸೆಂಟ್ರಲ್–ಎಸ್‌ಎಂವಿಟಿ ಬೆಂಗಳೂರು ನಡುವಿನ ಸಾಪ್ತಾಹಿಕ ವಿಶೇಷ ರೈಲು ಡಿ.30ರವರೆಗೆ ವಿಸ್ತರಣೆ, ಪ್ರತಿ ದಿಕ್ಕಿನಲ್ಲಿ ಆರು ಟ್ರಿಪ್ ರೈಲು ನಿಲ್ದಾಣದ ಟಿಕೆಟ್ ಕೌಂಟರ್‌ಗಳ ಮುಂದೆ ಸರತಿ ಸಾಲಿನ ಕಂಬಗಳ ಬಳಿ ನಿಂತಿರುವ ಪ್ರಯಾಣಿಕರು
  • ಕರ್ನಾಟಕ
  • ಬೆಂಗಳೂರು ನಗರ

ಕಾನ್ಪುರ ಸೆಂಟ್ರಲ್–ಎಸ್‌ಎಂವಿಟಿ ಬೆಂಗಳೂರು ನಡುವಿನ ಸಾಪ್ತಾಹಿಕ ವಿಶೇಷ ರೈಲು ಡಿ.30ರವರೆಗೆ ವಿಸ್ತರಣೆ, ಪ್ರತಿ ದಿಕ್ಕಿನಲ್ಲಿ ಆರು ಟ್ರಿಪ್

November 22, 2026 8:08 AM
ಪಿಜಿ ಆಯುಷ್: ಮೊದಲ ಸುತ್ತಿನ ಸೀಟು ಹಂಚಿಕೆಯ ಅಣಕು ಫಲಿತಾಂಶ ಪ್ರಕಟ, 887 ಮಂದಿಗೆ ಸೀಟು, ನ.24ರವರೆಗೆ ಆಯ್ಕೆ ಬದಲಾವಣೆಗೆ ಅವಕಾಶ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಹೆಸರಿನ ಫಲಕ ಮತ್ತು ಲಾಂಛನದ ಮುಂದೆ ತಮ್ಮ ಮೇಜಿನ ಬಳಿ ಮಾತನಾಡುತ್ತಿರುವ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ
  • ಶಿಕ್ಷಣ

ಪಿಜಿ ಆಯುಷ್: ಮೊದಲ ಸುತ್ತಿನ ಸೀಟು ಹಂಚಿಕೆಯ ಅಣಕು ಫಲಿತಾಂಶ ಪ್ರಕಟ, 887 ಮಂದಿಗೆ ಸೀಟು, ನ.24ರವರೆಗೆ ಆಯ್ಕೆ ಬದಲಾವಣೆಗೆ ಅವಕಾಶ

November 22, 2026 8:06 AM

ನೀವು ತಪ್ಪಿಸಿಕೊಂಡಿರಬಹುದು

ಕೆಇಎ ಹೆಸರು ಮತ್ತು ಲಾಂಛನದ ಮುಂದೆ ಕುಳಿತಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಅವರ ಕಡತ ಚಿತ್ರ
  • ಶಿಕ್ಷಣ

ಕೆಇಎ ಪಿಯು ಕಾಲೇಜು ಪ್ರಾಂಶುಪಾಲರ ಪರೀಕ್ಷೆಗೆ ಶೇ 82ರಷ್ಟು ಹಾಜರಾತಿ, 2,349 ಅಭ್ಯರ್ಥಿಗಳು ಭಾಗಿ

The Bengaluru Live November 22, 2026 9:22 PM
ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ಕರ್ನಾಟಕ ಹವಾಮಾನ: ಒಣ ಹವೆ ಮುಂದುವರಿಕೆ, ನವೆಂಬರ್ 24ರಿಂದ 26ರವರೆಗೆ ಕೆಲವೆಡೆ ಮಳೆ ಸಾಧ್ಯತೆ

The Bengaluru Live November 22, 2026 2:01 PM
ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ನವೆಂಬರ್ 23ರಿಂದ ಕರ್ನಾಟಕದ ಕೆಲವೆಡೆ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ

The Bengaluru Live November 22, 2026 11:32 AM
ಸಾಂಪ್ರದಾಯಿಕ ಉಡುಪಿನಲ್ಲಿರುವ ಮಹಿಳೆಯೊಂದಿಗೆ ಮೈಕ್‌ನಲ್ಲಿ ಮಾತನಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಸುತ್ತ ಕುಳಿತಿರುವ ಜನರು
  • ಕರ್ನಾಟಕ

ಕಾಂಗೋದಲ್ಲಿ 95 ಹಕ್ಕಿಪಿಕ್ಕಿ ಸಮುದಾಯದವರು ವಶಕ್ಕೆ ಎಂಬ ವರದಿ: ನೆರವಿಗೆ ಮನವಿ

The Bengaluru Live November 22, 2026 11:16 AM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಕೆಇಎ ಪಿಯು ಕಾಲೇಜು ಪ್ರಾಂಶುಪಾಲರ ಪರೀಕ್ಷೆಗೆ ಶೇ 82ರಷ್ಟು ಹಾಜರಾತಿ, 2,349 ಅಭ್ಯರ್ಥಿಗಳು ಭಾಗಿ
  • ಕರ್ನಾಟಕ ಹವಾಮಾನ: ಒಣ ಹವೆ ಮುಂದುವರಿಕೆ, ನವೆಂಬರ್ 24ರಿಂದ 26ರವರೆಗೆ ಕೆಲವೆಡೆ ಮಳೆ ಸಾಧ್ಯತೆ
  • ನವೆಂಬರ್ 23ರಿಂದ ಕರ್ನಾಟಕದ ಕೆಲವೆಡೆ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ
  • ಕಾಂಗೋದಲ್ಲಿ 95 ಹಕ್ಕಿಪಿಕ್ಕಿ ಸಮುದಾಯದವರು ವಶಕ್ಕೆ ಎಂಬ ವರದಿ: ನೆರವಿಗೆ ಮನವಿ
©Copyright 2025 The Bengaluru Live All rights reserved. | MoreNews by AF themes.