Home ರಾಮನಗರ ರಾಜ್ಯದಲ್ಲಿ ದೇಶಕ್ಕೆ ಮಾದರಿ ಸ್ಕಿಲ್‌ ಹಬ್: ಡಾ.ಸಿ.ಎನ್.‌ ಅಶ್ವತ್ಥನಾರಾಯಣ

ರಾಜ್ಯದಲ್ಲಿ ದೇಶಕ್ಕೆ ಮಾದರಿ ಸ್ಕಿಲ್‌ ಹಬ್: ಡಾ.ಸಿ.ಎನ್.‌ ಅಶ್ವತ್ಥನಾರಾಯಣ

84
0
Karnataka to be Model Skill Hub for Country: Ashwatharayan

ರಾಮನಗರ:

ರಾಜ್ಯದಲ್ಲಿ ಹೆಚ್ಚೆಚ್ಚು ಪ್ರಮಾಣದಲ್ಲಿ ಕೌಶಲ್ಯಯುಕ್ತ ಉದ್ಯೋಗ ಸೃಷ್ಟಿ ಮಾಡುವ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ದೇಶದಲ್ಲಿಯೇ ಅತ್ಯಂತ ಮಾದರಿಯಾದ ಸ್ಕಿಲ್‌ ಹಬ್ (Skill Hub)‌ ಆರಂಭ ಮಾಡಲಾಗುವುದು ಎಂದು ಸಚಿವ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು.

ರಾಮನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ಬೆಳಗ್ಗೆ 75ನೇ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಧ್ವಜಾರೋಹಣ ನೆರೆವೇರಿಸಿ ಭಾಷಣ ಮಾಡಿದ ಉನ್ನತ ಶಿಕ್ಷಣ, ಐಟಿ-ಬಿಟಿ, ವಿಜ್ಞಾನ-ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಖಾತೆ ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಅವರು; ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ನಿರುದ್ಯೋಗವನ್ನು ಹತ್ತಿಕ್ಕಲು ಹಾಗೂ ಕೈಗಾರಿಕೆಗಳಿಗೆ ಅತ್ಯುತ್ತಮ ಗುಣಮಟ್ಟದ ಕುಶಲತೆಯುಳ್ಳ ಮಾನವ ಸಂಪನ್ಮೂಲವನ್ನು ಒದಗಿಸುವ ನಿಟ್ಟಿನಲ್ಲಿ ಸ್ಕಿಲ್‌ ಹಬ್‌ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂದರು.

ರಾಮನಗರ ಜಿಲ್ಲಾ ಕೇಂದ್ರದಲ್ಲೂ ಸ್ಕಿಲ್‌ ಹಬ್‌ ಸ್ಥಾಪನೆ ಮಾಡಲಾಗುವುದು ಎಂದ ಅವರು ; ಯಾರೇ ಉತ್ಸಾಹಿ ತರುಣರು, ತರುಣಿಯರು ಜೀವನದಲ್ಲಿ ಮುಂದೇನು ಮಾಡಬೇಕು ಎಂಬ ಪ್ರಶ್ನೆ ಬಂದಾಗ ಸ್ಕಿಲ್‌ ಹಬ್‌ಗೆ ಬಂದರೆ ಸಾಕು, ಅವರಿಗೆ ಸೂಕ್ತ ‌ಮಾರ್ಗದರ್ಶನ ನೀಡಿ- ಕೈಹಿಡಿದು ಮುನ್ನಡೆಸಲಾಗುವುದು ಎಂದು ಅವರು ನುಡಿದರು.

ಅಲ್ಲದೆ; ವಿದ್ಯಾಭ್ಯಾಸದ ಕರಿಯರ್‌ ಮಾರ್ಗದರ್ಶನ ಹಾಗೂ ಕುಶಲ ತರಬೇತಿಯ ಬಗ್ಗೆಯೂ ಇಲ್ಲಿಯೇ ಮಾರ್ಗದರ್ಶನ ಸಿಗುತ್ತದೆ ಎಂದು ಅವರು ಹೇಳಿದರು.

ಜತೆಗೆ; ಸ್ಕಿಲ್ ಕನೆಕ್ಟ್ ಕಾರ್ಯಕ್ರಮದ ಮೂಲಕ ದ್ಯೋಗಾಂಕ್ಷಿಗಳು-ಉದ್ಯೋಗಧಾತರ ಸಂಪರ್ಕಕ್ಕೆ ವೇದಿಕೆ ಕಲ್ಪಿಸುವುದರ ಜತೆಗೆ; ಖಾಸಗಿ ಸಹಭಾಗಿತ್ವದಲ್ಲಿ ರಾಜ್ಯದ 150 ಸರಕಾರಿ ಐಟಿಐಗಳನ್ನು ಜಾಗತಿಕ ಮಟ್ಟದಲ್ಲಿ ಅಭಿವೃದ್ಧಿ ಮಾಡಲಾಗುತ್ತಿದೆ ಎಂದ ಅವರು; 315 ಮಿನಿ ಉದ್ಯೋಗ ಮೇಳಗಳಿಂದ 25,360 ಅಭ್ಯರ್ಥಿಗಳಿಗೆ ಉದ್ಯೋಗ ನೇಮಕಾತಿ ಪತ್ರ ನೀಡಲಾಗಿದೆ ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು

ಇನ್ನು, ಗ್ರಾಮೀಣ ಮಹಿಳೆಯರ ಆರ್ಥಿಕ ಶಕ್ತಿ ಹೆಚ್ಚಿಸುವ ನಿಟ್ಟಿನಲ್ಲಿ ಎನ್.ಆರ್.ಎಲ್.ಎಂ ಯೋಜನೆಯಡಿ 6 ಲಕ್ಷ ಸ್ವ-ಸಹಾಯ ಗುಂಪುಗಳಿಗೆ 13,700 ಕೋಟಿ ರೂ.ಗಳ ಬ್ಯಾಂಕ್ ಸಾಲ ನೀಡುವುದರ ಜತೆಗೆ, 59,323 ಸ್ವ ಸಹಾಯ ಗುಂಪುಗಳಿಗೆ 524 ಕೋಟಿ ರೂ.ಗಳ ಸಮುದಾಯ ಬಂಡವಾಳ ನಿಧಿ ಕೊಡಲಾಗಿದೆ. ಆರ್ಥಿಕ ಸಂಕಷ್ಟದಲ್ಲಿದ್ದ 2.16 ಲಕ್ಷ ಬೀದಿಬದಿ ವ್ಯಾಪಾರಿಗಳಿಗೆ ತಲಾ 2,000 ರೂ.ಗಳ ಆರ್ಥಿಕ ನೆರವು ನೀಡಲಾಗಿದೆ ಎಂದು ಅವರು ಹೇಳಿದರು.

LEAVE A REPLY

Please enter your comment!
Please enter your name here