ಬೆಂಗಳೂರು:
ಕರ್ನಾಟಕದಲ್ಲಿ ಇಂದು 40,741 ಜನ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ನಿಧಾನವಾಗಿ ಕಡಿಮೆಯಾಗುತ್ತಿದ್ದು, ಇಂದು 26,811 ಮಂದಿಗೆ ಸೋಂಕು ತಗುಲಿದ್ದು, 530 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.
ಇಲ್ಲಿಯವರೆಗೆ ರಾಜ್ಯದಲ್ಲಿ 24,997,84 ಮಂದಿಗೆ ಕೊರೊನಾ ಬಂದಿದ್ದು, ಈ ಪೈಕಿ ಒಟ್ಟು 20,62,910 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 4,09,924ಕ್ಕೆ ತಲುಪಿದೆ.
ಇಂದಿನ 26/05/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿhttps://t.co/tlfotWBX9s @CMofKarnataka @BSYBJP @mla_sudhakar @drashwathcn @RAshokaBJP @BSBommai @CPBlr @PIBBengaluru @KarnatakaVarthe @PIBBengaluru @BBMPCOMM @BlrCityPolice @blrcitytraffic pic.twitter.com/r0FgzWY4sV
— K'taka Health Dept (@DHFWKA) May 26, 2021
ಇಂದು 530 ಜನ ಕೊರೊನಾಗೆ ಬಲಿಯಾಗಿದ್ದು, ಈ ವರೆಗೆ ರಾಜ್ಯದಲ್ಲಿ ಒಟ್ಟು 26,929 ಜನ ಸಾವನ್ನಪ್ಪಿದ್ದಾರೆ. ಇಂದು 40,741 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಕೋವಿಡ್ ಸೋಂಕಿನ ಖಚಿತ ಪ್ರಮಾಣ ಶೇ.19.48ರಷ್ಟಿದ್ದು, ಮೃತರ ಪ್ರಮಾಣ ಶೇ.1.97ರಷ್ಟಿದೆ.
ಬೆಂಗಳೂರಿನಲ್ಲಿ 6,433 ಮಂದಿಗೆ ಕೊರೊನಾ ದೃಢಪಟ್ಟಿದ್ದು, 285 ಜನ ಸಾವನ್ನಪ್ಪಿದ್ದಾರೆ. 2,07,357 ಸಕ್ರಿಯ ಪ್ರಕರಣಗಳಿವೆ. ಮೈಸೂರು 2,792, ಹಾಸನ 1,471, ತುಮಕೂರು 1,399, ದಾವಣಗೆರೆ 1,309, ಬೆಳಗಾವಿ 1,205 ಪ್ರಕರಣಗಳು ವರದಿಯಾಗಿವೆ.