Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • Karnataka Rains: ಜೀವಹಾನಿ ತಪ್ಪಿಸಲು ಹೆಚ್ಚಿನ ಕ್ರಮ ವಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ
  • ಬೆಂಗಳೂರು ನಗರ

Karnataka Rains: ಜೀವಹಾನಿ ತಪ್ಪಿಸಲು ಹೆಚ್ಚಿನ ಕ್ರಮ ವಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ

Vighnesh Pawar July 26, 2023 1:30 PM 1 minute read
Karnataka Rains: Chief Minister Siddaramaiah directs to take more measures to avoid loss of life

Karnataka Rains: Chief Minister Siddaramaiah directs to take more measures to avoid loss of life

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳ ಪರಿಶೀಲನೆ : ಮುಖ್ಯಮಂತ್ರಿಗಳಿಂದ ಜಿಲ್ಲಾಧಿಕಾರಿ ಗಳೊಂದಿಗೆ ವೀಡಿಯೊ ಸಂವಾದ

ಬೆಂಗಳೂರು:

ಹಿಂದಿನ ಪ್ರವಾಹದ ಅನುಭವದಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರೆ ಜೀವಹಾನಿ ತಪ್ಪಿ ಸಬಹುದು ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ಅವರು ಇಂದು ರಾಜ್ಯದ ಹವಾಮಾನ, ಮಳೆ ಹಾಗೂ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಪರಿಶೀಲಿಸಲು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವೀಡಿಯೊ ಸಂವಾದ ನಡೆಸಿದರು.

ಪ್ರವಾಹ ಬಂದಾಗ ಬಹಳ ರೈತರನ್ನು ಸ್ಥಳಾಂತರ ಮಾಡಲು ಸಾಧ್ಯವಿಲ್ಲ. ಹಿಂದಿನ ಸರ್ಕಾರದ ವತಿಯಿಂದ ಪರ್ಯಾಯವಾಗಿ ಕಟ್ಟಲಾಗಿರುವ ಮನೆಗಳಲ್ಲಿ ಯಾರೂ ವಾಸ ಮಾಡಲು ಕೂಡ ಹೋಗಿಲ್ಲ.

ಮುಖ್ಯಮಂತ್ರಿ @siddaramaiah ಅವರು ಇಂದು ರಾಜ್ಯದ ಹವಾಮಾನ, ಮಳೆ ಹಾಗೂ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಪರಿಶೀಲಿಸಲು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಸಿ.ಇ.ಒ ಗಳೊಂದಿಗೆ ವೀಡಿಯೊ ಸಂವಾದ ನಡೆಸಿದರು.

ಉಪಮುಖ್ಯಮಂತ್ರಿ @DKShivakumar, ಸಚಿವರಾದ @DrParameshwara, ಚೆಲುವರಾಯಸ್ವಾಮಿ, @krishnabgowda,… pic.twitter.com/MP0ydoElxF

— CM of Karnataka (@CMofKarnataka) July 26, 2023

ಅನಾಹುತಗಳನ್ನು ತಪ್ಪಿಸಲು ಹೆಚ್ಚಿನ ಗಮನ ನೀಡಬೇಕು. ಜಿಲ್ಲಾಧಿಕಾರಿಗಳು ಪದೇ ಪದೇ ಪ್ರವಾಹವಾಗುವ ಸ್ಥಳಗಳಲ್ಲಿ ಜನರನ್ನು ಬಲವಂತವಾಗಿ ಸ್ಥಳಾಂತರ ಮಾಡಿ ಜೀವಹಾನಿ ತಪ್ಪಿಸಬೇಕು ಎಂದು ಸೂಚಿಸಿದರು.

ನೆರೆ ಬಂದು ನೀರು ಹೆಚ್ಚಾದರೆ ಅದರ ಬಳಿ ಜನರು ಹೋಗದಂತೆ ಆಡಳಿತದವರು ತಡೆಯಲು ಕ್ರಮ ವಹಿಸಲು ಸೂಚಿಸಿದರು. ಜನರಿಗೆ ಈ ಬಗ್ಗೆ ಎಚ್ಚರಿಕೆ ನೀಡುವುದು ಹಾಗೂ ಅರಿವು ಮೂಡಿಸುವ ಕೆಲಸ ಮಾಡಿ ಪ್ರಾಣಹಾನಿಯನ್ನು ತಪ್ಪಿಸಬೇಕು ಎಂದರು.

ಸಮನ್ವಯ

ಪೊಲೀಸ್, ಕಂದಾಯ, ನೀರಾವರಿ, ಗ್ರಾಮೀಣಾಭಿವೃದ್ಧಿ ಇಲಾಖೆಗಳ ಮಧ್ಯೆ ಸಮನ್ವಯ ಅಗತ್ಯ. ಸಮನ್ವಯವಿದ್ದರೆ ಸಾಕಷ್ಟು ಜೀವಹಾನಿ ತಪ್ಪಿಸಬಹುದು. ಮಣ್ಣು ಕುಸಿತವಾಗುವ ಸ್ಥಳಗಳ ಬಗ್ಗೆ ಇಲಾಖೆಗಳಿಗೆ ಮಾಹಿತಿ ಇರುತ್ತದೆ. ಅಂಥವನ್ನು ತಡೆಗಟ್ಟಬೇಕು ಎಂದು ಸೂಚಿಸಿದರು.

ಉಡುಪಿ ಜಿಲ್ಲೆಯಲ್ಲಿ ಒಂಭತ್ತು ಜೀವಹಾನಿಯಾಗಿದೆ. ಅಪಘಾತಗಳನ್ನು ತಪ್ಪಿಸಲು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಸಾವುಗಳನ್ನು ತಪ್ಪಿಸುವುದು ಬಹಳ ಮುಖ್ಯ.

ಜನವರಿ ಒಂದರಿಂದ ಜುಲೈ 25 ರವರೆಗೆ 64 ಜನ ಮರಣಹೊಂದಿದ್ದಾರೆ. ಆಂತರಿಕವಾಗಿ ಇದನ್ನು ತಪ್ಪಿಸಬೇಕು.

ಸಂಬಂಧಪಟ್ಟ ಅಧಿಕಾರಿಗಳು ಮಳೆ ಸಾಧ್ಯತೆಗಳ ಬಗ್ಗೆ ಪ್ರತಿದಿನ ಪತ್ರಿಕಾ ಗೋಷ್ಠಿ ನಡೆಸಬೇಕು. ಕಾಲು ಜಾರುವ ಕಡೆಗಳಲ್ಲಿ ಹೋಗಬಾರದು, ತುಂಬಿ ಹರಿವ ನದಿಗಳನ್ನು ಹಾಯಬಾರದು ಎಂದು ಸೂಚಿಸಬೇಕು. ಸಾವು ತಡೆಗಟ್ಟಲು ಹೆಚ್ಚಿನ ಶ್ರಮವಹಿಸಬೇಕು ಎಂದರು.

ಆದ್ಯತೆಯ ಮೇರೆಗೆ ಶಿಥಿಲಗೊಂಡ ಆಸ್ಪತ್ರೆ, ಶಾಲೆ ಹಾಗೂ ಅಂಗನವಾಡಿ ಕಟ್ಟಡಗಳನ್ನು ದುರಸ್ತಿ ಮಾಡಿಸಿ

ಮುಂಚಿತವಾಗಿಯೇ ಶಿಥಿಲವಾಗಿರುವ ಶಾಲಾ ಕಟ್ಟಡಗಳು, ಆಸ್ಪತ್ರೆಗಳು, ಅಂಗನವಾಡಿ ಕಟ್ಟಡಗಳನ್ನು ದುರಸ್ತಿ ಮಾಡಿಸಬೇಕು. ತಪ್ಪಿದರೆ ಬೇರೆಡೆಗೆ ಅವುಗಳನ್ನು ಸ್ಥಳಾಂತರ ಮಾಡಿಸಬೇಕು. ಹೀಗಾಗಿ ಬೇಜವಾಬ್ದಾರಿತನದಿಂದ ಅನಾಹುತಗಳು ಸಂಭವಿಸುತ್ತವೆ. ಅನಾಹುತವಾದರೆ ಅಧಿಕಾರಿಗಳನ್ನು ನೇರ ಹೊಣೆಯಾಗಿಸಲಾಗುವುದು.

ಅನುದಾನದ ಕೊರತೆ ಇಲ್ಲ

ಪ್ರತಿ ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ಅನುದಾನ ಲಭ್ಯವಿದೆ. ಎಸ್ .ಡಿ.ಆರ್.ಎಫ್ ನಡಿ ಅನುದಾನದ ಲಭ್ಯತೆಯೂ ಇದೆ . ದುರಸ್ತಿಗೆ ತಕ್ಷಣ ಕ್ರಮ ವಹಿಸಿ. ಹೆಚ್ಚಿನ ಅನುದಾನ ಅಗತ್ಯವಿದ್ದರೆ ಮನವಿ ಕಳಿಸಲು ಸೂಚಿಸಿದರು.

ಜಿಲ್ಲೆಯ ಎಲ್ಲಾ ಆಗುಹೋಗುಗಳ ಮೇಲೆ ಜಿಲ್ಲಾ ಉಸ್ತುವಾರಿ ಸಚಿವರು ನಿಗಾ ವಹಿಸುವಂತೆ ಸೂಚಿಸಲಾಯಿತು.

ಜಿಲ್ಲಾ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಜಿಲ್ಲಾ ಕೇಂದ್ರಗಳಲ್ಲಿಯೇ ಉಳಿಯಬೇಕು ಎಂದು ಸೂಚಿಸಿದರು.

ಕಡಲು ಕೊರೆತ

ಕಡಲು ಕೊರೆತ ತಡೆಯಲು ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ. ಈ ಬಗ್ಗೆ ಪ್ರತ್ಯೇಕ ಸಭೆ ನಡೆಸಬೇಕು.

ಪರ್ಯಾಯ ರಸ್ತೆ

ಬೆಳಗಾವಿ ಜಿಲ್ಲೆಯಲ್ಲಿ 12 ಸೇತುವೆಗಳ ಸಂಪರ್ಕ ಕಡಿತಗೊಂಡಿದೆ. ಪ್ರತಿ ವರ್ಷ ತಗ್ಗು ಪ್ರದೇಶಗಳಲ್ಲಿ ನೀರು ತುಂಬುವುದರಿಂದ ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪರ್ಯಾಯ ರಸ್ತೆ ನಿರ್ಮಾಣ ಮಾಡಲು ಕಡಿಮೆ ಜನರಿರುವ ಗ್ರಾಮಗಳನ್ನು ಸ್ಥಳಾಂತರ ಮಾಡಬೇಕು ಎಂದು ಸಲಹೆ ನೀಡಿದರು.

