Home ಮೈಸೂರು ಮೈಸೂರಿನಲ್ಲಿ ಶಾಶ್ವತ ವಸ್ತುಪ್ರದರ್ಶನಕ್ಕೆ ಚಿಂತನೆ: ಸಿ.ಎಂ

ಮೈಸೂರಿನಲ್ಲಿ ಶಾಶ್ವತ ವಸ್ತುಪ್ರದರ್ಶನಕ್ಕೆ ಚಿಂತನೆ: ಸಿ.ಎಂ

44
0
Karnataka plans for permanent exhibition centre in Mysore: CM
Advertisement
bengaluru

ಮೈಸೂರು:

ಮೈಸೂರಿನ ವಸ್ತುಪ್ರದರ್ಶನ ಮೈದಾನವನ್ನು ವರ್ಷವಿಡೀ ಉಪಯೋಗ ಮಾಡಿಕೊಳ್ಳುವ ನಿಟ್ಟಿನಲ್ಲಿ ಶಾಶ್ವತ ವಸ್ತುಪ್ರದರ್ಶನ ಆಯೋಜಿಸುವ ಬಗ್ಗೆ ಯೋಜನೆ ರೂಪಿಸಲಾಗುವುದೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.

ಮೈಸೂರಿನಲ್ಲಿ ಪ್ರವಾಸೋದ್ಯಮ ಸರ್ಕಿಟ್ ರೂಪಿಸಲು ಸಮಗ್ರ ಚಿಂತನೆ ನಡೆಸಿ ನಿರ್ಣಯವನ್ನು ಶೀಘ್ರದಲ್ಲಿಯೇ ಕೈಗೊಳ್ಳಲಾಗುವುದು ಎಂದ ಮುಖ್ಯಮಂತ್ರಿಗಳು ಉತ್ತಮ ರೀತಿಯಲ್ಲಿ ದಸರಾ ನಡೆಸಿಕೊಟ್ಟ ಮೈಸೂರಿನ ಜನತೆಗೆ ವಿಶೇಷ ಅಭಿನಂದನೆಗಳನ್ನು ಸಲ್ಲಿಸಿದರು. ಮುಂಬರುವ ವರ್ಷಗಳಲ್ಲಿ ಪರಿಸ್ಥಿತಿ ಉತ್ತಮಗೊಂಡರೆ ಅದ್ದೂರಿಯಾಗಿ ದಸರಾ ಆಚರಣೆ ಮಾಡಲಾಗುವುದು ಎಂದು ತಿಳಿಸಿದರು.

bengaluru bengaluru

ಸಿಂಧಗಿ ಮತ್ತು ಹಾನಗಲ್ ಉಪಚುನಾವಣೆ ಸಂಬಂದ ನಾಲ್ಕು ದಿನಗಳ ಪ್ರಾಚಾರಕ್ಕೆ ತೆರಳುವುದಾಗಿ ತಿಳಿಸಿದ ಅವರು ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.


bengaluru

LEAVE A REPLY

Please enter your comment!
Please enter your name here