Home ಶಿಕ್ಷಣ ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆ‌ ಮುಂದೂಡಲಾಗಿದೆ- ಸುರೇಶ್ ಕುಮಾರ್

ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆ‌ ಮುಂದೂಡಲಾಗಿದೆ- ಸುರೇಶ್ ಕುಮಾರ್

62
0

ಬೆಂಗಳೂರು:

ಏಪ್ರಿಲ್ 28 ರಿಂದ ಪ್ರಾರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಸಚಿವ ಎಸ್. ಸುರೇಶ್ ಕುಮಾರ್ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ. ಹೆಚ್ಚುತ್ತಿರುವ ಕೋವಿಡ್19ರ ಸೋಂಕಿನ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಈ‌ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ವಾರ್ಷಿಕ ಪರೀಕ್ಷೆಗಳು ಮುಗಿದ ಕೂಡಲೇ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.

Karnataka postpones Class 12 trial exams Suresh Kumar

ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಜನಪ್ರತಿನಿಧಿಗಳು, ಪೋಷಕರುಗಳೊಂದಿಗೆ ಅಧಿಕಾರಿ ಹಂತದ ಸುದೀರ್ಘ ಚರ್ಚೆಗಳನ್ನು ನಡೆಸಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ, ವಿದ್ಯಾರ್ಥಿ ಹಿತ ಕಾಯಲು ಸರ್ಕಾರ ಬದ್ಧವಾಗಿದೆ‌ ಎಂದು ಅವರು ಹೇಳಿದ್ದಾರೆ. ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿರುವ ಕಾರಣ ವಿಚಲಿತರಾಗದೇ ಏಕಾಗ್ರತೆಯಿಂದ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆಯನ್ನು  ಮುಂದುವರೆಸಬೇಕೆಂದು ಅವರು ಕಿವಿಮಾತು‌ ಹೇಳಿದ್ದಾರೆ.

LEAVE A REPLY

Please enter your comment!
Please enter your name here