ಬೆಂಗಳೂರು:
ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಎದುರಿಸಲು ಪ್ರತಿ ತಾಲ್ಲೂಕಿನಲ್ಲಿಯೂ ಮಕ್ಕಳಿಗಾಗಿ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.
ಇಂದು ವಿಕಾಸಸೌಧದಲ್ಲಿ ಕೋವಿಡ್ 3ನೇ ಅಲೆ ನಿಯಂತ್ರಣ ಕುರಿತು ಬೆಂಗಳೂರು ನಗರ ಜಿಲ್ಲೆ ಹಾಗೂ ಬಿಬಿಎಂಪಿ ವ್ಯಾಪ್ತಿಯ ಜನ ಪ್ರತಿನಿಧಿಗಳು ಅಧಿಕಾರಿಗಳ ಸಭೆ ನಡೆಸಿ ನಂತರ.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಎರಡನೆ ಅಲೆಯಲ್ಲಿ ಸುಮಾರು 50 ಮಕ್ಕಳು ತಂದೆ ತಾಯಿಯನ್ನು ಕಳೆದುಕೊಂಡಿದ್ದಾರೆ. ಅವರಿಗೆ ಬಾಲ ಸೇವಾ ಯೋಜನೆಯ ಮೂಲಕ ಪ್ರತಿ ತಿಂಗಳು ಮಗುವಿಗೆ 3500 ರೂ. ನೀಡುವುದು, ಅಲ್ಲದೆ ಉಚಿತ ಶಿಕ್ಷಣ ನೀಡುವುದು, 21 ವರ್ಷ ತುಂಬಿದ ಹೆಣ್ಣು ಮಕ್ಕಳಿಗೆ 1 ಲಕ್ಷ ರೂ. ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
@CMofKarnataka | @BSYBJP | @smritiirani | @MinistryWCD | @BJP4India | @BJP4Karnataka | @nalinkateel
— Shashikala Jolle (@ShashikalaJolle) June 21, 2021
ತಂದೆ ತಾಯಿಗಳನ್ನು ಮಕ್ಕಳನ್ನು ನೋಡಿಕೊಳ್ಳಲು ಸಂಬಂಧಿಗಳು ಶಕ್ತರಿಲ್ಲದಿದ್ದರೆ ಇಲಾಖೆ ಮೂಲಕ ದತ್ತು ಸ್ವೀಕಾರ ಕ್ರಮ ಕೈಗೊಳ್ಳಲಾಗುವುದು. ಯಾರಾದರೂ ದಾನಿಗಳು ಅವರ ಜೀವನಕ್ಕೆ ಉಜ್ವಲ ಭವಿಷ್ಯ ರೂಪಿಸಲು ಮುಂದೆ ಬಂದರೆ ಅಂತ ಮಕ್ಕಳ ಭವಿಷ್ಯ ರೂಪಿಸಲು ಇಲಾಖೆ ಕೊಂಡಿಯಾಗಿ ಕೆಲಸ ಮಾಡಲಿದೆ.
ಮೂರನೆ ಅಲೆ ನಿಯಂತ್ರಿಸಲು ಮಹಿಳಾ ಮತ್ತು ಮಕ್ಕಳ ಇಲಾಖೆ, ಆರೋಗ್ಯ, ಶಿಕ್ಷಣ, ಗ್ರಾಮೀಣಾಭಿವೃದ್ದಿ ಮತ್ತು ಪೊಲೀಸ್ ಇಲಾಖೆ ಮಕ್ಕಳನ್ನು ಗುರುತಿಸುವ ಕೆಲಸವನ್ನು ಮಾಡಲಾಗುತ್ತಿದೆ. ಮಕ್ಕಳಿಗೆ ಸೋಂಕು ದೃಢ ಪಟ್ಟರೆ ಕೋವಿಡ್ ಕೇರ್ ಸೆಂಟರ್ ಗೆ ಮಗುವಿನೊಂದಿಗೆ ತಾಯಿಯೂ ಇರಲು ಅವಕಾಶ ಮಾಡಲಾಗಿದೆ. ಯುವತಿಯರಿಗೆ ಪ್ರತ್ಯೇಕವಾಗಿ ವ್ಯವಸ್ಥೆ ಮಾಡಲಾಗುವುದು. ಅಂಗವಿಕಲರಿಗೂ ಪ್ರತ್ಯೇಕ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.