ಹೊಸ ಕೆಲಸಗಳಿಗೆ ನಿರ್ಬಂಧವಿಲ್ಲ

ಎಸ್.ಡಿ.ಆರ್.ಎಫ್ ಹಾಗೂ ಎನ್.ಡಿ.ಆರ್.ಎಫ್ ಅಡಿ ಆಗಿರುವ ಕೆಲಸಕ್ಕೆ ಹಣ ಪಾವತಿ ಮಾಡಲು ಯಾವುದೇ ನಿರ್ಬಂಧವಿಲ್ಲ. ಹೊಸ ಕಾಮಗಾರಿಗಳನ್ನು ಅಗತ್ಯಕ್ಕೆ ಅನುಗುಣವಾಗಿ ಕೂಡಲೇ ತೆಗೆದುಕೊಳ್ಳಲು ನಿರ್ಬಂಧವಿಲ್ಲ ಎಂದು ತಿಳಿಸಿದರು.

ವಿಜಯಪುರ, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಲ್ಲಿ ಕೃಷ್ಣಾ ನದಿಯ ನೀರು ಹರಿಸಿದರೆ ಜನ ವಸತಿ ಪ್ರದೇಶಗಳಿಗೆ ನೀರು ನುಗ್ಗುತ್ತದೆ. ನೀರು ಬಿಡುವ ಮುನ್ನವೇ ಸೂಕ್ತ ಮುನ್ನೆಚ್ಚರಿಕಾ ಕ್ರಮ ವಹಿಸಬೇಕು. ಯಾವುದೇ ಕಾರಣಕ್ಕೂ ಅನಾಹುತಗಳು ಸಂಭವಿಸದಂತೆ ವ್ಯವಸ್ಥೆ ಮಾಡಿಕೊಳ್ಳಬೇಕು.

ಕಲಬುರಗಿ ಜಿಲ್ಲಾಧಿಕಾರಿಗಳು ಮಹಾರಾಷ್ಟ್ರ ಅಧಿಕಾರಿಗಳೊಂದಿಗೆ ಪರ್ಕದಲ್ಲಿರಬೇಕು. ಅಲ್ಲಿನ ಉಜ್ಜನಿ ಜಲಾಶಯದಿಂದ ನೀರು ಹರಿಸುವ ಮುನ್ನ ಎಚ್ಚರಿಕೆ ವಹಿಸಿ. ಕಲಬುರಗಿ, ವಿಜಯಪುರ ಜಿಲ್ಲಾಧಿಕಾರಿಗಳು ಸಂಪರ್ಕದಲ್ಲಿರಬೇಕೆಂದು ಸೂಚಿಸಿದರು.

ಭೂ ಕುಸಿತ ತಡೆಗಟ್ಟಲು ಕ್ರಮ ವಹಿಸಿ

ಕೊಡಗು, ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭೂ ಕುಸಿತ ತಡೆಗಟ್ಟಲು ಕ್ರಮ ವಹಿಸಬೇಕು.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬಹುತೇಕ ಮಳೆಯಾಗಿದ್ದು, ಮುನ್ನೆಚ್ಚರಿಕಾ ಕ್ರಮ ಕೈಗೊಂಡು, ಸಮನ್ವಯ ಸಾಧಿಸಬೇಕು. ವಾರ್ ರೂಂ ಗಳನ್ನು ತೆರೆಯಬೇಕು. ಪ್ರವಾಹ ಬರುವ ಮುನ್ನ ತಗ್ಗು ಪ್ರದೇಶಗಳಲ್ಲಿನ ಜನರ ಕುರಿತು ಎಚ್ಚರಿಕೆ ಅಗತ್ಯ.

ರೈತರಿಗೆ ಯಾವುದೇ ಕಾರಣಕ್ಕೂ ತೊಂದರೆಯಾಗಬಾರದು ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಬಿತ್ತನೆಯಾಗಿದ್ದು, ಬೀಜ, ಗೊಬ್ಬರ ಹಾಗೂ ಔಷಧಿ ಕೊರತೆಯಾಗದಂತೆ ವ್ಯವಸ್ಥೆಯನ್ನು ಕೃಷಿ ಇಲಾಖೆ ಮಾಡುವುದು. ಮಳೆ ಬಾರದೆ ಬಿತ್ತನೆ ಹಾಳಾಗಿರುವ ಜಿಲ್ಲೆಗಳಲ್ಲಿ ರೈತರಿಗೆ ಬಿತ್ತನೆ ಬೀಜ ನೀಡಬೇಕು. ಕರ್ತವ್ಯ ಲೋಪ ಕಂಡುಬಂದರೆ ಅವರ ಮೇಲೆ ಕ್ರಮ ವಹಿಸಲಾಗುವುದು.

