ಬೆಂಗಳೂರು:
2023-24ನೇ ಸಾಲಿನ ಎಸ್.ಎಸ್.ಎಲ್.ಸಿ.ಮತ್ತು ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆ-1 ರತಾತ್ಕಾಲಿಕ ವೇಳಾಪಟ್ಟಿಯನ್ನು ಜಾಲತಾಣದಲ್ಲಿ ದಿನಾಂಕ: 01-12-2023 (ಶುಕ್ರವಾರ)ರಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ.
ರಾಜ್ಯದ ‘ಎಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳು ತಮ್ಮ ಶಾಲಾ/ಕಾಲೇಜುಗಳ “ಪ್ರಕಟಣಾ ಫಲಕ”ದಲ್ಲಿ ವೇಳಾಪಟ್ಟಿಯನ್ನು ಪ್ರಕಟಿಸಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲು ತಿಳಿಸಿದೆ.
ಮಂಡಳಿಯಿಂದ ಪ್ರಕಟಿಸಿರುವ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆ-1 ರ ತಾತ್ಕಾಲಿಕ ವೇಳಾಪಟ್ಟಿಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ದಿನಾಂಕ:01-12-2023 ರಿಂದ 15-12-2023 ರವರೆಗೆ 15 ದಿನಗಳ ಕಾಲಾವಕಾಶವನ್ನು ನೀಡಲಾಗಿರುತ್ತದೆ.
ಆಕ್ಷೇಪಣೆಗಳಿದ್ದಲ್ಲಿ : chairpersonkseab@gmail.com ಗೆ ಹಾಗೂ ಹಾರ್ಡ್ ಪ್ರತಿಯನ್ನು ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-560003 ಇಲ್ಲಿಗೆ ನಿಗದಿತ ಸಮಯದೊಳಗಾಗಿ ಕಳುಹಿಸಬೇಕು. ನಿಗದಿಪಡಿಸಿರುವ ಕೊನೆಯ ದಿನಾಂಕದ ನಂತರ ಬರುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ.