Home ಉತ್ತರ ಕನ್ನಡ ಸರ್ವಋತು ರಸ್ತೆ ನಿರ್ಮಾಣಕ್ಕೆ ಯತ್ನ: ಹೆಚ್ಚಿನ ಅನುದಾನಕ್ಕಾಗಿ ಅಧಿಕಾರಿಗಳೊಂದಿಗೆ ಚರ್ಚೆ; ಸಚಿವ ಸಿ.ಸಿ ಪಾಟೀಲ

ಸರ್ವಋತು ರಸ್ತೆ ನಿರ್ಮಾಣಕ್ಕೆ ಯತ್ನ: ಹೆಚ್ಚಿನ ಅನುದಾನಕ್ಕಾಗಿ ಅಧಿಕಾರಿಗಳೊಂದಿಗೆ ಚರ್ಚೆ; ಸಚಿವ ಸಿ.ಸಿ ಪಾಟೀಲ

188
0
Karnataka PWD Minister CC Patil assures for grants for developments of roads
Advertisement
bengaluru

ಉತ್ತರ ಕನ್ನಡ:

ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಸರ್ವಋತು ರಸ್ತೆಗಳ ಪುನರ್ನಿರ್ಮಾಣಕ್ಕೆ ಮತ್ತು ಇತರ ಕಾಮಗಾರಿಗಳಿಗೆ ಹೆಚ್ಚಿನ ಅನುದಾನಕ್ಕಾಗಿ ಒದಗಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಲೋಕೋಪಯೋಗಿ ಸಚಿವರಾದ ಶ್ರೀ ಸಿ.ಸಿ. ಪಾಟೀಲರು ಹೇಳಿದರು.

ಇಂದು ಸೋಮವಾರ ಕಾರ್ಮಿಕ ಸಚಿವ ಶ್ರೀ ಶಿವರಾಮ್ ಹೆಬ್ಬಾರ್‌ ಅವರೊಂದಿಗೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಳಚೆ ಗ್ರಾಮಕ್ಕೆ ಭೇಟಿ ನೀಡಿದ ಅವರು ಅತಿವೃಷ್ಟಿಯಿಂದ ಭೂ ಕುಸಿತವಾದ ಪ್ರದೇಶಗಳನ್ನು ಖುದ್ದಾಗಿ ಪರಿಶೀಲನೆ ನಡೆಸಿ ಮಾತನಾಡುತ್ತಿದ್ದರು.

Karnataka PWD Minister CC Patil assures for grants for developments of roads

ನಂತರ ಸ್ಥಳೀಯ ಗ್ರಾಮಸ್ಥರ ಮನವಿ ಸ್ವೀಕರಿಸಿದ ಅವರು, ಬೆಂಗಳೂರಿನಿಂದ ನಿರ್ಣಯ ತೆಗೆದುಕೊಳ್ಳುದಕ್ಕೂ ಹಾಗೂ ಸ್ಥಳ ಪರಿಶೀಲಿಸಿ ನಿರ್ಣಯ ತೆಗೆದುಕೊಳ್ಳುವುದಕ್ಕೂ ವ್ಯತ್ಯಾಸವಿದೆ. ಈಗಾಗಲೇ ಮುಖ್ಯಮಂತ್ರಿಯವರು ಜಿಲ್ಲೆಯ ನೆರೆ ಪೀಡಿತ ಹಾಗೂ ಭೂ ಕುಸಿತ ಸ್ಥಳಗಳನ್ನು ಪರಿಶೀಲಿಸಿ ಜಿಲ್ಲೆಗೆ 210 ಕೋಟಿ ರೂ. ಅನುದಾನ ನೀಡಿದ್ದಾರೆ. ಸಚಿವ ಶಿವರಾಮ್ ಹೆಬ್ಬಾರ್‌ ಅವರ ನೇತೃತ್ವದಲ್ಲಿ ರಸ್ತೆ ಕುಸಿತದ ತೆರವು ಹಾಗೂ ಭೂಕುಸಿತ ಪ್ರದೇಶಗಳಲ್ಲಿ ಕಾಮಗಾರಿ ಭರದಿಂದ ಸಾಗುತಿದ್ದು, ಪಿ.ಡಬ್ಲ್ಯೂ. ಡಿ.ಇಲಾಖೆಯಿಂದ ಕಳಚೆ ಹಾಗೂ ಹಾನಿಯಾದ ಪ್ರದೇಶದಲ್ಲಿ ಸರ್ವಋತು ರಸ್ತೆ ನಿರ್ಮಾಣ ಮಾಡಲಾಗುವುದು ಹಾಗೂ ಹೆಚ್ಚಿನ ಅನುದಾನಕ್ಕಾಗಿ ಕೂಡಲೇ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

bengaluru bengaluru

ಸಚಿವ ಶಿವರಾಮ್ ಹೆಬ್ಬಾರ್ ಮಾತನಾಡಿ, ಜನರು ಭಯ ಪಡುವ ಅಗತ್ಯವಿಲ್ಲ. ಆದಷ್ಟು ಬೇಗ ಮೂಲಸೌಕರ್ಯ ಹಾಗೂ ರಸ್ತೆ ನಿರ್ಮಾಣ ಕಾರ್ಯ ಕೈಗೊಳ್ಳಲಾಗುವುದುಎಂದು ಹೇಳಿದರು.

Karnataka PWD Minister CC Patil assures for grants for developments of roads

ಜಿಲ್ಲೆಗೆ ಆಗಮಿಸಿದ ಲೋಕೋಪಯೋಗಿ ಸಚಿವರ ಸಹಕಾರದೊಂದಿಗೆ ಜಿಲ್ಲೆಯ ಲೋಕೋಪಯೋಗಿ ಅಧಿಕಾರಿಗಳು ಮತ್ತು ಅರಣ್ಯ ಅಧಿಕಾರಿಗಳು ರಸ್ತೆ ತೆರವು ಕಾರ್ಯದಲ್ಲಿ ಸಾಕಷ್ಟು ಶ್ರಮಿಸಿದ್ದು ಅವರಿಗೆ ಕೃತಜ್ಞತೆ ಸಲ್ಲಿಸಿದರು.

ಸಚಿವರು ಭೇಟಿ ನೀಡಿದ ಪ್ರದೇಶಗಳಲ್ಲಿ ಶಿರಸಿಯ ಸಹಾಯಕ ಆಯುಕ್ತರಾದ ಆಕೃತಿ ಬನ್ಸಾಲ್, ಯಲ್ಲಾಪುರ ಮತ್ತು ಶಿರಸಿ ತಾಲೂಕಿನ ತಹಶೀಲ್ದಾರ್‌ರು ಹಾಗೂ ಅರಣ್ಯ ಅಧಿಕಾರಿಗಳು ಉಪಸ್ಥಿತರಿದ್ದು ಅಗತ್ಯ ಮಾಹಿತಿ ನೀಡಿದರು.


bengaluru

LEAVE A REPLY

Please enter your comment!
Please enter your name here