ಬಲವಂತವಾಗಿ ಸಾಲ ವಸೂಲಿ ಮಾಡುವಂತಿಲ್ಲ ರೈತರಿಗೆ ಖಾಸಗಿಯವರು ನೀಡುವ ಸಾಲವನ್ನು ಬಲವಂತವಾಗಿ ವಸೂಲಿ ಮಾಡಬಾರದು ಎಂದು ಸೂಚನೆ ನೀಡಬೇಕು. ಈ ನಿಟ್ಟಿನಲ್ಲಿ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಸೂಚನೆ ನೀಡಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಜಿ.ಪರಮೇಶ್ವರ್, ಚೆಲುವರಾಯಸ್ವಾಮಿ, ಕೃಷ್ಣಬೈರೇಗೌಡ, ಎಂ.ಸಿ.ಸುಧಾಕರ್, ಲಕ್ಷ್ಮಿ ಹೆಬ್ಬಾಳ್ಕರ್, ಪ್ರಿಯಾಂಕ ಖರ್ಗೆ,ಈಶ್ವರ್ ಖಂಡ್ರೆ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ (ವಿಪತ್ತು ನಿರ್ವಹಣೆ) ವಿ. ರಶ್ಮಿ , ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಡಿಯೋ ಸಂವಾದದ ಮುಖ್ಯಾಂಶಗಳು

1.ರಾಜ್ಯದಲ್ಲಿ ಜೂನ್‌ ತಿಂಗಳಿನಲ್ಲಿ ಭಿಪರ್‌ ಜಾಯ್‌ ಚಂಡಮಾರುತದ ಕಾರಣದಿಂದಾಗಿ ಶೇ. 56 ರಷ್ಟು ಮಳೆ ಕೊರತೆ ಕಂಡು ಬಂತು.
2.ಆದರೆ ಜುಲೈ ತಿಂಗಳಿನಲ್ಲಿ ಇಲ್ಲಿಯವರೆಗೆ ವಾಡಿಕೆ ಮಳೆ 228 ಮಿ.ಮೀ. ನಷ್ಟಿದೆ. ಆದರೆ ರಾಜ್ಯದಲ್ಲಿ 313 ಮಿ.ಮೀ. ಮಳೆ ಆಗಿದೆ. ಇದು ವಾಡಿಕೆ ಮಳೆಗಿಂತ ಶೇ. 37 ರಷ್ಟು ಹೆಚ್ಚಾಗಿದೆ.
3.ಜುಲೈ ತಿಂಗಳಿನಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದ ಜೂನ್‌ ಅಂತ್ಯಕ್ಕೆ ಇದ್ದ ಮಳೆ ಕೊರತೆಯು ಕಡಿಮೆಯಾಗಿದೆ. ಮಳೆ ಕೊರತೆ ಕಂಡು ಬಂದ ತಾಲ್ಲೂಕುಗಳ ಸಂಖ್ಯೆ ಇಳಿಕೆಯಾಗಿದೆ. ಪ್ರಸ್ತುತ ಜೂನ್‌ 1 ರಿಂದ ಈ ವರೆಗೆ ನಾಲ್ಕು ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಿದ್ದು, 21 ಜಿಲ್ಲೆಗಳಲ್ಲಿ ವಾಡಿಕೆ ಮಳೆಯಾಗಿದೆ. 6 ಜಿಲ್ಲೆಗಳಲ್ಲಿ ಮಳೆ ಕೊರತೆಯಾಗಿದೆ.
4.ಹವಾಮಾನ ಇಲಾಖೆ ಮುನ್ಸೂಚನೆ ಪಕಾರ ಮುಂದಿನ ಒಂದು ವಾರದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದ್ದು, ಮಳೆ ಕೊರತೆಯಿರುವ ತಾಲ್ಲೂಕುಗಳ ಸಂಖ್ಯೆ ಇಳಿಕೆಯಾಗಲಿದೆ.
5.ಬಹುತೇಕ ಎಲ್ಲ ಜಲಾಶಯಗಳಲ್ಲಿ ನೀರು ಬಹುತೇಕ ಭರ್ತಿಯಾಗುತ್ತಿವೆ. ಕಳೆದ ಒಂದು ವಾರದಲ್ಲಿ ಒಟ್ಟು ಸಂಚಿತ ಒಳಹರಿವು 227 ಟಿಎಂಸಿಯಷ್ಟಾಗಿದೆ.
6.ಜೂನ್‌ 1 ರಿಂದ ಈ ವರೆಗೆ ರಾಜ್ಯದಲ್ಲಿ ನೀರಿನಲ್ಲಿ ಸಿಲುಕಿ, ಸಿಡಿಲು ಬಡಿದು, ಮನೆ ಕುಸಿದು, ಮರ ಬಿದ್ದು ಹಾಗೂ ಭೂಕುಸಿತದಿಂದ ಒಟ್ಟು 38 ಮಾನವ ಜೀವಹಾನಿ ಆಗಿದೆ. 35 ಜನರು ಗಾಯಗೊಂಡಿದ್ದಾರೆ.
7.ರಾಜ್ಯದಲ್ಲಿ 57 ಮನೆಗಳು ಸಂಪೂರ್ಣವಾಗಿ, 208 ಮನೆಗಳು ತೀವ್ರವಾಗಿ ಹಾಗೂ 2682 ಮನೆಗಳು ಭಾಗಶಃ ಹಾನಿಯಾಗಿದೆ.
8.ಮಳೆಯಿಂದಾಗಿ 105 ಜಾನುವಾರುಗಳು ಮೃತಪಟ್ಟಿವೆ
9.185 ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಬೆಳೆ ಹಾಗೂ 356 ಹೆಕ್ಟೇರ್‌ ಪ್ರದೇಶದಲ್ಲಿ ತೋಟಗಾರಿಕೆ ಬೆಳೆಗಳು- ಒಟ್ಟು 541.39 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಜಲಾವೃತಗೊಂಡಿದೆ.
10.407 ಕಿ.ಮೀ. ರಾಜ್ಯ ಹೆದ್ದಾರಿ, 425 ಕಿ.ಮೀ. ಜಿಲ್ಲಾ ಹೆದ್ದಾರಿ, ಗ್ರಾಮೀಣ ರಸ್ತೆಗಳು 1277 ಕಿ.ಮೀ. ಒಟ್ಟು 2109 ಕಿ.ಮೀ. ರಸ್ತೆ ಹಾನಿಯಾಗಿದೆ.
11.189 ಸೇತುವೆಗಳು, 889 ಶಾಲಾ ಕೊಠಡಿಗಳು, 8 ಪ್ರಾಥಮಿಕ ಕೇಂದ್ರಗಳು, 269 ಅಂಗನವಾಡಿ ಕೇಂದ್ರಗಳು ಹಾನಿಯಾಗಿರುವುದು ವರದಿಯಾಗಿದೆ.
12.11,995 ವಿದ್ಯುತ್‌ ಕಂಬಗಳು, 894 ಟ್ರಾನ್ಸ್‌ಫಾರ್ಮರ್‌ ಗಳು ಹಾನಿಯಾಗಿದ್ದು, 215 ಕಿ.ಮೀ. ಉದ್ದದ ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ.
13.ಪ್ರಸ್ತುತ ಎರಡು ಪರಿಹಾರ ಶಿಬಿರ ಗಳಲ್ಲಿ 50 ಜನರಿಗೆ ಆಶ್ರಯ ನೀಡಲಾಗಿದೆ.
14.ಜೂನ್‌ ತಿಂಗಳಿನಲ್ಲಿ ಮಳೆ ಕೊರತೆಯಾದ್ದರಿಂದ ಮುಂಗಾರು ಹಂಗಾಮಿನಲ್ಲಿ ಈ ವರೆಗೆ ಶೇ. 53 ರಷ್ಟು ಬಿತ್ತನೆಯಾಗಿದೆ. ವಾಡಿಕೆಯಂತೆ ಶೇ. 83 ರಷ್ಟು ಬಿತ್ತನೆಯಾಗಿದೆ.
15.ರಾಜ್ಯದಲ್ಲಿ 156 ಲಕ್ಷ ಟನ್‌ ಮೇವು ದಾಸ್ತಾನು ಇದ್ದು, ಮುಂದಿನ 29 ವಾರಗಳಲ್ಲಿ ಸಾಕಾಗುವಷ್ಟಿದೆ.

