ಜಿಲ್ಲಾ-ತಾಲೂಕು ಪಂಚಾಯಿತಿ ಮೀಸಲಾತಿ ಪ್ರಕಟ: ಅಕ್ಟೋಬರ್ 19ರವರೆಗೆ ಆಕ್ಷೇಪಣೆಗೆ ಅವಕಾಶ
ಬೆಂಗಳೂರು: ರಾಜ್ಯದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಸದಸ್ಯ ಸ್ಥಾನಗಳ ಮೀಸಲಾತಿ ಪ್ರಕಟಿಸಲಾಗಿದೆ. ಮೀಸಲಾತಿಗೆ ಸಂಬಂಧಿಸಿದ ಆಕ್ಷೇಪಣೆಗಳನ್ನು ಅಕ್ಟೋಬರ್ 19ರಂದು ಸಂಜೆ 5 ಗಂಟೆಯವರೆಗೆ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ತಿಳಿಸಿದೆ.
ರಾಜ್ಯದ 31 ಜಿಲ್ಲಾ ಪಂಚಾಯಿತಿಗಳ 1,129 ಸದಸ್ಯ ಸ್ಥಾನಗಳು ಹಾಗೂ ತಾಲೂಕು ಪಂಚಾಯಿತಿಗಳ 3,656 ಸದಸ್ಯ ಸ್ಥಾನಗಳಿಗೆ ಮೀಸಲಾತಿ ಘೋಷಿಸಲಾಗಿದೆ. ಸಾಮಾನ್ಯ ವರ್ಗ ಸೇರಿದಂತೆ ಎಲ್ಲ ವರ್ಗಗಳಲ್ಲಿ ಮಹಿಳೆಯರಿಗೆ ಶೇ.50 ಸ್ಥಾನಗಳನ್ನು ಮೀಸಲಿಡಲಾಗಿದೆ.
ನಿಗದಿತ ಅವಧಿಯೊಳಗೆ ಪಂಚಾಯತ್ ರಾಜ್ ಇಲಾಖೆಯ ನಿರ್ದೇಶಕರಿಗೆ ಅಂಚೆ ಮೂಲಕ ಅಥವಾ ನೇರವಾಗಿ ಆಕ್ಷೇಪಣೆ ಸಲ್ಲಿಸಬಹುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
