ಬೆಂಗಳೂರು:
224 ವಿಧಾನಸಭಾ ಕ್ಷೇತ್ರಗಳಿಗೆ ರಾಜ್ಯದಲ್ಲಿ ಬೆಳಗ್ಗೆ 7 ಗಂಟೆಯಿಂದ ಮತದಾನ ನಡೆಯುತ್ತಿದ್ದು, ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಮತದಾನದ ಶೇಕಡಾವಾರು ಪ್ರಮಾಣ ಹೆಚ್ಚಾಗಿದೆ. 5 ಗಂಟೆಯವರೆಗೆ ಶೇ 66 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಸಂಜೆಯಾಗುತ್ತಲೇ ರಾಜ್ಯದ ಬಹುತೇಕ ಮತಗಟ್ಟೆಗಳಿಗೆ ಹೆಚ್ಚಿನ ಸಂಖ್ಯೆಯ ಮತದಾರರು ಆಗಮಿಸುತ್ತಿದ್ದು, ಸರದಿ ಸಾಲಿನಲ್ಲಿ ನಿಂತಿರುವ ದೃಶ್ಯ ಕಂಡುಬರುತ್ತಿದೆ. ಮತದಾನ ಅಂತ್ಯಕ್ಕೆ ಕೆಲವೇ ನಿಮಿಷಗಳಿದ್ದರೂ, ಮತದಾರರ ಸಂಖ್ಯೆ ಮಾತ್ರ ಜಾಸ್ತಿಯಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ಮತ ಚಲಾಯಿಸಿದ ದಿವ್ಯಾಂಗ ಮತದಾರ ಎಲ್ಲ ನಾಗರಿಕರಿಗೆ ಮಾದರಿಯಾಗಿದ್ದಾರೆ.@ECISVEEP @SpokespersonECI @ZP_Belagavi #KarnatakaAssemblyElection2023 pic.twitter.com/4kCe8YtYt1
— Chief Electoral Officer, Karnataka (@ceo_karnataka) May 10, 2023
ಈ ಪೈಕಿ, ರಾಮನಗರದಲ್ಲಿ ಅತಿ ಹೆಚ್ಚು ಅಂದರೆ ಶೇ 78.22 ರಷ್ಟು ಮತದಾನವಾಗಿದೆ. ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಕಡಿಮೆ ಅಂದರೆ ಶೇ 48.63ರಷ್ಟು ಮತದಾನವಾಗಿದೆ.