About the Author

Vighnesh Pawar

Subscriber

View All Posts

Post navigation

Previous: ಡಿಸಿಎಂ ಡಿ ಕೆ ಶಿವಕುಮಾರ್ ಬಿಬಿಎಂಪಿ ವಾರ್ ರೂಮ್, ಕಂಟ್ರೋಲ್ ರೂಂಗೆ ದಿಢೀರ್ ಭೇಟಿ
Next: ದಲಿತ ಶಾಸಕರ ಮನೆಗೆ ಬೆಂಕಿ ಹಚ್ಚಿದವರಿಗೆ ಕಾಂಗ್ರೆಸ್ ರಕ್ಷಣೆ ದಲಿತ ವಿರೋಧಿ ನಡೆಗೆ ಸಾಕ್ಷಿ: ಬಸವರಾಜ ಬೊಮ್ಮಾಯಿ

Related Stories

ಬೆಂಗಳೂರು ಉತ್ತರ ನಗರ ಪಾಲಿಕೆಯ ಫೋನ್-ಇನ್ ಕಾರ್ಯಕ್ರಮದಲ್ಲಿ ಲ್ಯಾಂಡ್‌ಲೈನ್ ಫೋನ್ ಮತ್ತು ಕಡತಗಳೊಂದಿಗೆ ಸಭಾ ಮೇಜಿನ ಸುತ್ತ ಕುಳಿತಿರುವ ಅಧಿಕಾರಿಗಳು
  • ಬೆಂಗಳೂರು ನಗರ

ಬೆಂಗಳೂರು ಉತ್ತರ ನಗರ ಪಾಲಿಕೆ: ಪ್ರತಿ ಶುಕ್ರವಾರ ಆಯುಕ್ತರೊಂದಿಗೆ ಫೋನ್-ಇನ್; ಮೊದಲ ಕಾರ್ಯಕ್ರಮ ನವೆಂಬರ್ 20ರಂದು

The Bengaluru Live November 18, 2026 9:29 PM
ಬೆಂಗಳೂರು ಟೆಕ್ ಸಮಿಟ್ ಹಿನ್ನೆಲೆ ಫಲಕಗಳ ಮುಂದೆ ವೇದಿಕೆಯಲ್ಲಿ ಸಾಲಾಗಿ ನಿಂತು ನೀಲಿ ವರದಿ ಪ್ರತಿಗಳನ್ನು ಹಿಡಿದಿರುವ ಎಂಟು ಮಂದಿ
  • ಬೆಂಗಳೂರು ನಗರ

