Home ಬೆಂಗಳೂರು ನಗರ Karnataka State Contractor Association: ಕಳೆದ 5 ತಿಂಗಳುಗಳಿಂದ ಬಿಲ್‌ಗಳನ್ನು ಪಾವತಿಸಲಾಗಿಲ್ಲ, ಬಾಕಿ ಪಾವತಿ ಮಾಡಲು...

Karnataka State Contractor Association: ಕಳೆದ 5 ತಿಂಗಳುಗಳಿಂದ ಬಿಲ್‌ಗಳನ್ನು ಪಾವತಿಸಲಾಗಿಲ್ಲ, ಬಾಕಿ ಪಾವತಿ ಮಾಡಲು 30 ದಿನಗಳ ಗಡುವು

13
0
Karnataka State Contractor Association | Bills unpaid for last 5 months, 30 days deadline for payment of arrears
Karnataka State Contractor Association | Bills unpaid for last 5 months, 30 days deadline for payment of arrears
Advertisement
bengaluru

ಬೆಂಗಳೂರು :

ತನಿಖೆ ಹೆಸರಲ್ಲಿ ಬಾಕಿ ಹಣ ತಡೆಹಿಡಿದಿರುವ ಕಾಂಗ್ರೆಸ್ ನಡೆ ಸರಿಯಲ್ಲ. ಕಳೆದ 5 ತಿಂಗಳಿಂದ ಬಿಲ್ ಪಾವತಿ ಆಗ್ತಿಲ್ಲ ಬಾಕಿ ಬಿಲ್​ ಪಾವತಿಸುವಂತೆ ನಾಲ್ಕು ನಾಲ್ಕು ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದೇವೆ. ಅದರೆ ಇದುವರೆಗೆ ಪಾವತಿ ಮಾಡಿಲ್ಲ. ರಾಜ್ಯ ಸರ್ಕಾರದಿಂದ ಇನ್ನೂ 20 ಸಾವಿರ ಕೋಟಿ ರೂ. ಬಾಕಿ ಬರಬೇಕಿದೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹೇಳಿದರು.

ಬೆಂಗಳೂರಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಲಸಂಪನ್ಮೂಲ, ಸಣ್ಣ ನೀರಾವರಿ, ಲೋಕೋಪಯೋಗಿ ಇಲಾಖೆ, ಗ್ರಾಮೀಣಾಭಿವೃದ್ಧಿ ಸೇರಿದಂತೆ ಹಲವು ಇಲಾಖೆಗಳಿಂದ ಬಾಕಿ ಬರಬೇಕು. ಇಂದಿನಿಂದ ಸರ್ಕಾರಕ್ಕೆ 30 ದಿನ ಗಡವು ನೀಡುವುತ್ತೇವೆ. ಕರೆದು ಮಾತನಾಡಿ ಬಗೆ ಹರಿಸಬೇಕು. ಇಲ್ಲವಾದರೆ ಹೋರಾಟ ಅನಿವಾರ್ಯ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಕೆಂಪಣ್ಣ.

20 ಸಾವಿರ ಕೋಟಿ ಬಾಕಿ ಬರಬೇಕಿದೆ. ಜಲಸಂಪನ್ಮೂಲ, ಸಣ್ಣ ನೀರಾವರಿ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆ ಸೇರಿದಂತೆ ಹಲವು ಇಲಾಖೆಗಳಲ್ಲಿ ಬಾಕಿ ಬರಬೇಕು. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ತನಿಖೆ ಹೆಸರಲ್ಲಿ ಬಾಕಿ ಹಣ ತಡೆಹಿಡಿಯಲಾಗಿದೆ. ಸರ್ಕಾರ ತನಿಖೆ ಅಂತ ಮೂರು ವರ್ಷ ಅವಧಿ ಹೇಳಿದೆ. ಮೂರು ವರ್ಷ ಅಂದ್ರೆ ಹೇಗೆ..? ಎಂದು ಪ್ರಶ್ನಿಸಿದ್ದಾರೆ.

