Home ಬೆಂಗಳೂರು ನಗರ ಕರ್ನಾಟಕ ರಫ್ತಿನಲ್ಲಿ ನಂಬರ್ ಒನ್ ಸ್ಥಾನಕ್ಕೆ ಏರಬೇಕುಮುಖ್ಯಮಂತ್ರಿ* ಸಿದ್ದರಾಮಯ್ಯ

ಕರ್ನಾಟಕ ರಫ್ತಿನಲ್ಲಿ ನಂಬರ್ ಒನ್ ಸ್ಥಾನಕ್ಕೆ ಏರಬೇಕುಮುಖ್ಯಮಂತ್ರಿ* ಸಿದ್ದರಾಮಯ್ಯ

23
0
Karnataka should rise to number one position in exports: Chief Minister Siddaramaiah
Karnataka should rise to number one position in exports: Chief Minister Siddaramaiah

ಬೆಂಗಳೂರು:

ಮಹಾರಾಷ್ಟ್ರ ಮತ್ತು ತಮಿಳುನಾಡು ಒಂದು ಮತ್ತು 2 ನೇ ಸ್ಥಾನದಲ್ಲಿವೆ. ಕರ್ನಾಟಕ ರಫ್ತಿನಲ್ಲಿ ನಂಬರ್ ಒನ್ ಸ್ಥಾನಕ್ಕೆ ಏರಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವಿಧಾನಸೌಧದಲ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಇಂದು ಆಯೋಜಿಸಿದ್ದ ರಾಜ್ಯ ಶ್ರೇಷ್ಠ ರಫ್ತು ಪ್ರಶಸ್ತಿಗಳ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ಕೌಶಲ್ಯಾಭಿವೃದ್ಧಿ ಇಲಾಖೆಗೆ ಶಕ್ತಿ

ಕರ್ನಾಟಕ ರಫ್ತು ಮಾಡುವುದರಲ್ಲಿ ಮೊದಲಿನಿಂದಲೂ ಮುಂಚೂಣಿ ಯಲ್ಲಿದೆ. ಕೈಗಾರಿಕೆಗಳ ಅಭಿವೃದ್ಧಿ ಯಾಗಬೇಕೆಂದು ಕೌಶಲ್ಯ ತರಬೇತಿಯುಳ್ಳ ಕಾರ್ಮಿಕರಿದ್ದರೆ ಕೈಗಾರಿಕಾ ಬೆಳವಣಿಗೆಗೆ ಅನುಕೂಲ ವಾಗುತ್ತದೆ ಎಂಬ ದೃಷ್ಟಿಯಿಂದ ಕೌಶಲ್ಯಾಭಿವೃದ್ಧಿ ಇಲಾಖೆ ಪ್ರಾರಂಭಿಸಲಾಗಿತ್ತು. ಈಗ ಅದಕ್ಕೆ ಶಕ್ತಿ ತುಂಬುವ ಕೆಲಸ ಮಾಡಲಾಗುವುದು.

ಕರ್ನಾಟಕದ ಕೈಗಾರಿಕಾ ನೀತಿ ಹೆಚ್ಚು ಪ್ರಗತಿಪರವಾಗಿದೆ

ಹೊಸ ಕೈಗಾರಿಕಾ ನೀತಿಯನ್ನು ಸರ್ಕಾರ ಘೋಷಣೆ ಮಾಡಿದಾಗ ಕೈಗಾರಿಕೋದ್ಯಮಿಗಳು ನೀತಿಯನ್ನು ಬೆಂಬಲಿಸಿ ಅದನ್ನು ಸ್ವಾಗತಿಸಿದರು. ಈಗಲೂ ಎಲ್ಲರೊಂದಿಗೆ ಚರ್ಚೆ ಮಾಡಿ ರಫ್ತು ಬೆಳವಣಿಗೆಗೆ ಪೂರಕವಾದಂಥ ಕೈಗಾರಿಕಾ ನೀತಿಯನ್ನು ರೂಪಿಸಲು ಕ್ರಮ ವಹಿಸಲಾಗುವುದು ಎಂದರು.

