ಬೆಂಗಳೂರು:
ಇಂದು ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆಯಾಗಲಿದೆ.
ಬೆಳಗ್ಗೆ ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ವೇಳೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ತಲುಪಲಿದೆ. ಬಾಗಲಕೋಟೆ, ಬಳ್ಳಾರಿ ಮತ್ತು ವಿಜಯಪುರದಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರುತ್ತದೆ.