ಬೆಂಗಳೂರು ಇನ್ನೋವೇಶನ್ ವರದಿ 2026: ದೇಶದ ಸ್ಥಳೀಯ ಎಐ ಸ್ಟಾರ್ಟ್‌ಅಪ್ ಹೂಡಿಕೆಯ ಶೇ.36.3 ಬೆಂಗಳೂರಿಗೆ; $211 ಶತಕೋಟಿ ಮೌಲ್ಯದ 57 ಯೂನಿಕಾರ್ನ್

The Bengaluru Live November 18, 2026 9:08 PM
ಬೆಂಗಳೂರು ಟೆಕ್ ಸಮಿಟ್ ಪ್ರದರ್ಶನ ಸಭಾಂಗಣದಲ್ಲಿ ಎರಡು ಬಿಳಿ ಕೀಬೋರ್ಡ್‌ಗಳನ್ನು ಹಿಡಿದು ಕುಳಿತಿರುವ ವ್ಯಕ್ತಿ
  • ಕರ್ನಾಟಕ
  • ಬೆಂಗಳೂರು ನಗರ

ಭಾಷೆಯ ಅಡೆತಡೆ ನಿವಾರಣೆ: ಬೆಂಗಳೂರು ಟೆಕ್ ಸಮಿಟ್‌ನಲ್ಲಿ ಕ-ನಾದ ಫೋನೆಟಿಕ್ಸ್‌ನ ಸಾರ್ವತ್ರಿಕ ಭಾರತೀಯ ಭಾಷಾ ಕೀಬೋರ್ಡ್ ಅನಾವರಣ

The Bengaluru Live November 18, 2026 9:00 PM

Latest Post

ತನ್ನ ಕಡಲೆಕಾಯಿ ಎಣ್ಣೆ ಅಸಲಿ ಕೋಲ್ಡ್ ಪ್ರೆಸ್ಡ್, ಇದು ಲೇಬಲ್ ವಿಚಾರ ಮಾತ್ರ ಎಂದ ಬೋಲಾಸ್ ಆಗ್ರೋ; ತಪ್ಪು ಲೇಬಲ್ ಉಲ್ಲೇಖಿಸಿದ್ದ ಆರೋಗ್ಯ ಇಲಾಖೆ ಟಿಪ್ಪಣಿ ಬೋಲಾಸ್ ಕಡಲೆಕಾಯಿ ಎಣ್ಣೆಯ ಬಾಟಲಿಯನ್ನು ಹಿಡಿದಿರುವ ಕೈ
  • Uncategorized

ತನ್ನ ಕಡಲೆಕಾಯಿ ಎಣ್ಣೆ ಅಸಲಿ ಕೋಲ್ಡ್ ಪ್ರೆಸ್ಡ್, ಇದು ಲೇಬಲ್ ವಿಚಾರ ಮಾತ್ರ ಎಂದ ಬೋಲಾಸ್ ಆಗ್ರೋ; ತಪ್ಪು ಲೇಬಲ್ ಉಲ್ಲೇಖಿಸಿದ್ದ ಆರೋಗ್ಯ ಇಲಾಖೆ ಟಿಪ್ಪಣಿ

November 19, 2026 6:42 PM
ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾರ್ಡ್ ಒನ್ ಅಭಿಯಾನದಡಿ 273 ಅನಧಿಕೃತ ಫ್ಲೆಕ್ಸ್, ಬ್ಯಾನರ್ ತೆರವು; ದಂಡ, ಕಾನೂನು ಕ್ರಮದ ಎಚ್ಚರಿಕೆ ನಗರದ ರಸ್ತೆಯಲ್ಲಿ ಕಂಬಕ್ಕೆ ಒರಗಿದ ಬಿದ್ದಿರುವ ಬ್ಯಾನರ್ ಚೌಕಟ್ಟು; ಹಿಂದೆ ವಾಹನ ಸಂಚಾರ ಮತ್ತು ಕಟ್ಟಡಗಳು

ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾರ್ಡ್ ಒನ್ ಅಭಿಯಾನದಡಿ 273 ಅನಧಿಕೃತ ಫ್ಲೆಕ್ಸ್, ಬ್ಯಾನರ್ ತೆರವು; ದಂಡ, ಕಾನೂನು ಕ್ರಮದ ಎಚ್ಚರಿಕೆ

November 19, 2026 6:37 PM
ಆಶಾ ಕಾರ್ಯಕರ್ತೆಯರ ಬಗ್ಗೆ ಸರ್ಕಾರಕ್ಕೆ ಸಹಾನುಭೂತಿ, ಬೇಡಿಕೆಗಳ ಬಗ್ಗೆ ಚಳಿಗಾಲದ ಅಧಿವೇಶನದ ನಂತರ ನಿರ್ಧಾರ: ಸಿಎಂ ಶಿವಕುಮಾರ್; ಹೋರಾಟ ಕೈಬಿಡಲು ಮನವಿ ಗುಲಾಬಿ ಸೀರೆಯ ಆಶಾ ಕಾರ್ಯಕರ್ತೆಯರ ಪ್ರತಿನಿಧಿಗಳೊಂದಿಗೆ ನಿಂತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಒಬ್ಬ ಸಚಿವ; ಒಬ್ಬರು ಮನವಿ ಪತ್ರ ಹಿಡಿದಿದ್ದಾರೆ

