ಬೆಂಗಳೂರು:
ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಸಂಜೆ 4.30ಕ್ಕೆ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುರೇಶ್ ಕುಮಾರ್ ಅವರು ಇಲಾಖೆಯ ವೆಬ್ ಸೈಟ್ ನಲ್ಲಿ ಪಿಯುಸಿ ಫಲಿತಾಂಶ ಪ್ರಕಟವಾಗಲಿದ್ದು, ಗ್ರೇಡ್ ಬದಲಿಗೆ ಅಂಕಗಳನ್ನೇ ನೀಡಲು ಪಿಯುಸಿ ಬೋರ್ಡ್ ನಿರ್ಧಾರ ಮಾಡಿದೆ. ಹೀಗಾಗಿ ಅಂಕಗಳ ಮಾದರಿಯಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂಬುದಾಗಿ ತಿಳಿಸಿದ್ದಾರೆ.