ಎಂ.ಬಿ.ಪಾಟಲ್ ಅವರು ಕೈಗಾರಿಕಾ ಇಲಾಖೆಯ ನೇತೃತ್ವವನ್ನು ವಹಿಸಿದ್ದು, ಕರ್ನಾಟಕದಲ್ಲಿ ಕೈಗಾರಿಕಾ ಬೆಳವಣಿಗೆ ಆಗಬೇಕು ಎನ್ನುವ ಆಶಯವನ್ನು ಹೊಂದಿದ್ದು, ಕರ್ನಾಟಕ ಸರ್ಕಾರ ಎಲ್ಲ ರೀತಿಯ ಬೆಂಬಲವನ್ನು ಉದ್ಯಮಿಗಳಿಗೆ ನೀಡಲಿದೆ ಎಂದು ಭರವಸೆ ನೀಡಿದರು.

ಮಾರುಕಟ್ಟೆ ಯಲ್ಲಿ ಬೇಡಿಕೆಯಲ್ಲಿರುವ ಉದ್ಯೋಗಿಗಳನ್ನು ತಯಾರು ಮಾಡಲಾಗುವುದು

ಕೈಗಾರಿಕೆ ಬೆಳೆದರೆ ನಿರುದ್ಯೋಗ ಸಮಸ್ಯೆ ನಿವಾರಣೆಯಾಗಿ ದೇಶದ ಆರ್ಥಿಕತೆ ಬೆಳೆಯಲು ನೆರವಾಗಲಿದೆ. ಜಿಡಿಪಿ ಬೆಳೆದು ರಾಜ್ಯ ಬೆಳೆಯಲು ಸಾಧ್ಯವಾಗಿ ರಾಷ್ಟ್ರದ ಜಿಡಿಪಿಗೆ ದೊಡ್ಡ ಕೊಡುಗೆಯನ್ನು ರಾಜ್ಯದಿಂದ ಕೇಂದ್ರಕ್ಕೆ ಕೊಡಲು ಸಾಧ್ಯವಾಗುತ್ತದೆ. ಇವೆಲ್ಲ ಒಂದಕ್ಕೊಂದು ಸಂಬಂಧ ಹೊಂದಿದೆ. ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ ಹೂಡಿಕೆಗಳು ಬರುತ್ತವೆ. ಹೂಡಿಕೆಗಳು ಬಂದಲ್ಲಿ ಕೈಗಾರಿಕೆಗಳು ಬಂದು ನಿರುದ್ಯೋಗ ನಿವಾರಣೆಯಾಗುತ್ತದೆ. ಕರ್ನಾಟಕದ ಲ್ಲಿ ಉತ್ತಮ ಕಾನೂನು ಸುವ್ಯವಸ್ಥೆ ಕಲ್ಪಿಸಲಾಗುವುದು. ಮಾರುಕಟ್ಟೆ ಯಲ್ಲಿ ಬೇಡಿಕೆಯಲ್ಲಿರುವ ಉದ್ಯೋಗಿಗಳನ್ನು ಸೃಷ್ಟಿ ಮಾಡುವ ಕೆಲಸವನ್ನು ಸರ್ಕಾರ ಮಾಡುತ್ತದೆ. ಶ್ರೇಷ್ಠ ರಫ್ತು ಮಾಡಿ ರಾಜ್ಯಕ್ಕೆ ಕೀರ್ತಿ ತಂದಿರುವ ರಫ್ತುದಾರರನ್ನು ಅಭಿನಂದಿಸಿದರು.