bengaluru bengaluru

ಕೆಲವು ಇಲಾಖೆಯಲ್ಲಿ ಶೇ 7ರಷ್ಟು ಹಣ ಬಿಡುಗಡೆ ಮಾಡಿದ್ದಾರೆ. ಇತ್ತ ತಮಗೆ ಬೇಕಾದ ಕೆಲ ಗುತ್ತಿಗೆದಾರರಿಗೆ ಹಣ ಬಿಡುಗಡೆ ಮಾಡ್ತಿದ್ದಾರೆ. ಈ ಬಗ್ಗೆ ಕೇಳಿದರೆ ನಮಗೆ ಗೊತ್ತಿಲ್ಲ ಎಂದು ಇಂಜಿನಿಯರ್‌ಗಳು ಹೇಳುತ್ತಿದ್ದಾರೆ. ಕೆಲ ಗುತ್ತಿಗೆದಾರರು ಶಿಫಾರಸು ಪತ್ರ ತಂದರೆ ಕಮಿಷನ್ ಪಡೆದು ರಾತ್ರೋರಾತ್ರಿ ಚೆಕ್ ನೀಡುತ್ತಿದಾರೆ ಎಂದು ಆರೋಪಿಸಿದರು.

ಗುತ್ತಿಗೆದಾರರು ಸಾಲ ಸೋಲ ಮಾಡಿ ಖಾಸಗಿ ಲೇವಾದೇವಿಗಳ ಬಳಿ ಅಸ್ತಿ ಪತ್ರ ಅಡವಿಟ್ಟು ಕಾಮಗಾರಿ ಮಾಡಿದ್ದಾರೆ. ಅದೆಷ್ಟೋ ಗುತ್ತಿಗೆದಾರರು ಸಾಲಗಾರರ ಕಾಟಕ್ಕೆ ಊರು ಬಿಟ್ಟಿದ್ದಾರೆ. ಸರ್ಕಾರ ಒಂದು ತಿಂಗಳಲ್ಲಿ ಬಾಕಿ ಮೊತ್ತ ಶೇಕಡಾ 50ರಷ್ಟು ಬಿಡುಗಡೆ ಮಾಡಬೇಕು. ಇಲ್ಲವಾದರೆ ಸಂಪೂರ್ಣ ರಾಜ್ಯದಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಆ ನಂತರ ಕೆಲವು ಇಲಾಖೆಗಳಲ್ಲಿ ಶೇಕಡಾ 7ರಷ್ಟು ಹಣ ಬಿಡುಗಡೆ ಮಾಡಿದ್ದಾರೆ. ಒಂದು ತಿಂಗಳಲ್ಲಿ ಶೇ.50ರಷ್ಟು ಬಾಕಿ ಮೊತ್ತ ಬಿಡುಗಡೆ ಮಾಡಬೇಕು. ತಮಗೆ ಬೇಕಾದ ಕೆಲ ಗುತ್ತಿಗೆದಾರರಿಗೆ ಮಾತ್ರ ಹಣ ಬಿಡುಗಡೆ ಮಾಡುತ್ತಿದ್ದಾರೆ. ಈ ಬಗ್ಗೆ ಕೇಳಿದರೇ ಗೊತ್ತಿಲ್ಲ ಅಂತಾ ಇಂಜಿನಿಯರ್​​​ಗಳು ಹೇಳುತ್ತಿದ್ದಾರೆ. ಗುತ್ತಿಗೆದಾರರ ಬಾಕಿ ಬಿಲ್​ ಪಾವತಿ ಮಾಡದಿದ್ದರೇ ಪ್ರತಿಭಟನೆ ಮಾಡುತ್ತೇವೆ. ಈ ಬಗ್ಗೆ ಸಿಎಂ ಅವರಿಗೆ ಪತ್ರ ಬರೆಯುತ್ತೇವೆ, ಪ್ರಧಾನ ಮಂತ್ರಿಗೂ ಪತ್ರ ಬರೆಯುತ್ತೇವೆ ಎಂದರು.


bengaluru

LEAVE A REPLY

Please enter your comment!
Please enter your name here