ಬೆಂಗಳೂರು:
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 35,024 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಬೆಂಗಳೂರಿನಲ್ಲಿ ಒಂದೇ ದಿನ 19,637 ಹೊಸ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 143 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಇದೇ ಅವಧಿಯಲ್ಲಿ 270 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 14,74,846 ಕ್ಕೆ ಏರಿದೆ. ರಾಜ್ಯದಲ್ಲಿ ಈಗ 3,49,496 ಸಕ್ರಿಯ ಪ್ರಕರಣಗಳಿವೆ. ಬೆಂಗಳೂರಿನಲ್ಲಿ 2,37,518 ಸಕ್ರಿಯ ಪ್ರಕರಣಗಳಿವೆ.
ಕೋವಿಡ್ ಪ್ರಕರಣಗಳು ದೃಢಪಡುತ್ತಿರುವ ಶೇಕಡಾವಾರು ಪ್ರಮಾಣ 19.92%ಕ್ಕೆ ಏರಿದೆ. ರಾಜ್ಯದಲ್ಲಿ 2,431 ಕೋವಿಡ್ ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೈಸೂರಿನಲ್ಲಿ 1,219, ತುಮಕುರು 1,195, ದಕ್ಷಿಣ ಕನ್ನಡ 1,175, ಕಲಬುರಗಿ 957, ಮಂಡ್ಯ 939, ಬಲ್ಲಾರಿ 896 ಹೊಸ ಪ್ರಕರಣ ದೃಢಪಟ್ಟಿವೆ.