ನಿರುದ್ಯೋಗ ಸಮಸ್ಯೆ ನಿವಾರಣೆಗೆ ಕ್ರಮ

ಸರ್ಕಾರ 5 ಗ್ಯಾರಂಟಿ ಗಳನ್ನು ಘೋಷಿಸಿದ್ದು, ಯುವನಿಧಿಯಡಿಯಲ್ಲಿ 2022-23 ರಲ್ಲಿ ಪದವೀಧರರಾಗಿ ನಿರುದ್ಯೋಗಿ ಗಳಾಗಿರುವವರಿಗೆ ಮೂರು ಸಾವಿರ ರೂ.ಗಳ ನಿರುದ್ಯೋಗ ಭತ್ಯೆಯನ್ನು ನೀಡಲಾಗುವುದು.ಡಿಪ್ಲೊಮಾ ಹೊಂದಿದವರಿಗೂ 1500 ರೂ.ಗಳ ಭತ್ಯೆಯನ್ನು ನೀಡಲಾಗುವುದು. ಬಹುತೇಕ ಡಿಸೆಂಬರ್ ತಿಂಗಳಿನಲ್ಲಿ ಪ್ರಾರಂಭವಾಗಲಿದೆ. ಕೌಶಲ್ಯ ಇಲಾಖೆಯಿಂದ ಕೈಗಾರಿಕೆಗಳಿಗೆ ಅಗತ್ಯವಿರುವ ಉದ್ಯೋಗಿಗಳನ್ನು ತಯಾರು ಮಾಡುವ ಸಲುವಾಗಿ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು. ಮಾರುಕಟ್ಟೆಗೆ ಸೂಕ್ತವಾಗಿರುವ ಉದ್ಯೋಗಿಗಳನ್ನು ತಯಾರು ಮಾಡಿದರೆ ನಿರುದ್ಯೋಗ ಸಮಸ್ಯೆ ಬಗೆಹರಿಯಲಿದೆ ಎಂದರು.

ರಾಜ್ಯದಲ್ಲಿ ಉದ್ದಿಮೆಗಳ ಪ್ರಾರಂಭಕ್ಕೆ ಹಾಗೂ ಕೈಗಾರಿಕೆಗಳಿಗೆ ಪ್ರೋತ್ಸಾಹದಾಯಕ ವಾತಾವರಣ

ಇಂದು 68 ಉದ್ದಿಮೆಗಳಿಗೆ ಶ್ರೇಷ್ಠ ರಫ್ತು ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗಿದೆ. ರಫ್ತು ನಲ್ಲಿ ಸಾಧನೆ ಮಾಡಿರುವ ಉದ್ದಿಮೆಗಳಿಗೆ 1992-93 ರಿಂದ ಶ್ರೇಷ್ಠ ರಫ್ತು ಪ್ರಶಸ್ತಿಗಳನ್ನು ನೀಡುವ ಪರಿಪಾಠ ಪ್ರಾರಂಭಿಸಲಾಗಿದೆ. ರಾಜ್ಯ ಹಾಗೂ ಜಿಲ್ಲಾ ಮಟ್ಟದ ಉದ್ದಿಮೆಗಳನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿ ವಿಜೇತರು ಇತರ ಉದ್ದಿಮೆದಾರರಿಗೆ ಮಾದರಿ ಹಾಗೂ ಸ್ಪೂರ್ತಿಯಾಗಿದ್ದಾರೆ. ರಾಜ್ಯದಲ್ಲಿ ಉದ್ದಿಮೆಗಳ ಪ್ರಾರಂಭಕ್ಕೆ ಹಾಗೂ ಕೈಗಾರಿಕೆಗಳಿಗೆ ಪ್ರೋತ್ಸಾಹದಾಯಕ ವಾತಾವರಣ ಇದೆ. ಕರ್ನಾಟಕದಲ್ಲಿ ಸುಮಾರು 80ರ ದಶಕದಲ್ಲಿ ಕೈಗಾರಿಕಾ ನೀತಿ ರೂಪಿಸುವತ್ತ ಹೆಜ್ಜೆ ಇಡಲಾಗಿತ್ತು ಎಂದು ತಿಳಿಸಿದರು.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್, ಶಾಸಕರಾದ ರಿಜ್ವಾನ್ ಅರ್ಷದ್, ಶಾಮನೂರು ಶಿವಶಂಕರಪ್ಪ, ಕೆ. ಗೋವಿಂದರಾಜ್, ಕೈಗಾರಿಕಾ ಇಲಾಖೆ ಕಾರ್ಯದರ್ಶಿ ಡಾ.ಎಸ್. ಸೆಲ್ವಕುಮಾರ್, ಆಯುಕ್ತರಾದ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here