ಬೆಂಗಳೂರು:
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 39,047 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಬೆಂಗಳೂರಿನಲ್ಲಿ ಒಂದೇ ದಿನ 22,596 ಹೊಸ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 137 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಇದೇ ಅವಧಿಯಲ್ಲಿ 229 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 14,39,822ಕ್ಕೆ ಏರಿದೆ. ರಾಜ್ಯದಲ್ಲಿ ಈಗ 3,28,884 ಸಕ್ರಿಯ ಪ್ರಕರಣಗಳಿವೆ. ಬೆಂಗಳೂರಿನಲ್ಲಿ 2,24,152 ಸಕ್ರಿಯ ಪ್ರಕರಣಗಳಿವೆ.
ಇಂದಿನ 28/04/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿhttps://t.co/Em18gTlnzh @CMofKarnataka @BSYBJP @mla_sudhakar @drashwathcn @RAshokaBJP @BSBommai @CPBlr @PIBBengaluru @KarnatakaVarthe @PIBBengaluru @BBMPCOMM @BlrCityPolice @blrcitytraffic pic.twitter.com/OOxHWgL1pH
— K'taka Health Dept (@DHFWKA) April 28, 2021
ಕೋವಿಡ್ ಪ್ರಕರಣಗಳು ದೃಢಪಡುತ್ತಿರುವ ಶೇಕಡಾವಾರು ಪ್ರಮಾಣ 22.70%ಕ್ಕೆ ಏರಿದೆ. ರಾಜ್ಯದಲ್ಲಿ 2,192 ಕೋವಿಡ್ ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೈಸೂರಿನಲ್ಲಿ 1759, ಬಳ್ಳಾರಿಯಲ್ಲಿ 1106, ಹಾಸನದಲ್ಲಿ 1001 ಹೊಸ ಪ್ರಕರಣ ದೃಢಪಟ್ಟಿವೆ.