ಆಶಾ ಕಾರ್ಯಕರ್ತೆಯರ ಬಗ್ಗೆ ಸರ್ಕಾರಕ್ಕೆ ಸಹಾನುಭೂತಿ, ಬೇಡಿಕೆಗಳ ಬಗ್ಗೆ ಚಳಿಗಾಲದ ಅಧಿವೇಶನದ ನಂತರ ನಿರ್ಧಾರ: ಸಿಎಂ ಶಿವಕುಮಾರ್; ಹೋರಾಟ ಕೈಬಿಡಲು ಮನವಿ

November 19, 2026 6:34 PM
ಬಡವರು, ರೈತರು, ಮಹಿಳೆಯರ ಪರ ನಿಲ್ಲುವ ಏಕೈಕ ಪಕ್ಷ ಕಾಂಗ್ರೆಸ್: ಚಿಕ್ಕಮಗಳೂರಿನಲ್ಲಿ ಸಿದ್ದರಾಮಯ್ಯ; 2029ಕ್ಕೆ ರಾಹುಲ್ ಗಾಂಧಿ ಪರ ಶ್ರಮಿಸಲು ಕರೆ ಹೂವಿನ ಅಲಂಕಾರದ ವೇದಿಕೆಯಲ್ಲಿ ತ್ರಿವರ್ಣ ಶಾಲು ಹಾಕಿದ ನಾಯಕರು ದೀಪ ಬೆಳಗುತ್ತಿರುವುದು

ಬಡವರು, ರೈತರು, ಮಹಿಳೆಯರ ಪರ ನಿಲ್ಲುವ ಏಕೈಕ ಪಕ್ಷ ಕಾಂಗ್ರೆಸ್: ಚಿಕ್ಕಮಗಳೂರಿನಲ್ಲಿ ಸಿದ್ದರಾಮಯ್ಯ; 2029ಕ್ಕೆ ರಾಹುಲ್ ಗಾಂಧಿ ಪರ ಶ್ರಮಿಸಲು ಕರೆ

November 19, 2026 5:52 PM
ಬೆಂಗಳೂರು ಜಾತ್ರೆಯನ್ನು ಜನರ ಜಾತ್ರೆಯಾಗಿ ಆಚರಿಸೋಣ: ಸಿದ್ಧತೆ ಪರಿಶೀಲಿಸಿದ ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಪರಿಶೀಲನಾ ಸಭೆಯ ವೇಳೆ ಸಭಾ ಮೇಜಿನ ಬಳಿ ಕುಳಿತಿರುವ ನಾಲ್ವರು ಅಧಿಕಾರಿಗಳು

ಬೆಂಗಳೂರು ಜಾತ್ರೆಯನ್ನು ಜನರ ಜಾತ್ರೆಯಾಗಿ ಆಚರಿಸೋಣ: ಸಿದ್ಧತೆ ಪರಿಶೀಲಿಸಿದ ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್

November 19, 2026 5:48 PM
ಗುಣಮಟ್ಟ ಕಾಯ್ದುಕೊಂಡು ಡಾಂಬರೀಕರಣ ನಿರ್ವಹಿಸಲು ಸೂಚನೆ: ಧೂಪನಹಳ್ಳಿಯಲ್ಲಿ ಕಾಮಗಾರಿ ಪರಿಶೀಲಿಸಿದ ಕೇಂದ್ರ ನಗರ ಪಾಲಿಕೆ ಆಯುಕ್ತ ಜಗದೀಶ್ ಜಿ ವಸತಿ ರಸ್ತೆಯಲ್ಲಿ ಹೊಸದಾಗಿ ಹಾಕಿದ ಡಾಂಬರಿನ ಮೇಲೆ ಯಂತ್ರದ ಪಕ್ಕ ನಿಂತಿರುವ ಅಧಿಕಾರಿಗಳು

ಗುಣಮಟ್ಟ ಕಾಯ್ದುಕೊಂಡು ಡಾಂಬರೀಕರಣ ನಿರ್ವಹಿಸಲು ಸೂಚನೆ: ಧೂಪನಹಳ್ಳಿಯಲ್ಲಿ ಕಾಮಗಾರಿ ಪರಿಶೀಲಿಸಿದ ಕೇಂದ್ರ ನಗರ ಪಾಲಿಕೆ ಆಯುಕ್ತ ಜಗದೀಶ್ ಜಿ

November 19, 2026 5:48 PM

ನೀವು ತಪ್ಪಿಸಿಕೊಂಡಿರಬಹುದು

ಬೋಲಾಸ್ ಕಡಲೆಕಾಯಿ ಎಣ್ಣೆಯ ಬಾಟಲಿಯನ್ನು ಹಿಡಿದಿರುವ ಕೈ
  • Uncategorized

ತನ್ನ ಕಡಲೆಕಾಯಿ ಎಣ್ಣೆ ಅಸಲಿ ಕೋಲ್ಡ್ ಪ್ರೆಸ್ಡ್, ಇದು ಲೇಬಲ್ ವಿಚಾರ ಮಾತ್ರ ಎಂದ ಬೋಲಾಸ್ ಆಗ್ರೋ; ತಪ್ಪು ಲೇಬಲ್ ಉಲ್ಲೇಖಿಸಿದ್ದ ಆರೋಗ್ಯ ಇಲಾಖೆ ಟಿಪ್ಪಣಿ

The Bengaluru Live November 19, 2026 6:42 PM
ನಗರದ ರಸ್ತೆಯಲ್ಲಿ ಕಂಬಕ್ಕೆ ಒರಗಿದ ಬಿದ್ದಿರುವ ಬ್ಯಾನರ್ ಚೌಕಟ್ಟು; ಹಿಂದೆ ವಾಹನ ಸಂಚಾರ ಮತ್ತು ಕಟ್ಟಡಗಳು

ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾರ್ಡ್ ಒನ್ ಅಭಿಯಾನದಡಿ 273 ಅನಧಿಕೃತ ಫ್ಲೆಕ್ಸ್, ಬ್ಯಾನರ್ ತೆರವು; ದಂಡ, ಕಾನೂನು ಕ್ರಮದ ಎಚ್ಚರಿಕೆ

The Bengaluru Live November 19, 2026 6:37 PM
ಗುಲಾಬಿ ಸೀರೆಯ ಆಶಾ ಕಾರ್ಯಕರ್ತೆಯರ ಪ್ರತಿನಿಧಿಗಳೊಂದಿಗೆ ನಿಂತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಒಬ್ಬ ಸಚಿವ; ಒಬ್ಬರು ಮನವಿ ಪತ್ರ ಹಿಡಿದಿದ್ದಾರೆ

ಆಶಾ ಕಾರ್ಯಕರ್ತೆಯರ ಬಗ್ಗೆ ಸರ್ಕಾರಕ್ಕೆ ಸಹಾನುಭೂತಿ, ಬೇಡಿಕೆಗಳ ಬಗ್ಗೆ ಚಳಿಗಾಲದ ಅಧಿವೇಶನದ ನಂತರ ನಿರ್ಧಾರ: ಸಿಎಂ ಶಿವಕುಮಾರ್; ಹೋರಾಟ ಕೈಬಿಡಲು ಮನವಿ

The Bengaluru Live November 19, 2026 6:34 PM
ಹೂವಿನ ಅಲಂಕಾರದ ವೇದಿಕೆಯಲ್ಲಿ ತ್ರಿವರ್ಣ ಶಾಲು ಹಾಕಿದ ನಾಯಕರು ದೀಪ ಬೆಳಗುತ್ತಿರುವುದು

ಬಡವರು, ರೈತರು, ಮಹಿಳೆಯರ ಪರ ನಿಲ್ಲುವ ಏಕೈಕ ಪಕ್ಷ ಕಾಂಗ್ರೆಸ್: ಚಿಕ್ಕಮಗಳೂರಿನಲ್ಲಿ ಸಿದ್ದರಾಮಯ್ಯ; 2029ಕ್ಕೆ ರಾಹುಲ್ ಗಾಂಧಿ ಪರ ಶ್ರಮಿಸಲು ಕರೆ

The Bengaluru Live November 19, 2026 5:52 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ತನ್ನ ಕಡಲೆಕಾಯಿ ಎಣ್ಣೆ ಅಸಲಿ ಕೋಲ್ಡ್ ಪ್ರೆಸ್ಡ್, ಇದು ಲೇಬಲ್ ವಿಚಾರ ಮಾತ್ರ ಎಂದ ಬೋಲಾಸ್ ಆಗ್ರೋ; ತಪ್ಪು ಲೇಬಲ್ ಉಲ್ಲೇಖಿಸಿದ್ದ ಆರೋಗ್ಯ ಇಲಾಖೆ ಟಿಪ್ಪಣಿ
  • ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾರ್ಡ್ ಒನ್ ಅಭಿಯಾನದಡಿ 273 ಅನಧಿಕೃತ ಫ್ಲೆಕ್ಸ್, ಬ್ಯಾನರ್ ತೆರವು; ದಂಡ, ಕಾನೂನು ಕ್ರಮದ ಎಚ್ಚರಿಕೆ
  • ಆಶಾ ಕಾರ್ಯಕರ್ತೆಯರ ಬಗ್ಗೆ ಸರ್ಕಾರಕ್ಕೆ ಸಹಾನುಭೂತಿ, ಬೇಡಿಕೆಗಳ ಬಗ್ಗೆ ಚಳಿಗಾಲದ ಅಧಿವೇಶನದ ನಂತರ ನಿರ್ಧಾರ: ಸಿಎಂ ಶಿವಕುಮಾರ್; ಹೋರಾಟ ಕೈಬಿಡಲು ಮನವಿ
  • ಬಡವರು, ರೈತರು, ಮಹಿಳೆಯರ ಪರ ನಿಲ್ಲುವ ಏಕೈಕ ಪಕ್ಷ ಕಾಂಗ್ರೆಸ್: ಚಿಕ್ಕಮಗಳೂರಿನಲ್ಲಿ ಸಿದ್ದರಾಮಯ್ಯ; 2029ಕ್ಕೆ ರಾಹುಲ್ ಗಾಂಧಿ ಪರ ಶ್ರಮಿಸಲು ಕರೆ
©Copyright 2025 The Bengaluru Live All rights reserved. | MoreNews by AF themes.